ECIL Recruitment 2023: ಎಲೆಕ್ಟ್ರಾನಿಕ್ಸ್​ ಕಾರ್ಪೊರೇಷನ್​ನಲ್ಲಿ ನೇಮಕಾತಿ | 200 ಹುದ್ದೆಗಳಿಗೆ ಅರ್ಜಿ ಆಹ್ವಾನ- ಜ.11ಕ್ಕೆ ಸಂದರ್ಶನ

ECIL Recruitment 2023: ಎಲೆಕ್ಟ್ರಾನಿಕ್ಸ್​ ಕಾರ್ಪೊರೇಷನ್ ಆಫ್​ ಇಂಡಿಯಾ ಲಿಮಿಟೆಡ್(Electronics Corporation of India Limited ECIL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಇಂಟರ್​ ವ್ಯೂಗೆ ಅಭ್ಯರ್ಥಿಗಳು ಹಾಜರಾಗಬಹುದು.

ಕೇಂದ್ರ ಸರ್ಕಾರದ ಹುದ್ದೆ ಹುಡುಕುತ್ತಿರುವ ಉದ್ಯೋಗಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ ecil.co.in ಗೆ ಭೇಟಿ ನೀಡಬಹುದು.

ಸಂಸ್ಥೆ : ಎಲೆಕ್ಟ್ರಾನಿಕ್ಸ್​ ಕಾರ್ಪೊರೇಷನ್ ಆಫ್​ ಇಂಡಿಯಾ ಲಿಮಿಟೆಡ್
ಹುದ್ದೆ: ಟೆಕ್ನಿಕಲ್ ಆಫೀಸರ್
ಒಟ್ಟು ಹುದ್ದೆ : 200
ವೇತನ : ಮಾಸಿಕ 25,000-31,000 ರೂ.
ಉದ್ಯೋಗದ ಸ್ಥಳ : ಭಾರತ

ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 05/01/2023
ಸಂದರ್ಶನ ನಡೆಯುವ ದಿನಾಂಕ: ಜನವರಿ 11, 2023

ವೇತನ: ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 25,000-31,000 ರೂ. ಸಂಬಳ ಕೊಡಲಾಗುತ್ತದೆ.

ವಯೋಮಿತಿ: ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಡಿ.31, 2023ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳು – 3 ವರ್ಷ
SC/ST ಅಭ್ಯರ್ಥಿಗಳು -5 ವರ್ಷ
PWD ಅಭ್ಯರ್ಥಿಗಳು- 10 ವರ್ಷ

ವಿದ್ಯಾರ್ಹತೆ: ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ CSE/IT/ECE/EEE/ಮೆಕ್ಯಾನಿಕಲ್​/ ಇನ್​ಸ್ಟ್ರುಮೆಂಟೇಶನ್​ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆ, ಅನುಭವ, ಸಂದರ್ಶನದ ಮೂಲಕ ಆಯ್ಕೆ ಮಾಡಬಹುದು.

ಸಂದರ್ಶನ ನಡೆಯುವ ಸ್ಥಳ:
CED ಕಟ್ಟಡ
ಮುಖ್ಯ ಕಾರ್ಖಾನೆ
ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್
ECIL ಪೋಸ್ಟ್
ಹೈದರಾಬಾದ್ – 500062

Leave A Reply

Your email address will not be published.