Education: ವಿದ್ಯಾರ್ಥಿಗಳೇ ಗಮನಿಸಿ | ಹೊಸ ಜಾಲತಾಣ ಬಿಡುಗಡೆ ಮಾಡಿದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ
ಇದೀಗ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಒಂದನ್ನು ತಿಳಿಸಲಾಗಿದೆ. ಸದ್ಯ ಎಸ್ಸೆಸ್ಸೆಲ್ಸಿ, ಪಿಯು ಪರೀಕ್ಷೆಯ ಚಟುವಟಿಕೆಗಳ ಆನ್ಲೈನ್ ಕಾರ್ಯಗಳು, ಶಾಲಾ ಲಾಗಿನ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಣಾಧಿಕಾರಿಗಳ ಲಾಗಿನ್ ಹಾಗೂ ಇತರೆ ಸೇವೆಗಳು ಇನ್ನುಮುಂದೆ ನೂತನ ಜಾಲತಾಣದಲ್ಲೇ ಸಿಗಲಿವೆ. ಇದುವರೆಗೂ ಹಳೆಯ ಜಾಲತಾಣವನ್ನೇ ಬಳಸಲಾಗುತ್ತಿತ್ತು. ಜನವರಿ 10ರಿಂದ ಹೊಸ ಜಾಲತಾಣ ತೆರೆದಿದೆ. ಇನ್ನು ಮುಂದೆ ಇದನ್ನು ಉಪಯೋಗಿಸಬಹುದು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷಾ ವಿಭಾಗವನ್ನು ಒಟ್ಟುಗೂಡಿಸಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಸ್ತಿತ್ವಕ್ಕೆ ತರಲಾಗಿದೆ.
ಪರೀಕ್ಷಾ ವಿಭಾಗದ ನಿರ್ದೇಶಕ ಎಚ್.ಎನ್.ಗೋಪಾಲಕೃಷ್ಣ ಈ ಬಗ್ಗೆ ತಿಳಿಸಿದ್ದು ಸದ್ಯ CBSE ಈಗಾಗಲೇ ಡಿಜಿಟಲ್ ಇಂಡಿಯಾ ಪ್ರಶಸ್ತಿಗೆ ಭಾಜನವಾಗಿದ್ದು ಅದರಲ್ಲೂ ಸಹ ವಿದ್ಯಾರ್ಥಿಗಳ ಸಂಪೂರ್ಣ ದಾಖಲೆಗಳು ಒಂದೆಡೆ ಸಿಗುವಂತೆ ನೋಡಿಕೊಳ್ಳಲಾಗಿದೆ. ಪರೀಕ್ಷೆಗೆ ಹಾಗೂ ಮೌಲ್ಯ ಮಾಪನಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿ ಬೇಕಿದ್ದರೂ ಸಹ ನೀವು ಈ ಜಾಲತಾಣಕ್ಕೆ ಭೇಟಿ ನೀಡಬಹುದು. ನಿಖರವಾದ ಹಾಗೂ ತಕ್ಷಣದ ಮಾಹಿತಿ ಇಲ್ಲಿ ಲಭ್ಯವಿರುತ್ತದೆ.
ಈ ಹೊಸ ಜಾಲತಾಣದಲ್ಲಿ ವಿದ್ಯಾರ್ಥಿಗಳಿಗೆ ಪೂರಕವಾದ ಮಾಹಿತಿಗಳನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳಷ್ಟೇ ಅಲ್ಲ ಶಿಕ್ಷಕರೂ ಸಹ ಇದರ ಪ್ರಯೋಜನ ಪಡೆದುಕೊಳ್ಳಬಹುದು. ಅಧಿಕೃತ ಜಾಲತಾಣದ ಲಿಂಕ್ ಕೆಳಗೆ ನೀಡಲಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೂತನ ಜಾಲತಾಣವನ್ನು ರೂಪಿಸಿದ್ದು, ಸಾರ್ವಜನಿಕರು, ಶಿಕ್ಷಕರು, ವಿದ್ಯಾರ್ಥಿಗಳು ಸಂಪರ್ಕಿಸಬಹುದು ಮತ್ತು ವಿದ್ಯಾರ್ಥಿಗಳಿಗೆ ಇದರಿಂದ ಪ್ರಯೋಜನವಾಗಲಿ ಎಂಬ ಉದ್ದೇಶ ಹೊಂದಿದೆ.