Scholarship : ಈ 3 ವಿದ್ಯಾರ್ಥಿವೇತನಕ್ಕೆ ಅರ್ಜಿ ಹಾಕಿದರೆ ದೊರಕುತ್ತೆ ರೂ.50 ಸಾವಿರದಿಂದ 2 ಲಕ್ಷದವರೆಗೆ ಸ್ಕಾಲರ್‌ಶಿಪ್

ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ನಿಟ್ಟಿನಲ್ಲಿ ಎಸ್ ಬಿಐ, ಹೆಚ್‌ಡಿಎಫ್‌ಸಿ ಬ್ಯಾಂಕ್ ಗಳು ಹಾಗೆ ಇನ್ನೂ ಕೆಲವು ಶಿಕ್ಷಣ ಸಂಸ್ಥೆಗಳು ಸ್ಕಾಲರ್‌ಶಿಪ್‌ ಮೂಲಕ ಮಕ್ಕಳ ಓದುವ ಕನಸಿಗೆ ಆಸರೆಯಾಗುತ್ತಿದೆ. ಅಷ್ಟೆ ಅಲ್ಲದೆ, ಸರ್ಕಾರ ವಿದ್ಯಾರ್ಥಿಗಳ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಆರ್ಥಿಕ ನೆರವು, ಸ್ಕಾಲರ್ ಶಿಪ್ ಜೊತೆಗೆ ಶಿಕ್ಷಣ ಬೆಂಬಲಿಸುವ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಜಾರಿಗೆ ತಂದಿದೆ.

ಜನವರಿ ತಿಂಗಳಲ್ಲಿ ಅನೇಕ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅವುಗಳಲ್ಲಿ ಮೂರು ಪ್ರಮುಖ ಸ್ಕಾಲರ್‌ಶಿಪ್‌ಗೆ ಅರ್ಜಿ ಸಲ್ಲಿಸುವುದರ ಕುರಿತಂತೆ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಹೊಸ ವರ್ಷದ ಹೊಸ್ತಿಲಲ್ಲಿ 2023ನೇ ಸಾಲಿನ ಅನೇಕ ವಿದ್ಯಾರ್ಥಿ ವೇತನಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜೊತೆಗೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಜನವರಿ ತಿಂಗಳಲ್ಲಿ ನೀಡಲಾಗುವ ವಿದ್ಯಾರ್ಥಿವೇತನಗಳ ಕುರಿತ ಮಾಹಿತಿ ಇಲ್ಲಿ ನೀಡಲಾಗಿದೆ.

ಕೋಟಕ್ ಕನ್ಯಾ ಸ್ಕಾಲರ್‌ಶಿಪ್‌ 2022

ಕೋಟಕ್ ಮಹಿಂದ್ರಾ ಗ್ರೂಪ್ ಕಂಪನಿಗಳು, ಶಿಕ್ಷಣ ಮತ್ತು ಜೀವನೋಪಾಯದ ಸಿಎಸ್‌ಆರ್ ಯೋಜನೆಯಡಿಯಲ್ಲಿ, ಕೋಟೆಕ್ ಎಜುಕೇಶನ್ ಫೌಂಡೇಶನ್‌ ಸ್ಥಾಪನೆ ಮಾಡಿದೆ. ದ್ವಿತೀಯ ಪಿಯುಸಿ ಅಥವಾ 12ನೇ ತರಗತಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಕೋಟೆಕ್ ಕನ್ಯಾ ಸ್ಕಾಲರ್‌ಶಿಪ್ ನೀಡಲಾಗುತ್ತದೆ. ಈ ಸ್ಕಾಲರ್‌ಶಿಪ್‌ಗೆ ಆಯ್ಕೆ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 1.5 ಲಕ್ಷದ ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ.

ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿಯು ಸಮಾಜದ ಹಿಂದುಳಿದ ವರ್ಗಗಳ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ, ಕೋಟಕ್ ಕನ್ಯಾ ಸ್ಕಾಲರ್‌ಶಿಪ್‌ ನೀಡುತ್ತಿದೆ. 2022ನೇ ಸಾಲಿನ ಕೋಟಕ್ ಕನ್ಯಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಮಾಜದ ಹಿಂದುಳಿದ ವರ್ಗಗಳ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಹೆಸರಾಂತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ವೃತ್ತಿಪರ ಪದವಿ ಕೋರ್ಸ್‌ಗಳನ್ನು ಮುಂದುವರೆಸಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ.

ಅರ್ಜಿ ಸಲ್ಲಿಕೆಗೆ 15-01-2023 ಕೊನೆ ದಿನವಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಬಹುದು. https://kotakeducation.org/kotak-kanya-scholarship/

ಅರ್ಜಿ ಸಲ್ಲಿಸುವ ವಿದ್ಯಾರ್ಥಿನಿಯು ದ್ವಿತೀಯ ಪಿಯುಸಿ ಅಥವಾ 12ನೇ ತರಗತಿಯ ಬೋರ್ಡ್‌ ಪರೀಕ್ಷೆಗಳಲ್ಲಿ ಶೇಕಡ 75ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು. ಪ್ರತಿಷ್ಠಿತ ಸಂಸ್ಥೆಗಳಲ್ಲಿ ( ಎನ್‌ಎಎಸಿ / ಎನ್‌ಐಆರ್‌ಎಫ್‌ ಮಾನ್ಯತೆ ಪಡೆದ) ವೃತ್ತಿಪರ ಕೋರ್ಸ್‌ಗಳಲ್ಲಿ ಮೊದಲನೇ ವರ್ಷದ ಪದವಿ ಕಾರ್ಯಕ್ರಮಗಳಿಗೆ ಪ್ರವೇಶ ಪಡೆದ ಪ್ರತಿಭಾವಂತ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ರೂ.3,20,000 ಅಥವಾ ಅದಕ್ಕಿಂತ ಕಡಿಮೆ ಇರಬೇಕು. ವೃತ್ತಿಪರ ಕೋರ್ಸ್‌ಗಳಲ್ಲಿ ಇಂಜಿನಿಯರಿಂಗ್, ಎಂಬಿಬಿಎಸ್‌, ಆರ್ಕಿಟೆಕ್ಚರ್, ಡಿಸೈನ್, ಇಂಟಿಗ್ರೆಟೆಡ್, ಎಲ್‌ಎಲ್‌ಬಿ ಇತ್ಯಾದಿ ವೃತ್ತಿಪರ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರಬೇಕು.

ರಿಲಯನ್ಸ್ ಫೌಂಡೇಶನ್ ಪದವಿಪೂರ್ವ ಸ್ಕಾಲರ್‌ಶಿಪ್ 2022-23

ಆರ್ಥಿಕವಾಗಿ ಸಮಸ್ಯೆ ಉಂಟಾಗಿ ಉನ್ನತ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನವನ್ನು ನೀಡಿ ಓದುವ ಆಸೆಗೆ ಬೆಂಬಲವಾಗಿ ನೆರವಾಗುತ್ತಿದೆ.

ಅರ್ಜಿ ಸಲ್ಲಿಕೆಗೆ 14-02-2023 ಕೊನೆ ದಿನವಾಗಿದೆ.

ಅರ್ಜಿ ಸಲ್ಲಿಕೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿಲು ಮತ್ತು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. https://www.scholarships.reliancefoundation.org/

ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 12ನೇ ತರಗತಿ ಪರೀಕ್ಷೆಯಲ್ಲಿ ಶೇಕಡ 60 ರಷ್ಟು ಅಂಕ ಗಳಿಸಿರಬೇಕಾಗುತ್ತದೆ. ವಿದ್ಯಾರ್ಥಿಗಳ ಕುಟುಂಬದ ಆದಾಯ ಎಲ್ಲಾ ಮೂಲಗಳಿಂದ ವಾರ್ಷಿಕ 15 ಲಕ್ಷಗಳಿಗಿಂತ ಹೆಚ್ಚಿರಬಾರದು. ಯಾವುದೇ ವಿಷಯದಲ್ಲಿ ಪದವಿಪೂರ್ವ ಕೋರ್ಸ್‌ ಅನ್ನು ಓದುತ್ತಿರಬೇಕು. ಪದವಿ ಮೊದಲನೇ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ರಿಲಯನ್ಸ್ ಫೌಂಡೇಶನ್ ಪದವಿಪೂರ್ವ ವಿದ್ಯಾರ್ಥಿವೇತನ ಕಾರ್ಯಕ್ರಮದಡಿಯಲ್ಲಿ 5,000 ಸಾವಿರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಈ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ದಿನಾಂಕ 14-02-2023ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಈ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಾರ್ಷಿಕ 2 ಲಕ್ಷದ ವರೆಗೂ ವಿದ್ಯಾರ್ಥಿವೇತನ ದೊರೆಯಲಿದೆ.

ಫಿಲಿಪ್ಸ್ ವಿದ್ಯಾರ್ಥಿವೇತನ 2022-23

ಫಿಲಿಪ್ಸ್ ವಿದ್ಯಾರ್ಥಿವೇತನವನ್ನು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಓದುವ ಕನಸಿಗೆ ನೆರವಾಗುವ ನಿಟ್ಟಿನಲ್ಲಿ ನೀಡಲಾಗುತ್ತದೆ. ಈ ವಿದ್ಯಾರ್ಥಿವೇತನದ ಅಡಿಯಲ್ಲಿ ಎಂಬಿಬಿಎಸ್, ಬಿಡಿಎಸ್, ನರ್ಸಿಂಗ್, ಬಿ.ಫಾರ್ಮ್, ಬಿಹೆಚ್‌ಎಂಎಸ್‌ ಅಥವಾ ಮೆಡಿಕಲ್‌ಗೆ ಸಂಬಂಧಿಸಿದ ಕೋರ್ಸ್‌ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನದ ಪ್ರಯೋಜನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಫಿಲಿಪ್ಸ್ ವಿದ್ಯಾರ್ಥಿವೇತನ 2022-23 ಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ.

ಅರ್ಜಿ ಸಲ್ಲಿಕೆಗೆ : 31-01-2023 ಕೊನೆ ದಿನವಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಈ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಾರ್ಷಿಕ 50 ಸಾವಿರ ವಿದ್ಯಾರ್ಥಿವೇತನ ನೀಡಲಾಗುತ್ತದೆ.

ಎಂಬಿಬಿಎಸ್, ಬಿಡಿಎಸ್, ನರ್ಸಿಂಗ್, ಬಿ.ಫಾರ್ಮ್, ಬಿಹೆಚ್‌ಎಂಎಸ್‌ ಅಥವಾ ಮೆಡಿಕಲ್‌ಗೆ ಸಂಬಂಧಿಸಿದ ಕೋರ್ಸ್‌ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 12ನೇ ತರಗತಿ ಪರೀಕ್ಷೆಯಲ್ಲಿ ಶೇಕಡ 70 ರಷ್ಟು ಅಂಕಗಳಿಸಿರಬೇಕು. ವಿದ್ಯಾರ್ಥಿಗಳ ಕುಟುಂಬದ ಆದಾಯ ಎಲ್ಲಾ ಮೂಲಗಳಿಂದ ವಾರ್ಷಿಕ 6 ಲಕ್ಷಗಳಿಗಿಂತ ಹೆಚ್ಚಿರಬಾರದು. ಮೇಲೆ ತಿಳಿಸಿದ ಅರ್ಹತೆ ಇರುವ ಅಭ್ಯರ್ಥಿಗಳು ದಿನಾಂಕ 31-01-2023ರ ಒಳಗಾಗಿ ಅರ್ಜಿ ಸಲ್ಲಿಸಿ ಈ ವಿದ್ಯಾರ್ಥಿವೇತನದ ಪ್ರಯೋಜನ ಪಡೆಯಬಹುದಾಗಿದೆ.

Leave A Reply

Your email address will not be published.