ಬೈಕ್ ಖರೀದಿಸುತ್ತೀರಾ ? ಹಾಗಾದರೆ ಸಿಗುತ್ತೆ 70,000 ಸಬ್ಸಿಡಿ | ಯಾವ ರೀತಿ ಪಡೆಯುವುದು ? ಇಲ್ಲಿದೆ ಸಂಪೂರ್ಣ ಮಾಹಿತಿ
ಇದೀಗ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಗೆ ಈ ನಿಗಮದ ವ್ಯಾಪ್ತಿಗೆ ಒಳಪಡುವ ಉಪಜಾತಿಗಳಾದ ಅರ್ಹ ಫಲಾಪೇಕ್ಷಿತಗಳಿಂದ ದ್ವಿಚಕ್ರ / ತ್ರಿಚಕ್ರ ವಾಹನ ಖರೀದಿಗೆ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2022-23ನೇ ಸಾಲಿನ ಉದ್ಯಮಶೀಲತಾ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಇತರ ದ್ವಿಚಕ್ರ / ತ್ರಿಚಕ್ರ ವಾಹನ ಖರೀದಿ (ಇ-ಕಾಮರ್ಸ್ ಅಡಿಯಲ್ಲಿ ಕಂಪನಿಗಳಿಂದ ಸರಕು / ಸಾಮಗ್ರಿಗಳು ತಲುಪಿಸಲು) ವಾಹನದ ಘಟಕ ವೆಚ್ಚದಲ್ಲಿ ನಿಗಮದಿಂದ ರೂ. 50,000/- ಗಳು ಹಾಗೂ ರೂಪಾಯಿ 20,000ಗಳನ್ನು ಸಾಲದ ರೂಪದಲ್ಲಿ ನೀಡಲು ನಿರ್ಧರಿಸಲಾಗಿದೆ.
ಈ ಮೇಲಿನ ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳೇನು:
- ಆರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದ್ದು ಹಾಗೂ ಕರ್ನಾಟಕ ರಾಜ್ಯದ ವಾಸಿಗಳಿಗೆ ಹಾಗೂ ಈ ನಿಗಮದ ವ್ಯಾಪ್ತಿಗೆ ಒಳಪಟ್ಟಿರುವ ಉಪಜಾತಿಗೆ ಸೇರಿರಬೇಕು.
- ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದ ರೂ. 1.50,000/- ಮತ್ತು ನಗರ ಪ್ರದೇಶದಲ್ಲಿ ರೂ. 2,00,000/-ಗಳ ಮಿತಿಯಲ್ಲಿರಬೇಕು.
- ಆರ್ಜಿದಾರರು ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ ಕನಿಷ್ಠ 21 ವರ್ಷಗಳಿಂದ ಗರಿಷ್ಠ 50 ವರ್ಷದೊಳಗಿರಬೇಕು.
- ಆರ್ಜಿದಾರರು ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆದಿರಬಾರದು ಮತ್ತು ಸರ್ಕಾರಿ/ಆರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು.
- ಆರ್ಜಿದಾರರು ಸಂಬಂಧಿಸಿದ ವಾಹನ ಚಾಲನ ಪರವಾನಗಿ ಹೊಂದಿರಬೇಕು.
ಅರ್ಜಿ ಸಲ್ಲಿಸುವ ಕ್ರಮಗಳು :
ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ ಆಗಿರುವ https://sevasindhu.karnataka.gov.in ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರದಲ್ಲಿ ಆನ್‌ಲೈನ್ ಮುಖಾಂತರ ಆಸಕ್ತರು ಮೇಲಿನ ಯೋಜನೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16.01.2023 ಆಗಿದೆ .
ಅರ್ಹರು ಈ ಮೇಲಿನ ಯೋಜನೆ ಅಡಿಯಲ್ಲಿ ನಿಯಮನುಸಾರ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.