SSLC ವಿದ್ಯಾರ್ಥಿಗಳೇ ಗಮನಿಸಿ, ನಿಮಗೊಂದು ಮಹತ್ವದ ಮಾಹಿತಿ
ಬೆಂಗಳೂರು: 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. 2019-20 ನೇ ಸಾಲಿನ ಪ್ರಶ್ನೆಪತ್ರಿಕೆಯ ಸ್ವರೂಪ ಮತ್ತು ಕಠಿಣತೆಯ ಮಟ್ಟವನ್ನು ಅನುಸರಿಸಿ 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಹಿನ್ನಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಇಂಗ್ಲೀಷ್, ತೃತೀಯ ಭಾಷೆ ಹಿಂದಿ, ಕೋರ್ ವಿಷಯಗಳಾದ ಗಣಿತ, ವಿಜ್ಞಾನ ಮತ್ತು ಸಮಾಜವಿಜ್ಞಾನ ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ಮಂಡಲಿಯಲ್ಲಿ ಸಿದ್ಧಪಡಿಸಲಾಗಿದ್ದು, ಸದರಿ ಮಾದರಿ ಪ್ರಶ್ನೆಪತ್ರಿಕೆಗಳನ್ನು ಮಂಡಲಿಯ ಜಾಲತಾಣ kseab.karnataka.gov.in ರಲ್ಲಿ ಪ್ರಕಟಿಸಲಾಗಿದೆ.
ಮಾದರಿ ಪ್ರಶ್ನೆಪತ್ರಿಕೆಗಳು ಹೊಂದಿರುವ ಸ್ವರೂಪ ಮತ್ತು ಕಠಿಣತೆಯ ಮಟ್ಟವನ್ನು, 2023 ರ ಮಾರ್ಚ್/ ಏಪ್ರಿಲ್ ನಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಸಹ ಒಳಗೊಂಡಿರುತ್ತವೆ. ಆದ್ದರಿಂದ ಈ ಮಾದರಿ ಪ್ರಶ್ನೆಪತ್ರಿಕೆಗಳ ಉಪಯೋಗ ಪಡೆಯುವಂತೆ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯ ಶಿಕ್ಷಕವೃಂದಗಳು ಮಾರ್ಗದರ್ಶನ ಮಾಡಲು ಈ ಮೂಲಕ ತಿಳಿಸಿದೆ.
ಇನ್ನುಳಿದ ಭಾಷಾ ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ಮುಂದಿನ ದಿನಗಳಲ್ಲಿ ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲು ಕ್ರಮವಹಿಸಲಾಗುವುದು ಎಂದು ಇದೇ ವೇಳೆ ಪ್ರಕಟಣೆಯಲ್ಲಿ ತಿಳಿಸಿದೆ.
ಮಾದರಿ ಪ್ರಶ್ನೆ ಪತ್ರಿಕೆಗಳಿಗಾಗಿ ಈ ವೆಬ್ಸೈಟ್ ಅನ್ನು ತೆರೆಯಿರಿ :
https://kseab.karnataka.gov.in/new-page/Model%20question%20papers%20of%202022-23%20SSLC%20Examination/en