ಪ್ಯಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯಿಂದ ಎಚ್ಚರಿಕೆ
ಪ್ಯಾನ್ ಕಾರ್ಡ್ಗ ಗೆ ಸಂಬಂಧ ಪಟ್ಟ ಕುರಿತ ಈ ವಿಷಯ ಇದಾಗಿದ್ದು, ನಿಮ್ಮ ಪ್ಯಾನ್ ಕಾರ್ಡ್ ನಿಷ್ಪ್ರಯೋಜಕವಾಗುವ ಸಾಧ್ಯತೆ ಇದೆ. ಪ್ಯಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ಒಂದನ್ನು ನೀಡಿದೆ. ಆಧಾರ್ ನೊಂದಿಗೆ ಪ್ಯಾನ್ ಲಿಂಕ್ ಮಾಡುವುದು ಅಗತ್ಯ ಇಲ್ಲವಾದಲ್ಲಿ ನಿಮ್ಮ ಕೈಯ್ಯಲ್ಲಿರುವ ಪ್ಯಾನ್ ನಿಷ್ಪ್ರಯೋಜಕವಾಗಲಿದೆ ಆದಾಯ ತೆರಿಗೆ ಇಲಾಖೆ ತಿಳಿಸಿದೆ.
ಪ್ಯಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ನೀಡಿರುವ ಎಚ್ಚರಿಕೆಯ ಪ್ರಕಾರ, ಮಾರ್ಚ್ 31, 2023 ರೊಳಗೆ ಆಧಾರ್‌ನೊಂದಿಗೆ ಪ್ಯಾನ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ಜೊತೆ ಲಿಂಕ್ ಮಾಡದಿದ್ದರೆ, ಪ್ಯಾನ್ ಅಮಾನ್ಯವಾಗುತ್ತದೆ. ಪ್ಯಾನ್ ಕಾರ್ಡ್ ಬಳಕೆಯನ್ನು ನಿಷೇಧಿಸಲಾಗುವುದು. ಆದರೆ, ಈಗಾಗಲೇ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಿದ್ದರೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ.
ಮಾರ್ಚ್ ತಿಂಗಳ ಒಳಗೆ ಆಧಾರ್ ಜೊತೆ ಪ್ಯಾನ್ ಲಿಂಕ್ ಮಾಡುವುದನ್ನು ಯಾವುದೇ ಕಾರಣಕ್ಕೂ ವಿಳಂಬ ವಿಳಂಬ ಮಾಡಿದಲ್ಲಿ ನಿಮ್ಮ ಕೈಯ್ಯಲ್ಲಿರುವ ಪ್ಯಾನ್ ನಿಷ್ಪ್ರಯೋಜಕವಾಗಲಿದೆ.
ಈ ಲಿಂಕ್ ಪ್ರಕ್ರಿಯೆಯು ಸರ್ಕಾರ ಮತ್ತು ತೆರಿಗೆದಾರರಿಗೆ ಪ್ರಯೋಜನವನ್ನು ನೀಡುತ್ತದೆ. ಅದಲ್ಲದೆ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದರಿಂದ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್‌ಗಳನ್ನು ಹೊಂದಿರುವ ಜನರನ್ನು ಗುರುತಿಸುವುದು ಸುಲಭವಾಗುತ್ತದೆ. ಪ್ಯಾನ್ ಅನ್ನು ಆಧಾರ್‌ಗೆ ಲಿಂಕ್ ಮಾಡಿದರೆ, ಆದಾಯ ತೆರಿಗೆ ರಿಟರ್ನ್ ಪ್ರಕ್ರಿಯೆ ಮತ್ತು ಪರಿಶೀಲನೆ ಸುಲಭವಾಗುತ್ತದೆ ಎಂಬ ಉದ್ದೇಶವನ್ನು ಆದಾಯ ತೆರಿಗೆ ಇಲಾಖೆ ಹೊಂದಿದೆ
ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವ ವಿಧಾನ :
- ಮೊದಲು ಆದಾಯ ತೆರಿಗೆ ಇ-ಪೋರ್ಟಲ್ (incometaxindiaefiling.gov.in) ತೆರೆಯಿರಿ.
