PM Kisan : ಎಪ್ರಿಲ್‌ನಿಂದ ಹೆಚ್ಚಾಗಲಿದೆ ಪಿಎಂ ಕಿಸಾನ್ ಹಣ | ರೈತರೇ ನಿಮಗಿದು ಸಂತಸದ ಸುದ್ದಿ

ಈ ಬಾರಿಯ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ರೈತರಿಗೆ ಭರ್ಜರಿ ಗಿಫ್ಟ್ ನೀಡಲಿದೆ ಎನ್ನಲಾಗುತ್ತಿದೆ. ರೈತರ ಪಿಎಂ ಕಿಸಾನ್ ನಿಧಿ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಈ ಬಜೆಟ್ ನಲ್ಲಿ ಘೋಷಿಸಬಹುದು ಎಂದು ಅಂದಾಜಿಸಲಾಗಿದೆ.

ಇತ್ತೀಚೆಗಷ್ಟೇ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 12ನೇ ಕಂತಿನ ಹಣ ಬಿಡುಗಡೆ ಮಾಡಿದ್ದು, ಇದೀಗ 13ನೇ ಕಂತಿಗಾಗಿ ರೈತರು ಎದುರು ನೋಡುತ್ತಿದ್ದಾರೆ. ರೈತರ ನೆರವಿಗೆ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಆರ್ಥಿಕ ನೆರವಿನ ಜೊತೆಗೆ ರಸಗೊಬ್ಬರ ಪೂರೈಕೆ ಮಾಡಿ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ.ಈಗಾಗಲೇ 8.42 ಕೋಟಿ ರೈತರು ಪಿಎಂ ಕಿಸಾನ್ ನಿಧಿಯ ಲಾಭವನ್ನು ಪಡೆದಿದ್ದಾರೆ

ಫೆಬ್ರವರಿ 1, 2023 ರಂದು ಮಂಡಿಸಲಿರುವ ಮುಂಬರುವ ಬಜೆಟ್‌ ಮೇಲೆ ರೈತರು ಜೊತೆಗೆ ಉದ್ಯೋಗಸ್ಥರ ಹೆಚ್ಚಿನ ನಿರೀಕ್ಷೆ ಇಟ್ಟಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಘೋಷಣೆಗಳತ್ತ ಎಲ್ಲರ ಗಮನ ಕೇಂದ್ರೀಕೃತ ವಾಗಿದೆ. 2024 ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಅನೇಕ ಜನಪರ ಭರವಸೆಗಳನ್ನು ನೀಡುವ ನಿರೀಕ್ಷೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಬೀಜ ಮತ್ತು ರಸಗೊಬ್ಬರಗಳ ಬೆಲೆ ನಿರಂತರವಾಗಿ ಏರಿಕೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಪಿಎಂ ಕಿಸಾನ್ ಮೊತ್ತವನ್ನು ಏರಿಕೆ ಮಾಡಿದ್ದಲ್ಲಿ , ಏಪ್ರಿಲ್‌ನಲ್ಲಿ ರೈತರ ಖಾತೆಗೆ ಮತ್ತೆ 2000 ರೂ ವರ್ಗಾವಣೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಇಲ್ಲಿಯವರೆಗೆ ರೈತರಿಗೆ ಮೂರು ಕಂತುಗಳಲ್ಲಿ ಹಣವನ್ನು ಬಿಡುಗಡೆ ಮಾಡಲಾಗುತ್ತಿದ್ದು ಆದರೆ ಇದನ್ನು 4 ಕಂತುಗಳಿಗೆ ಏರಿಸುವ ಸಾಧ್ಯತೆಗಳಿವೆ. ಈಗ ರೈತರ ಖಾತೆಗೆ 6 ಸಾವಿರ ರೂಪಾಯಿಗಳನ್ನು ವರ್ಷಕ್ಕೆ ವರ್ಗಾಯಿಸಲಾಗುತ್ತಿದ್ದು ನಾಲ್ಕು ಕಂತುಗಳಲ್ಲಿ 2 ಸಾವಿರ ರೂಪಾಯಿ ವರ್ಗಾಯಿಸಿದರೆ ಈ ಮೊತ ವರ್ಷಕ್ಕೆ 8 ಸಾವಿರ ರೂಪಾಯಿ ಆಗಿರಲಿದೆ.

ಈ ಬಾರಿಯ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ರೈತರಿಗೆ ಸಿಹಿ ಸುದ್ದಿ ನೀಡಲಿದೆ ಎಂದು ಹೇಳಲಾಗುತ್ತಿದ್ದು, ರೈತರ ಪಿಎಂ ಕಿಸಾನ್ ನಿಧಿ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಜೆಟ್ ನಲ್ಲಿ ಘೋಷಿಸಬಹುದು ಎನ್ನಲಾಗುತ್ತಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿಯಲ್ಲಿ ರೈತರಿಗೆ ಪ್ರಸ್ತುತ ವರ್ಷಕ್ಕೆ 6 ಸಾವಿರ ರೂಪಾಯಿಗಳನ್ನು ನೀಡಲಾಗುತ್ತಿದ್ದು, ಈ ಮೊತ್ತವನ್ನು ಮೂರು ಕಂತುಗಳಲ್ಲಿ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಆದರೆ ಈ ಬಜೆಟ್ ನಲ್ಲಿ ಈ ಮೊತ್ತವನ್ನು ಹೆಚ್ಚಿಸುವ ನಿರೀಕ್ಷೆಯಿದೆ. ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಈ ತೀರ್ಮಾನ ಕೈಗೊಳ್ಳಲಿದೆ ಎಂದು ಅಂದಾಜಿಸಲಾಗಿದೆ.

Leave A Reply

Your email address will not be published.