ಆನ್ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದು ಯುವತಿ ಸಾವು!!!

ಜನರು ಮನೆಯ ಆಹಾರಗಳಿಗಿಂತ ಹೋಟೆಲ್ ಫುಡ್ ಗಳನ್ನು ಹೆಚ್ಚಾಗಿ ಇಷ್ಟ ಪಡುತ್ತಾರೆ. ಅದಲ್ಲದೆ ಇತ್ತೀಚಿಗೆ ಆನ್ ಲೈನ್ ನಲ್ಲಿ ಫುಡ್ ಆರ್ಡರ್ ಮಾಡಿ ಸೇವನೆ ಮಾಡುವುದು ಸಾಮಾನ್ಯ ಆಗಿದೆ. ಆದರೆ ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದ 20 ವರ್ಷದ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

 

ಡಿಸೆಂಬರ್ 31 ರಂದು ರೊಮಾನ್ ಸಿಯಾ ಎಂಬ ರೆಸ್ಟೋರೆಂಟ್ ನಿಂದ ಆನ್ ಲೈನ್ ಮೂಲಕ ಬಿರಿಯಾನಿ ತರಿಸಿಕೊಂಡಿದ್ದ ಯುವತಿ ತೀರಾ ಅಸ್ವಸ್ತ ಗೊಂಡಿದ್ದ ಯುವತಿಯನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ತದನಂತರ ಮಂಗಳೂರಿನ ಮತ್ತೊಂದು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಪೆರುಂಬಳಾದ ಅಂಜು ಶ್ರೀಪಾರ್ವತಿ ಮೃತಪಟ್ಟ ಯುವತಿಯಾಗಿದ್ದಾಳೆ. ಮೃತ ಯುವತಿಯ ಪೋಷಕರು ನೀಡಿರುವ ದೂರಿನ ಆಧಾರದ ಮೇಲೆ ಕೇಸ್ ದಾಖಲಾಗಿದೆ. ಯುವತಿ ಇಂದು ಬೆಳಗ್ಗೆ ಮೃತಪಟ್ಟಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯ ವರದಿ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಧ್ಯೆ ಆರೋಗ್ಯ ಸಚಿವೆ ವೀಣಾ ಜಾರ್ಜ್, ಘಟನೆ ಕುರಿತು ತನಿಖೆಗೆ ಆದೇಶಿಸಿದ್ದಾರೆ. ಈ ವಾರದ ಆರಂಭದಲ್ಲಿ ಕೊಟ್ಟಯಂ ವೈದ್ಯಕೀಯ ಕಾಲೇಜಿನ ನರ್ಸ್ ಒಬ್ಬರು ಇದೇ ರೀತಿಯ ಆಹಾರ ಸೇವಿಸಿದ ನಂತರ ಮೃತಪಟ್ಟಿದ್ದರು. ಸದ್ಯ ಈ ಘಟನೆ ಕುರಿತು ಸರಿಯಾದ ವಿಚಾರಣೆ ನಂತರ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Leave A Reply

Your email address will not be published.