ಮಂಗಳೂರು:ಕನ್ನಡದ ಪ್ರಖ್ಯಾತ ಲೇಖಕಿ ಸಾರಾ ಅಬೂಬಕರ್ ಇನ್ನಿಲ್ಲ!!

ಮಂಗಳೂರು: ಕನ್ನಡದ ಹೆಸರಾಂತ ಲೇಖಕರಲ್ಲಿ ಒಬ್ಬರು, ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದ ಸಾರಾ ಅಬೂಬಕರ್ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಸ್ವಗೃಹದಲ್ಲಿ ಕೊನೆಯುಸಿರೆಳೆದರು.

ಕಾಸರಗೋಡಿನಲ್ಲಿ ಜೂನ್ 30, 1936 ರಂದು ಜನಿಸಿದ್ದು, ಇವರು ಬರೆದ ಚಂದ್ರಗಿರಿಯ ತೀರದಲ್ಲಿ ಬಹಳ ಜನಪ್ರಿಯತೆ ಹಾಗೂ ಹೆಸರು ತಂದ ಕಾದಂಬರಿಯಾಗಿತ್ತು. ಇವರು ಸುಮಾರು 10 ಕಾದಂಬರಿ, 6 ಕಥಾ ಸಂಕಲನಗಳು, 5 ಬಾನುಲಿ ನಾಟಕ ಹಾಗೂ ಹಲವು ಕ್ಷೇತ್ರದಲ್ಲಿ ಬಹಳ ಜನಪ್ರಿಯತೆ ಪಡೆದಿದ್ದರು.

ಇವರು ಕಾಸರಗೋಡಿನ ಚಂದ್ರಗಿರಿ ತೀರದ ಗ್ರಾಮವೊಂದರಲ್ಲಿ ನ್ಯಾಯವಾದಿ ಪಿ. ಅಹಮದ್, ಜೈನಾಬಿ ದಂಪತಿಗಳ ಪುತ್ರಿಯಾಗಿ 1936 ಜೂನ್ 30ರಂದು ಜನಿಸಿ, ಪ್ರಾಥಮಿಕ ವಿದ್ಯಾಭ್ಯಾಸ ಹಾಗೂ ಪ್ರೌಢ ಶಿಕ್ಷಣವನ್ನು ಕಾಸರಗೋಡಿನಲ್ಲೇ ಪೂರೈಸಿದರು.

ಇಂಜಿನಿಯರ್ ಹುದ್ದೆಗೇರಿದ್ದ ಸಾರಾ ಅವರು ವಿವಾಹದ ಬಳಿಕ ವಿದ್ಯಾಭ್ಯಾಸ ಮೊಟಕುಗೊಳಿಸಿದ್ದು, ಅಣ್ಣ ತಂದುಕೊಡುತ್ತಿದ್ದ ವೈಕಂ ಮಹಮ್ಮದ್ ಬಶೀರ್ ಅವರ ಕಾದಂಬರಿಗಳ ಓದುತ್ತಾ ಬರವಣಿಗೆಯತ್ತ ಒಲವು ತೋರಿದ್ದು, ಅದರ ಫಲವಾಗಿಯೇ ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಧ ರಾತ್ರಿಯಲ್ಲಿ ಹುಟ್ಟಿದ ಕೂಸು, ಚಪ್ಪಲಿಗಳು, ಪಯಣ ಮತ್ತು ಇತರ ಕಥೆಗಳು, ಬಾನುಲಿ ನಾಟಕ, ಕಮರಿದ ಕನಸು, ಮಗಳು ಹುಟ್ಟಿದಳು ಹೀಗೆ ಹತ್ತು ಹಲವು ಲೇಖನ, ಕಥೆ ನಾಟಕಗಳು ಪರಿಚಯವಾದವು.

ಸಾರಾ ಅಬೂಬಕ್ಕರ್‌ ಅವರಿಗೆ ಸಂದ ಪ್ರಶಸ್ತಿ ಗೌರವಗಳು ಈ ಕೆಳಗಿನಂತಿವೆ :
ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ,‘ಸಹನಾ’ ಕಾದಂಬರಿಗೆ ವರ್ಧಮಾನ ಪ್ರಶಸ್ತಿ. ‘ಸುಳಿಯಲ್ಲಿ ಸಿಕ್ಕವರು’ ಕೃತಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ ಮತ್ತು ಸಂದೇಶ ಪ್ರಶಸ್ತಿ, ಅನುಪಮ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಮುಂತಾದ ಹಲವಾರು ಪ್ರಮುಖ ಪ್ರಶಸ್ತಿ ಗೌರವಗಳು ಸಂದಿವೆ.

ಸಾರಾ ಅಬೂಬಕ್ಕರ್ ಅವರು ಮಂಗಳೂರಿನಲ್ಲಿ ನೆಲೆಸಿದ್ದು, ನಾಲ್ವರು ಪುತ್ರರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ

Leave A Reply

Your email address will not be published.