ಮದ್ಯಾಹ್ನದ ಬಿಸಿಯೂಟದಲ್ಲಿ ಹಾವು ಪ್ರತ್ಯಕ್ಷ: 30 ಕ್ಕು ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

ಕೆಲವೊಮ್ಮೆ ಏನೋ ಮಾಡಲು ಹೋಗಿ ಇನ್ನೇನೋ ಆಗುವ ,ಇಲ್ಲವೇ ಕೆಲವರ ಬೇಜವಾಬ್ದಾರಿ ನಡೆಯಿಂದ ಸಾವಿನ ದವಡೆಗೆ ಸಿಲುಕುವ ಪ್ರಮೇಯ ಕೂಡ ಹೆಚ್ಚಿದೆ. ಸರ್ಕಾರ ಮಕ್ಕಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಮಧ್ಯಾಹ್ನದ ಬಿಸಿಯೂಟದ ವ್ಯವಸ್ಥೆ ಮಾಡಿದ್ದು, ಇದರಿಂದ ಅದೆಷ್ಟೋ ಹಸಿದ ಹೊಟ್ಟೆ ತುಂಬುತ್ತಿದೆ. ಆದ್ರೆ, ಮಧ್ಯಾಹ್ನದ ಬಿಸಿಯೂಟದ ಬೇಳೆಯಲ್ಲಿ ಹಾವು ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.

 

ಈ ಆಘಾತಕಾರಿ ಘಟನೆ, ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಹಾವು ಕಂಡುಬಂದಿದೆ ಎನ್ನಲಾಗಿದ್ದು,ಜಿಲ್ಲೆಯ ಮಯೂರೇಶ್ವರ ಬ್ಲಾಕ್‌ನ ಪ್ರಾಥಮಿಕ ಶಾಲೆಯ ಸುಮಾರು 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಧ್ಯಾಹ್ನದ ಊಟದಲ್ಲಿ ಬಡಿಸಿದ ಆಹಾರವನ್ನು ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಹಾರವನ್ನು ಸೇವಿಸಿದ ಹಲವಾರು ಶಾಲಾ ಮಕ್ಕಳು ಅಸ್ವಸ್ಥರಾಗಿ ಸೋಮವಾರ ಆಸ್ಪತ್ರೆಗೆ ದಾಖಲು ಮಾಡಲಾಗಿರುವ ಘಟನೆ ಮುನ್ನಲೆಗೆ ಬಂದಿದೆ.ಮಧ್ಯಾಹ್ನದ ಊಟ ತಿಂದು ಮಕ್ಕಳು ಅಸ್ವಸ್ಥರಾಗುತ್ತಿರುವ ಬಗ್ಗೆ ಹಲವಾರು ಗ್ರಾಮಸ್ಥರಿಂದ ದೂರುಗಳು ಕೇಳಿ ಬಂದಿದ್ದು, ಈ ಬಗ್ಗೆ ಪ್ರಾಥಮಿಕ ಶಾಲೆಗಳ ಜಿಲ್ಲಾ ನಿರೀಕ್ಷಕರಿಗೆ ತಿಳಿಸಿದ್ದು, ಅವರು (ಜನವರಿ 10) ಭೇಟಿ ನೀಡಿ ಪರಿಶೀಲಿಸಲಿದ್ದಾರೆ ಎಂದು ಬ್ಲಾಕ್ ಅಭಿವೃದ್ಧಿ ಅಧಿಕಾರಿ ದೀಪಾಂಜನ್ ಜನಾ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಭೋಜನ ಸಿದ್ಧಪಡಿಸಿದ್ದ ಶಾಲೆಯ ಸಿಬ್ಬಂದಿಯೊಬ್ಬರು, ಬೇಳೆ ತುಂಬಿದ ಕಂಟೈನರ್ ಒಂದರಲ್ಲಿ ಹಾವು ಕಂಡುಬಂದಿದೆ ಎಂದು ಹೇಳಿದ್ದು, ಮಕ್ಕಳು ವಾಂತಿ ಮಾಡಲು ಪ್ರಾರಂಭಿಸಿದ್ದರಿಂದ ನಾವು ಅವರನ್ನು ರಾಂಪುರಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಒಬ್ಬ ವಿದ್ಯಾರ್ಥಿಯನ್ನು ಹೊರತುಪಡಿಸಿ ಎಲ್ಲಾ ಮಕ್ಕಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದ್ದು, ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

Leave A Reply

Your email address will not be published.