SSC ಇಂದ ಎಂಟಿಎಸ್‌, ಹವಾಲ್ದಾರ್ ಹುದ್ದೆಗೆ ಅಧಿಸೂಚನೆ ಪ್ರಕಟ | ಬರೋಬ್ಬರಿ 11,409 ಹುದ್ದೆ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಸಂಸ್ಥೆಗಳು, ಇಲಾಖೆಗಳು, ಕಚೇರಿಗಳಲ್ಲಿ ನೇಮಕ ಮಾಡಲು ಸಿಬ್ಬಂದಿ ನೇಮಕಾತಿ ಆಯೋಗವು ಇದೀಗ ಮಲ್ಟಿ ಟಾಸ್ಕಿಂಗ್ ಸ್ಟಾಫ್ (ನಾನ್-ಟೆಕ್ನಿಕಲ್) ಹಾಗೂ ಹವಾಲ್ದಾರ್ ಹುದ್ದೆಗಳ ಪರೀಕ್ಷೆಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಜನವರಿ 18 ರಿಂದ ಫೆಬ್ರುವರಿ 17, 2023ರವರೆಗೆ ಪರೀಕ್ಷೆಗೆ ರಿಜಿಸ್ಟ್ರೇಷನ್‌ ಪಡೆಯಲು ಅವಕಾಶ ನೀಡಲಾಗಿದೆ. ಈ ಹುದ್ದೆಗಳಿಗೆ ಏಪ್ರಿಲ್ ತಿಂಗಳಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವುದಾಗಿ ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ. ಈ ಹುದ್ದೆಗಳಿಗೆ 7ನೇ ವೇತನ ಆಯೋಗದ ಪ್ರಕಾರ ಲೆವೆಲ್-1 ವೇತನ ನೀಡಲಾಗುತ್ತದೆ. ಗ್ರೂಪ್‌ ಸಿ ನಾನ್‌-ಗೆಜೆಟೆಡ್ ಹುದ್ದೆಗಳು ಇವಾಗಿವೆ.

ಹುದ್ದೆಗಳ ವಿವರ : ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) : 10,880
ಹವಾಲ್ದಾರ್ ಇನ್ ಸಿಬಿಐಸಿ ಮತ್ತು ಸಿಬಿಎನ್ : 529

ಆನ್‌ಲೈನ್‌ ರಿಜಿಸ್ಟ್ರೇಷನ್ ಸಲ್ಲಿಸಲು ಆರಂಭಿಕ ದಿನಾಂಕ : 18-01-2023
ಆನ್‌ಲೈನ್‌ ರಿಜಿಸ್ಟ್ರೇಷನ್ ಸಲ್ಲಿಕೆಗೆ ಕೊನೆ ದಿನಾಂಕ: 17-02-2023 ರಾತ್ರಿ 11 ಗಂಟೆವರೆಗೆ.
ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ: 19-02-2023 ರಾತ್ರಿ 11 ಗಂಟೆವರೆಗೆ.
ಆಫ್‌ಲೈನ್‌ ಚಲನ್‌ ಜೆನೆರೇಟ್ ಮಾಡಲು ಕೊನೆ ದಿನಾಂಕ:19-02-2023 ರಾತ್ರಿ 11 ಗಂಟೆವರೆಗೆ.
ಆಫ್‌ಲೈನ್‌ ಮೂಲಕ ಶುಲ್ಕ ಪಾವತಿಗೆ ಕೊನೆ ದಿನಾಂಕ: 20-02-2023
ಅಪ್ಲಿಕೇಶನ್‌ ತಿದ್ದುಪಡಿಗೆ ಅವಕಾಶ ನೀಡುವ ದಿನಾಂಕ : ಫೆಬ್ರುವರಿ 23 ರಿಂದ 24 ರ ರಾತ್ರಿ 11 ಗಂಟೆವರೆಗೆ.
ಕಂಪ್ಯೂಟರ್ ಆಧಾರಿತ ಪರೀಕ್ಷೆ ದಿನಾಂಕ: 2023 ರ ಏಪ್ರಿಲ್

ಶೈಕ್ಷಣಿಕ ಅರ್ಹತೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆ ಪಾಸ್‌ ಮಾಡಿರಬೇಕು.

ವಯೋಮಿತಿ : ಕನಿಷ್ಠ 18 ವರ್ಷ ಆಗಿರಬೇಕು. ಎಂಟಿಎಸ್ ಮತ್ತು ಹವಾಲ್ದಾರ್ ಇನ್‌ ಸಿಬಿಎನ್ (ಕಂದಾಯ ಇಲಾಖೆ) ಹುದ್ದೆಗಳಿಗೆ ಗರಿಷ್ಠ 25 ವರ್ಷ ಮೀರಿರಬಾರದು.

  • ಹವಾಲ್ದಾರ್ ಇನ್ ಸಿಬಿಐಸಿ (ಕಂದಾಯ ಇಲಾಖೆ) ಮತ್ತು ಕೆಲವು ಎಂಟಿಎಸ್ ಹುದ್ದೆಗಳಿಗೆ ಗರಿಷ್ಠ 27 ವರ್ಷ ಮೀರಿರಬಾರದು.
    ಎಸ್‌ಸಿ / ಎಸ್‌ಟಿ ಅಭ್ಯರ್ಥಿ : 5 ವರ್ಷ, ಒಬಿಸಿ ಅಭ್ಯರ್ಥಿ : 3 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿ (Unreserved) : 10 ವರ್ಷ, Pwd (OBC) : 13 ವರ್ಷ, Pwd (SC/ST) : 15 ವರ್ಷ, ಮಾಜಿ ಸೈನಿಕ (ESM) : 3 ವರ್ಷ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯಿಸುತ್ತದೆ.

ಅರ್ಜಿ ಶುಲ್ಕ : ರೂ.100, ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ, ಮಹಿಳಾ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ವೇತನ ಶ್ರೇಣಿ : Rs.5200-20200.

ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್‌ಸೈಟ್‌ ವಿಳಾಸ : https://ssc.nic.in/

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Leave A Reply

Your email address will not be published.