KPSC : ಪಿಡಬ್ಲ್ಯೂಡಿ ಜೆಇ ಪ್ರಾವಿಷನಲ್ ಲಿಸ್ಟ್‌ ಪ್ರಕಟ

ಲೋಕೋಪಯೋಗಿ ಇಲಾಖೆಯಲ್ಲಿನ ಗ್ರೂಪ್‌ ಸಿ ವೃಂದದ ಕಿರಿಯ ಇಂಜಿನಿಯರ್ ಹುದ್ದೆಗಳಿಗೆ ಪ್ರಾವಿಷನಲ್ ಲಿಸ್ಟ್‌ ಮತ್ತು ಸದರಿ ಆಯ್ಕೆಪಟ್ಟಿಗೆ ಪರಿಗಣಿಸಿದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ದಿನಾಂಕ 27-10-2021 ರಂದು ಈ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿತ್ತು. ಇದೀಗ ಲೋಕೋಪಯೋಗಿ ಇಲಾಖೆಯ ಗ್ರೂಪ್‌ ಸಿ ವೃಂದದ ಕಿರಿಯ ಇಂಜಿನಿಯರ್ (ಸಿವಿಲ್) 325+5 ಹೈದೆರಾಬಾದ್ ಕರ್ನಾಟಕ ವೃಂದದ ಹುದ್ದೆಗಳನ್ನೂ ಒಳಗೊಂಡಂತೆ ಒಟ್ಟು 330 ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟಂತೆ ಇದೀಗ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. PWD JE ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಗೆ ಪರಿಗಣಿಸಲಾಗಿರುವ ಕೆಟಗರಿವಾರು ಕೊನೆ ಅಭ್ಯರ್ಥಿಗಳ ಕಟ್‌ ಆಫ್‌ ಅಂಕಗಳನ್ನು ಕೆಪಿಎಸ್‌ಸಿ ಬಿಡುಗಡೆ ಮಾಡಿದ್ದು ಅಭ್ಯರ್ಥಿಗಳು ಆಯ್ಕೆಪಟ್ಟಿಯಲ್ಲಿ ತಮ್ಮ ಹೆಸರಿನ ಜೊತೆಗೆ ಪೂರ್ಣ ವಿಳಾಸ, ರಿಜಿಸ್ಟರ್ ನಂಬರ್, ಸ್ಪರ್ಧಾತ್ಮಕ ಪರೀಕ್ಷೆಗಳ ಅಂಕಗಳನ್ನು ನೋಡಬಹುದಾಗಿದೆ.ಇದರ ಜೊತೆಗೆ ಪ್ರಸ್ತುತ ಬಿಡುಗಡೆ ಮಾಡಲಾದ ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ಆಯೋಗ ಅವಕಾಶ ಕಲ್ಪಿಸಿದ್ದು, ಆಕ್ಷೇಪಣೆ ಅರ್ಜಿ ಸಲ್ಲಿಸಲು : 25-01-2023 ಕೊನೆ ದಿನಾಂಕವಾಗಿದೆ .

ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಬೇಕಾದ ವಿಳಾಸ ಹೀಗಿದೆ.ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-560001. ಈ ವಿಳಾಸಕ್ಕೆ ತಮ್ಮ ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಬೇಕು.ಅಭ್ಯರ್ಥಿಗಳು ಲೋಕೋಪಯೋಗಿ ಇಲಾಖೆಯಲ್ಲಿನ ಗ್ರೂಪ್‌ ಸಿ ವೃಂದದ ಕಿರಿಯ ಇಂಜಿನಿಯರ್ (ಸಿವಿಲ್) ತಾತ್ಕಾಲಿಕ ಆಯ್ಕೆಪಟ್ಟಿ ಹಾಗೂ ಕಟ್‌ ಆಫ್‌ ಅಂಕಗಳನ್ನು ಚೆಕ್‌ ಮಾಡಲು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.

ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಅಭಿಯಂತರರು (ಸಿವಿಲ್) ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆಪಟ್ಟಿ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಆಯೋಗವು ದಿನಾಂಕ 25-12-2022 ರಂದು ನಡೆಸಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್ ಹುದ್ದೆಗಳ ಸ್ಪರ್ಧಾತ್ಮಕ ಪರಿಷ್ಕೃತ ಕೀ ಉತ್ತರಗಳನ್ನು ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಲಾಗಿದೆ.

Leave A Reply

Your email address will not be published.