- ನಂತರ, ಯೂಸರ್ ಐಡಿ, ಪಾಸ್ವರ್ಡ್ ಮತ್ತು ಜನ್ಮ ದಿನಾಂಕದ ಸಹಾಯದಿಂದ ಲಾಗಿನ್ ಮಾಡಿ.
- ಪ್ರೊಫೈಲ್ ಸೆಟ್ಟಿಂಗ್‌ಗಳ ಮೆನು ಬಾರ್‌ಗೆ ಹೋಗಿ ಮತ್ತು ಲಿಂಕ್ ಆಧಾರ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
- ಇಲ್ಲಿ PAN ಪ್ರಕಾರ ನೀಡಲಾದ ಹುಟ್ಟಿದ ದಿನಾಂಕ, ಲಿಂಗದ ಬಗ್ಗೆ ಮಾಹಿತಿ ಕಾಣಿಸುತ್ತದೆ .
- ಸ್ಕ್ರೀನ್ ಮೇಲೆ ಆಧಾರ್ ವಿವರಗಳ ಸಹಾಯದಿಂದ ಪ್ಯಾನ್ ವಿವರಗಳನ್ನು ಪರಿಶೀಲಿಸಿ.
- ವಿವರಗಳನ್ನು ಹೋಲಿಕೆ ಮಾಡಿದ ನಂತರ ಆಧಾರ್ ಸಂಖ್ಯೆಯನ್ನು ನಮೂದಿಸಿ ಲಿಂಕ್ ಅನ್ನು ಕ್ಲಿಕ್ ಮಾಡಿ.
- ಇಷ್ಟಾದ ಮೇಲೆ ಪ್ಯಾನ್ ಮತ್ತು ಆಧಾರ್‌ಗೆ ಲಿಂಕ್ ಮಾಡಲಾಗಿದೆ ಎನ್ನುವ ಮೆಸ್ಸೇಜ್ ಬರುತ್ತದೆ.
ಸದ್ಯ ಈ ಪ್ರಕ್ರಿಯೆಗೆ 1000 ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ. ಐಟಿ ಇಲಾಖೆಯ ಸಲಹೆಯ ಪ್ರಕಾರ, ಮಾರ್ಚ್ 31, 2023 ರೊಳಗೆ ಪ್ಯಾನ್-ಆಧಾರ್ ಅನ್ನು ಲಿಂಕ್ ಮಾಡಲು ವಿಫಲವಾದರೆ, ನಂತರ ಈ ಗಡುವನ್ನು ವಿಸ್ತರಿಸಲಾಗುವುದಿಲ್ಲ. ಇದಾದ ಬಳಿಕ ಪ್ಯಾನ್ ನಿಷ್ಕ್ರಿಯವಾಗಲಿದೆ.
ಮುಖ್ಯವಾಗಿ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವ ಅನಿವಾರ್ಯ. ಆದರೂ ಕೆಲವರಿಗೆ ಈ ಪ್ರಕ್ರಿಯೆಯಿಂದ ವಿನಾಯಿತಿ ನೀಡಲಾಗಿದೆ. ಅಸ್ಸಾಂ, ಜಮ್ಮು-ಕಾಶ್ಮೀರ ಮತ್ತು ಮೇಘಾಲಯದಲ್ಲಿ ವಾಸಿಸುವ ಜನರು, 80 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಭಾರತದ ಪ್ರಜೆಗಳಲ್ಲದವರಿಗೆ ಈ ಪ್ರಕ್ರಿಯೆಯಿಂದ ವಿನಾಯಿತಿ ನೀಡಲಾಗಿದೆ ಎಂದು ಮಾಹಿತಿ ನೀಡಲಾಗಿದೆ.