KPSC : ಕೆಪಿಎಸ್ಸಿಯಿಂದ 660 ಸಹಾಯಕ ಇಂಜಿನಿಯರ್‌ಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗ (KPSC) ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ ಹುದ್ದೆಗಳ ನೇಮಕಾತಿ ಸಂಬಂಧ ಪಟ್ಟಂತೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದೆ.

 

ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್ ವಿಭಾಗ-1) 660 ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ನಾಗರಿಕ ಸೇವೆಗಳು ಮತ್ತು ತಿದ್ದುಪಡಿ ನಿಯಮಗಳ ಅನುಸಾರ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಅಭ್ಯರ್ಥಿಗಳು ಈ ಕುರಿತ ಮಾಹಿತಿ ಪಡೆಯಲು ಕೆಪಿಎಸ್ ಸಿ ವೆಬ್ ಸೈಟ್ ನಲ್ಲಿ ಭೇಟಿ ನೀಡಬಹುದು. ಇದರ ಜೊತೆಗೆ ಅಭ್ಯರ್ಥಿಗಳ ಆಯ್ಕೆಪಟ್ಟಿಯ ಕುರಿತಾಗಿ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪಟ್ಟಿ ಪ್ರಕಟಿಸಿದ ಏಳು ದಿನಗಳೊಳಗೆ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು 560001 ಈ ವಿಳಾಸಕ್ಕೆ ಲಿಖಿತ ರೂಪದ ಮೂಲಕ ಅರ್ಜಿ ಸಲ್ಲಿಸಬೇಕೆಂದು ಈ ಮೂಲಕ ಮನವಿ ಮಾಡಲಾಗಿದೆ

Leave A Reply

Your email address will not be published.