ಬೆಂಗಳೂರು ಯುನಿವರ್ಸಿಟಿಯಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ | ಆಸಕ್ತರು ಅರ್ಜಿ ಸಲ್ಲಿಸಿ, ತಿಂಗಳ‌ ವೇತನ ರೂ.36,000

Bangalore University Recruitment 2023: ಬೆಂಗಳೂರು ವಿಶ್ವವಿದ್ಯಾನಿಲಯ(Bangalore University) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ(Bengaluru) ಕೆಲಸ ಮಾಡಬೇಕು ಎನ್ನುವವರಿಗ ಇದೊಂದು ಸುವರ್ಣಾವಕಾಶವಾಗಿದೆ. ಅಭ್ಯರ್ಥಿಗಳು ಜನವರಿ 20, 2023ಕ್ಕೆ ಮುನ್ನ ಆಫ್​ಲೈನ್(Offline)​ ಮೂಲಕ ಅರ್ಜಿ ಹಾಕಬೇಕು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ bangaloreuniversity.ac.in ಗೆ ಭೇಟಿ ನೀಡಿ.

ಸಂಸ್ಥೆ : ಬೆಂಗಳೂರು ಯೂನಿವರ್ಸಿಟಿ
ಹುದ್ದೆ: ಅಸಿಸ್ಟೆಂಟ್ ಲೈಬ್ರರಿಯನ್
ಒಟ್ಟು ಹುದ್ದೆ : 7
ವೇತನ : ಮಾಸಿಕ 36,000 ರೂ.
ಉದ್ಯೋಗದ ಸ್ಥಳ : ಬೆಂಗಳೂರು

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/01/2023
ಅರ್ಜಿ ಸಲ್ಲಿಸಲು ಕೊನೆ ದಿನ: 20/01/2023

ಈ ಹುದ್ದೆಗಳು ಸಂಪೂರ್ಣ ತಾತ್ಕಾಲಿಕವಾಗಿದ್ದು, 1 ವರ್ಷದ ಅವಧಿಗೆ ನೇಮಿಸಿಕೊಳ್ಳಲಾಗುತ್ತದೆ.

ವಿದ್ಯಾರ್ಹತೆ : ಬೆಂಗಳೂರು ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಮಾಸ್ಟರ್ ಆಫ್​ ಲೈಬ್ರರಿ ಸೈನ್ಸ್​(M.LISc), ಎಂ.ಫಿಲ್, ಪಿಎಚ್​.ಡಿ ಪಡೆದಿರಬೇಕು.

ವಯೋಮಿತಿ: ಬೆಂಗಳೂರು ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನಿಯಮಾವಳಿಗಳ ಪ್ರಕಾರ ಇರಬೇಕು.ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ,
ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಜನವರಿ 20, 2023 ಕ್ಕೆ ಮುನ್ನ ಕಳುಹಿಸಬೇಕು.

ವಿಳಾಸ : ಸಹಾಯಕ ರಿಜಿಸ್ಟ್ರಾರ್
ಸ್ಥಾಪನೆ ವಿಭಾಗ-I
ಆಡಳಿತಾತ್ಮಕ ಬ್ಲಾಕ್
ಬೆಂಗಳೂರು ವಿಶ್ವವಿದ್ಯಾಲಯ
ಜ್ಞಾನ ಭಾರತಿ ಕ್ಯಾಂಪಸ್
ಬೆಂಗಳೂರು-560056

Leave A Reply

Your email address will not be published.