2nd PUC 2023 : ಪ್ರಾಯೋಗಿಕ, ಪೂರ್ವ ಸಿದ್ಧತಾ, ವಾರ್ಷಿಕ ಪರೀಕ್ಷೆ ಸಂಪೂರ್ಣ ವೇಳಾಪಟ್ಟಿಯ ಕುರಿತು ಮಾಹಿತಿ ಇಲ್ಲಿದೆ
2022-23ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. ಈ ವೇಳಾಪಟ್ಟಿಯ ಅನುಸಾರ ಕರ್ನಾಟಕ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ.
ಮೊದಲು ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಡೆಸಿದ ಬಳಿಕ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲಾಗುತ್ತದೆ.ಶಿಕ್ಷಣ ಪ್ರತಿಯೊಬ್ಬರ ಜೀವನದಲ್ಲಿ ಮಹತ್ತರ ಪಾತ್ರ ವಹಿಸುತ್ತವೆ. ಅದರಲ್ಲಿ ಕೂಡ ಎಸೆಸೆಲ್ಸಿ ಹಾಗೂ ಪಿಯುಸಿ ಮುಖ್ಯ ಘಟ್ಟವಾಗಿದೆ. ಇದೀಗ, ರಾಜ್ಯದಲ್ಲಿ 2023ರ PUC ಪರೀಕ್ಷೆ ವೇಳಾಪಟ್ಟಿ ಬಿಡುಗಡೆಯಾಗಿದ್ದು ವಿದ್ಯಾರ್ಥಿಗಳು ಅಭ್ಯಾಸ ಆರಂಭಿಸಬೇಕಾಗುತ್ತದೆ.
ಯುದ್ದ ಕಾಲೇ ಶಸ್ತ್ರಾಭ್ಯಾಸ ಎಂಬ ನಿಲುವನ್ನು ವಿರೋಧಿಸಿ ಪೂರ್ವ ತಯಾರಿ ನಡೆಸುವುದು ಉತ್ತಮ. ಅದಕ್ಕಾಗಿ ನೀವು ಕೆಲವೊಂದು ಸಲಹೆಗಳನ್ನೂ ಗಮನಿಸಿ ವಿದ್ಯಾರ್ಥಿಗಳು (Student) ಸಿದ್ಧತೆಯಲ್ಲಿ ತೊಡಗಿಕೊಂಡರೆ ಉತ್ತಮ ಫಲಿತಾಂಶ ಗಳಿಸಬಹುದು.
ಪರೀಕ್ಷೆ ಯ ದಿನಾಂಕ (Date) ಹಾಗೂ ವಿಷಯಗಳ ವಿವರಗಳು ಹೀಗಿದ್ದು, ಇದಕ್ಕನುಗುಣವಾಗಿ ಪರೀಕ್ಷೆ ನಡೆಯಲಿದೆ. ಕೆಲವೊಮ್ಮೆ ಅನೇಕ ಪ್ರಶ್ನೆಗಳು ಪುನರಾವರ್ತನೆ ಆಗುವುದರಿಂದ ನಿಮಗೆ ಕಠಿಣವಾದ ವಿಷಯಗಳ ಹಿಂದಿನ ವರ್ಷದ ಪ್ರಶ್ನೆಗಳನ್ನು ಹೆಚ್ಚುವರಿ ಅಂಕಗಳಿಗಾಗಿ ಅಭ್ಯಾಸ ನಡೆಸಬಹುದು. ಇದಕ್ಕೆ ಒಂದು ನಿಖರ ವಾರದ ವೇಳಾಪಟ್ಟಿ ಮಾಡಿ ಒಂದೊಂದು ವಿಷಯಕ್ಕೆ ಒಂದೊಂದು ದಿನ ಮೀಸಲಿಡುವುದು ಒಳ್ಳೆಯದು.
