BPL ಪಡಿತರ ಚೀಟಿದಾರರೇ ಈ ವಿಷಯ ನಿಮಗೆ ತಿಳಿದಿದ್ದರೆ ಉತ್ತಮ

ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ರೂಪಿಸಿದ್ದು, ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ . ಜನತೆಯ ಆರ್ಥಿಕ ಸ್ಥಿತಿಗತಿಯನ್ನು ಪರಾಮರ್ಶೆ ನಡೆಸಿ ಅದರಂತೆ ಎಪಿಎಲ್ ಹಾಗೂ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಕ್ಕಿ, ಪಡಿತರ ಚೀಟಿ ವಿತರಣೆ ಮಾಡಿ ನೆರವಾಗುತ್ತಿವೆ.

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ (ಪಿಎಂಜಿಕೆಎವೈ)ಯಲ್ಲಿ ಬಿಡುಗಡೆಗೊಳಿಸುತ್ತಿದ್ದ ಆಹಾರಧಾನ್ಯ ಹಂಚಿಕೆಯನ್ನು ಜನವರಿ-2023ರ ಮಾಹೆಯಲ್ಲಿ ಸ್ಥಗತಿಗೊಂಡಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ (ಎನ್‍ಎಫ್‍ಎಸ್‍ಎ) ಪಿಹೆಚ್‍ಹೆಚ್ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ ತಲಾ 5 ಕೆಜಿಯಂತೆ ಹಾಗೂ ಪ್ರತಿ ಅಂತ್ಯೋದಯ ಪಡಿತರ ಚೀಟಿಗೆ ತಲಾ 35 ಕೆ.ಜಿ ಅಕ್ಕಿಯನ್ನು ಬಿಡುಗಡೆ ಮಾಡಲಾಗಿದೆ.

ಈ ಕುರಿತು ಪಡಿತರ ಚೀಟಿದಾರರು ಸಂಬಂಧಪಟ್ಟಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರಧಾನ್ಯವನ್ನು ಉಚಿತವಾಗಿ ಪಡೆದುಕೊಳ್ಳಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ಮಾಹಿತಿ ನೀಡಿದ್ದಾರೆ. ಚಿತ್ರದುರ್ಗ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಜಿಲ್ಲೆಯ 357539 ಪಿಹೆಚ್‍ಹೆಚ್ (ಬಿಪಿಎಲ್) ಮತ್ತು 42333 ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿಗಳಿಗೆ ಜನವರಿ-2023ರ ಮಾಹೆಗೆ ಆಹಾರಧಾನ್ಯ ಬಿಡುಗಡೆ ಮಾಡಲಾಗಿದೆ.

Leave A Reply

Your email address will not be published.