‘ಮಠ’ ನಿರ್ದೇಶಕ ಗುರು ಪ್ರಸಾದ್ ಬಂಧನ

Share the Article

ಇತ್ತಿಚಿನ ದಿನಗಳಲ್ಲಿ ನಿರ್ದೇಶಕ ಗುರುಪ್ರಸಾದ್​ ಒಂದಲ್ಲ ಒಂದು ವಿವಾದದ ಮೂಲಕ ಸುದ್ದಿ ಆಗುತ್ತಿದ್ದಾರೆ. ಇದೀಗ ,ಚೆಕ್​ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಗಿರಿನಗರ ಠಾಣಾ ವ್ಯಾಪ್ತಿಯಲ್ಲಿ ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ. ಶ್ರೀನಿವಾಸ್ ಹೆಸರಿನ ವ್ಯಕ್ತಿಗೆ ಹಣ ಕೊಡುವ ವಿಚಾರದ ಕುರಿತಂತೆ ಪ್ರಕರಣ ದಾಖಲಾಗಿದ್ದು, ಇವರಿಗೆ ಗುರುಪ್ರಸಾದ್ ಚೆಕ್ ನೀಡಿದ್ದಾರೆ ಎನ್ನಲಾಗಿದ್ದು, ಆದರೆ, ಚೆಕ್ ಬೌನ್ಸ್ ಆಗಿರುವ ಹಿನ್ನೆಲೆ ವಂಚನೆ ಹಾಗು ಮೋಸ ಮಾಡಿದ ಪ್ರಕರಣದ ಅಡಿಯಲ್ಲಿ ಗುರುಪ್ರಸಾದ್ ಅವರನ್ನು ಅರೆಸ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಗುರು ಪ್ರಸಾದ್ ಅವರನ್ನು ಬಂಧಿಸಿದ್ದು ಪೊಲೀಸರು ಕೋರ್ಟ್ ಮುಂದೆ ಹಾಜರು ಪಡಿಸಲಿದ್ದಾರೆ. ಶ್ರೀನಿವಾಸ್ ಹೆಸರಿನ ವ್ಯಕ್ತಿಗೆ ಹಣ ಕೊಡುವ ವಿಚಾರಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದ್ದು ಗುರು ಪ್ರಸಾದ್ ವಿರುದ್ಧ NBW ಜಾರಿಯಾಗಿತ್ತು. ಸದ್ಯ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ತನಿಖೆಯ ಬಳಿಕವಷ್ಟೇ ಸತ್ಯ ಹೊರ ಬರಬೇಕಾಗಿದೆ.

Leave A Reply