2022-23ನೇ ಸಾಲಿನ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಗಳಿಗೆ ಇನ್ನೂ ಕೇವಲ 10 ರಿಂದ 15 ದಿನಗಳು ಮಾತ್ರ ಬಾಕಿ ಉಳಿದಿವೆ. ಜನವರಿ 23, 2023 ರಿಂದ ಫೆಬ್ರವರಿ 04, 2023 ರವರೆಗೆ ಪೂರ್ವ ಸಿದ್ದತಾ ಪರೀಕ್ಷೆಗಳು ನಡೆಯಲಿವೆ. 2022-23ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ರಾಜ್ಯದ್ಯಾಂತ ಏಕಕಾಲದಲ್ಲಿ ನಡೆಸಲಾಗಲಿದ್ದು, ಈ ಬಾರಿಯ ಪ್ರಾಯೋಗಿಕ ಪರೀಕ್ಷೆಗಳನ್ನು ದಿನಾಂಕ 06-02-2023 ರಿಂದ 28-02-2023 ರವರೆಗೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದಿನಾಂಕವನ್ನು ನಿರ್ಣಯ ಮಾಡಿದೆ.
2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಭಾಷಾ ವಿಷಯಗಳು ಹಾಗೂ ಐಚ್ಛಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಾಗದ ಹಿನ್ನೆಲೆ ಶೇಕಡ 100 ರಷ್ಟು ಪಠ್ಯಕ್ರಮಕ್ಕೆ ಪ್ರಶ್ನೆಗಳನ್ನು ನೀಡಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ.ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಗಳನ್ನು ಆಯಾ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪ್ರಶ್ನೆಪತ್ರಿಕೆಗಳನ್ನು ತಯಾರಿಸಿ, ಪರೀಕ್ಷೆಗಳನ್ನು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ.
ವಿಷಯವಾರು ವೇಳಾಪಟ್ಟಿಯನ್ನು ಆಯಾ ಜಿಲ್ಲಾ ಮಟ್ಟದಲ್ಲಿ ಬಿಡುಗಡೆ ಮಾಡಲಾಗಲಿದ್ದು ಇಲ್ಲವೇ ಕಾಲೇಜುಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ.
ದ್ವಿತೀಯ ಪಿಯುಸಿ ವಿಷಯವಾರು ಮಾರ್ಚ್ 2023 ಪರೀಕ್ಷೆಯ ಅಂತಿಮ ವೇಳಾಪಟ್ಟಿ
09-03-2023 – ಕನ್ನಡ, ಅರೇಬಿಕ್.
11-03-2023 -ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ.
13-03-2023- ಅರ್ಥಶಾಸ್ತ್ರ.
14-03-2023- ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ.
15-03-2023- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ , ಫ್ರೆಂಚ್.
16-03-2023 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ.
17-03-2023 – ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ಕೇರ್, ಬ್ಯೂಟಿ ಅಂಡ್ ವೆಲ್ನೆಸ್.
18-03-2023- ಭೂಗೋಳಶಾಸ್ತ್ರ, ಜೀವಶಾಸ್ತ್ರ.
20-03-2023- ಇತಿಹಾಸ, ಭೌತಶಾಸ್ತ್ರ.
21-03-2023 – ಹಿಂದಿ.
23-03-2023- ಇಂಗ್ಲಿಷ್.
25-03-2023 -ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
27-03-2023 – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ.
29-03-2023 -ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ.
ದ್ವಿತೀಯ ಪಿಯುಸಿ ಮಾರ್ಚ್ 2023 ರಲ್ಲಿ ನಡೆಯಲಿರುವ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 09-03-2023 ರಿಂದ 29-03-2023 ರ ವರೆಗೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದಿನಾಂಕವನ್ನು ನಿಗದಿ ಮಾಡಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಬೆಳಗ್ಗೆ 10.15 ರಿಂದ ಮಧ್ಯಾಹ್ನ 01-30 ರವೆರೆಗೆ ಪರೀಕ್ಷೆ ನಡೆಯಲಿವೆ.
ಕರ್ನಾಟಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದ ಆರಂಭದಿಂದಲೇ ತಮ್ಮ ಪರೀಕ್ಷಾ ಸಿದ್ಧತೆಗಳನ್ನು ಪ್ರಾರಂಭ ಮಾಡುವುದು ಸೂಕ್ತ. ಓದಿದ ವಿಷಯವನ್ನು ಇನ್ನೊಮ್ಮೆ ಓದಿ ಅಭ್ಯಾಸ ಮಾಡಲು ಸಾಕಷ್ಟು ಸಮಯವನ್ನು ಹೊಂದಿರುವುದು ಮತ್ತು ಇತರ ವಿಷಯಗಳಲ್ಲಿನ ಸಂಶಯಗಳನ್ನು ಉಪನ್ಯಾಸಕರೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಲು ನೆರವಾಗುತ್ತದೆ.