ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಬಜರಂಗದಳ ಮುಖಂಡನ ಶವ ಪತ್ತೆ

ಮಂಗಳೂರು : ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಬಜರಂಗದಳಕಲ್ಲಡ್ಕ ಪ್ರಖಂಡದ ಗೋ ರಕ್ಷಾ ಪ್ರಮುಖ್(Gou rakshak pramuk) ರಾಜೇಶ್ ಪೂಜಾರಿ(Rajesh Poojary) (26) ಮೃತದೇಹ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಸೇತುವೆಯಲ್ಲಿ ದ್ವಿಚಕ್ರವಾಹನ ಪತ್ತೆಯಾದ ಹಿನ್ನೆಲೆ ಸಂಶಯಗೊಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರ ತಂಡ ಕಾರ್ಯಚರಣೆಯಲ್ಲಿ ಮೃತದೇಹ ಪತ್ತೆಯಾಗಿದೆ.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ರಾಜೇಶ್ ಸಜೀಪದ ಮನೆಯಿಂದ ಬರುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ವೇಳೆ ಹಳೆಯ ಪಾಣೆಮಂಗಳೂರು ಸೇತುವೆಗೆ ದ್ವಿಚಕ್ರವಾಹನ ಡಿಕ್ಕಿಯಾಗಿ ನೇತ್ರಾವತಿ ನದಿಗೆ ಬಿದ್ದು ಸಾವನ್ನಪ್ಪಿರಬಹುದಾ? ಎಂಬ ಸಂದೇಹ ವ್ಯಕ್ತವಾಗಿದೆ. ರಾಜೇಶ್ ಪೂಜಾರಿ ಸಾವಿನ ಬಗ್ಗೆ ಸ್ಥಳೀಯವಾಗಿ ಅನುಮಾನ ವ್ಯಕ್ತವಾಗಿದ್ದು, ಆತ್ಮಹತ್ಯೆ ಅಥವಾ ಅಪಘಾತವೋ ಎಂಬ ಬಗ್ಗೆ ಅನುಮಾನ ಮೂಡಿದೆ. ರಾಜೇಶ್ ಭಜರಂಗದಳದ ಜವಾಬ್ದಾರಿ ಹೊಂದಿದ್ದ ಮುಖಂಡನಾಗಿದ್ದು, ಹಲವು ಸಾಮಾಜಿಕ ‌ಮತ್ತು ಧಾರ್ಮಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.

Leave A Reply

Your email address will not be published.