Coffee Board Recruitment 2023 | ಭಾರತೀಯ ಕಾಫಿ ಮಂಡಳಿಯಲ್ಲಿ ಉದ್ಯೋಗ ; ಅರ್ಜಿ ಸಲ್ಲಿಸಲು ಕೊನೆ ದಿನಾಂಕ:ಜ.20
ಭಾರತೀಯ ಕಾಫಿ ಮಂಡಳಿಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರಗಳು:
ಬರಿಸ್ಟಾ ಟ್ರೈನರ್ಸ್ಸ್- 5 ಹುದ್ದೆಗಳು
ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯ ಅಥವಾ ಮಂಡಳಿಯಿಂದ ಹೋಟೆಲ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಪದವಿಯನ್ನು ಪಡೆದಿರಬೇಕು. ಅಲ್ಲದೆ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಇನ್ನು 3 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಯೋಮಿತಿ:
ಈ ಹುದ್ದೆಗಳಿಗೆ 40 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೆಯೇ SC/ST ಅಭ್ಯರ್ಥಿಗಳಿಗೆ 3 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಮಾಸಿಕ ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 50 ಸಾವಿರ ರೂ. ನೀಡಲಾಗುತ್ತದೆ.
ಉದ್ಯೋಗ ಸ್ಥಳ: ಕರ್ನಾಟಕದ ರಾಜಧಾನಿ
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜನವರಿ 20, 2023
ಕಾಫಿ ಬೋರ್ಡ್ನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಯೊಂದಿಗೆ ನಿಮ್ಮ ರೆಸ್ಯೂಮ್ನ್ನು cqd.coffeeboard@gmail.com ಗೆ ಇ-ಮೇಲ್ ಮಾಡಬಹುದು.
ಅಧಿಕೃತ ವೆಬ್ ಸೈಟ್ : indiacoffee.org