ಗುಳಿಕೆನ್ನೆ ಬೆಡಗಿ ನಟಿ ರಚಿತಾ ರಾಮ್ ಬಂಧನಕ್ಕೆ ಒತ್ತಾಯ, ದೂರು ದಾಖಲು
ಜನವರಿ 26ರಂದು ಕ್ರಾಂತಿ ಸಿನಿಮಾ ರಿಲೀಸ್ ಆಗಲಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಜೊತೆಗೆ ರಚಿತಾ ರಾಮ್ ತೆರೆ ಹಂಚಿಕೊಂಡಿದ್ದಾರೆ. ನಟ ದರ್ಶನ್ ತೂಗುದೀಪ ಹಾಗೂ ರಚಿತಾ ರಾಮ್ ಅಭಿನಯದ ಕ್ರಾಂತಿ ಚಿತ್ರವನ್ನೂ ವಿ. ಹರಿಕೃಷ್ಣ ನಿರ್ದೇಶಿಸಿದ್ದಾರೆ. ಕ್ರಾಂತಿ ಸಿನಿಮಾದ ಪ್ರಮೋಷನ್ ಸಂದರ್ಭ ಡಿಂಪಲ್ ಕ್ವೀನ್ ನೀಡಿದ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದೆ.
ಗಣರಾಜ್ಯೋತ್ಸವದಂದು ಬಿಡುಗಡೆಯಾಗುತ್ತಿರುವ ಚಿತ್ರವನ್ನು ನೋಡಲು ದಚ್ಚು ಅಭಿಮಾನಿಗಳು ಕಾತುರದಿಂದ ಎದುರು ನೋಡುತ್ತಿದ್ದಾರೆ. ಇದರ ಜೊತೆಗೆ ಕ್ರಾಂತಿ ಸಿನಿಮಾದ ಪ್ರಚಾರ ಕಾರ್ಯ ಕೂಡ ಭರದಿಂದ ಸಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಜೊತೆಗೆಯೂಟ್ಯೂಬ್ ನಲ್ಲಿಯೂ ಕೂಡ ಸಿನಿಮಾ ಪ್ರಚಾರ ಮಾಡಲಾಗುತ್ತಿದೆ. ಆದರೆ, ಈ ಚಿತ್ರ ಬಿಡುಗಡೆಗೂ ಮುನ್ನವೇ ಚಿತ್ರದ ನಾಯಕಿ ರಚಿತಾ ರಾಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.
ಹೌದು!!! ಡಿಂಪಲ್ ಕ್ವೀನ್, ರಚಿತಾ ರಾಮ್ ಅವರು ನೀಡಿದ್ದ ಹೇಳಿಕೆಯೊಂದು ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ.ಕಳೆದ ವಾರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ವೇಳೆ ರಚಿತಾ ರಾಮ್ ರವರು, ಗಣರಾಜ್ಯೋತ್ಸವದ ಕುರಿತಾಗಿ ಆಡಿದ ಮಾತುಗಳೇ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ‘ಇಷ್ಟು ವರ್ಷ ಜನವರಿ 26 ಅಂದರೆ ಗಣರಾಜ್ಯೋತ್ಸವ. ಆದರೆ, ಈ ವರ್ಷ ಗಣರಾಜ್ಯೋತ್ಸವ ಮರೆತುಬಿಡಿ. ಕ್ರಾಂತಿಯ ಉತ್ಸವ ಆಚರಿಸಿ ಅಷ್ಟೇ’ ಎಂದು ನಟಿ ರಚಿತಾ ರಾಮ್ ಹೇಳಿಕೆ ನೀಡಿದ್ದು, ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ ಸಂಚಲನ ಮೂಡಿಸಿದೆ. ಇದನ್ನು ಕೇಳಿ ನೆಟ್ಟಿಗರು ರಚಿತಾ ರಾಮ್ ರವರಿಗೆ ಟ್ರೊಲ್ ಮಾಡುತ್ತಿದ್ದು ಅಷ್ಟೆ ಅಲ್ಲದೆ ನಟಿಯ ವಿರುದ್ಧ ಕಿಡಿ ಕಾರುತ್ತಿದ್ದಾರೆ.
ನಟಿ ರಚಿತಾ ರಾಮ್ ರವರು ನೀಡಿರುವ ಹೇಳಿಕೆ ದೇಶದ್ರೋಹವನ್ನು ಪ್ರತಿ ಬಿಂಬಿಸುವಂತೆ ಇದ್ದು, ಅವರನ್ನು ಈ ದೇಶದಿಂದ ಗಡಿಪಾರು ಮಾಡುವಂತೆ ಶಿವಲಿಂಗಯ್ಯ ರವರು ರಚಿತಾ ರಾಮ್ ವಿರುದ್ಧ ಮದ್ದೂರಿನ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಭಾರತದ ಸಂವಿಧಾನದ ಜೊತೆಗೆ ಗಣರಾಜ್ಯೋತ್ಸವಕ್ಕೆ ನಟಿ ರಚಿತಾ ರಾಮ್ ಅವರು ಅವಮಾನ ಮಾಡುವಂತೆ ಅವಹೇಳನಕಾರಿಯಾಗಿ ಮಾತನಾಡಿದ್ದು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಶಿವಲಿಂಗಯ್ಯರವರು ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ. ಅಷ್ಟೆ ಅಲ್ಲದೆ ,ಈ ದೇಶಕ್ಕಿಂತ ನಿಮ್ಮ ಚಿತ್ರ ಮಿಗಿಲಲ್ಲ ಹಾಗಾಗಿ, ಓದು ಬರಹ ಇಲ್ಲದವರ ರೀತಿ ಮಾತನಾಡಿ, ಗೌರವ ಕಳೆದುಕೊಳ್ಳಬೇಡಿ ಎಂದು ನೆಟ್ಟಿಗರು ಅಸಮಾಧಾನ ಹೊರ ಹಾಕಿದ್ದಾರೆ. ದೇಶದ ಮೇಲೆ ಗೌರವ ಇಲ್ಲದೇ ಹೋದಲ್ಲಿ ಪಾಕಿಸ್ತಾನಕ್ಕೆ ಹೋಗಿ ಎಂದೂ ಅವರು ನೆಟ್ಟಿಗರು ಕಿಡಿ ಕಾರಿದ್ದಾರೆ ಎಂದು ತಿಳಿದು ಬಂದಿದೆ.