ಈ ಸ್ಮಾರ್ಟ್ ಫೋನ್ ಎಲ್ಲರ ಮನಗೆಲ್ಲೋದು ಖಂಡಿತ | 2023 ರಲ್ಲಿ ಪಕ್ಕಾ ಸೌಂಡ್ ಮಾಡೋ ಫೋನ್ ಇದು |
ಈಗಾಗಲೇ ಸಾಕಷ್ಟು ಹೊಸ ಸ್ಮಾರ್ಟ್‌ಫೋನ್‌ಗಳು ಬಿಡುಗಡೆ ಆಗುತ್ತಲೇ ಇದೆ. ಒಂದೊಂದು ಬ್ರಾಂಡ್’ನ ಹೊಸ ಹೊಸ ಸ್ಟೈಲಿಶ್ ಮಾದರಿಯ ಸ್ಮಾರ್ಟ್ ಫೋನ್ ಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಲಿದೆ. ಈ ಪಟ್ಟಿಗೆ ಈಗ ಮತ್ತೊಂದು ಸೇರ್ಪಡೆ ಆಗಿದೆ. ಚೀನಾದ ಶಿಯೋಮಿ ಕಂಪೆನಿಯ ಶಿಯೋಮಿ Civi 3 ಸ್ಮಾರ್ಟ್‌ಫೋನ್ ಈಗಾಗಲೇ ಸಾಕಷ್ಟು ಸೌಂಡ್ ಮಾಡ್ತಿದೆ. ಈ ಹೊಸ ಸ್ಮಾರ್ಟ್‌ಫೋನ್ 2023 ರ ದ್ವಿತೀಯಾರ್ಧದಲ್ಲಿ ಬಿಡುಗಡೆಯಾಗುವ ಸಾದ್ಯತೆಯಿದೆ. ಬಿಡುಗಡೆಗೂ ಮುನ್ನವೇ ವಿವಿಧ ಕಾರಣಗಳಿಂದ ಈ ಫೋನ್ ಸದ್ದು ಮಾಡ್ತಿದೆ!!
ಹೌದು, ಶಿಯೋಮಿ Civi 3 ಸ್ಮಾರ್ಟ್‌ಫೋನ್ ಭಾರಿ ಸಂಚಲನ ಸೃಷ್ಟಿಸುವ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಅಲ್ಲದೆ ಇದರ ಫೀಚರ್ಸ್ ಕಾರಣಗಳಿಂದಾಗಿಯೂ ಫೋನ್ ಪ್ರಿಯರ ಗಮನಸೆಳೆಯುವುದರಲ್ಲಿ ಎರಡು ಮಾತಿಲ್ಲ. ಇದರ ಪ್ರೊಸೆಸರ್ ವಿಚಾರ ಇದೀಗ ಎಲ್ಲೆಡೆ ಸಂಚಲನ ಸೃಷ್ಟಿಸುವ ಮೂಲಕ ಈ ಫೋನ್ ಮಾರುಕಟ್ಟೆಯಲ್ಲಿ ದೂಳೆಬ್ಬಿಸುವ ಸೂಚನೆ ನೀಡಿದೆ.ಇದೀಗ ಇಡೀ ಮಾರುಕಟ್ಟೆಯೆ ಸಂಚಲನಗೊಳ್ಳುವಂತ ಸುದ್ದಿಯೊಂದು ಹೊರಬಿದ್ದಿದೆ. ಅದರಂತೆ ಶಿಯೋಮಿ Civi 3 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 8200 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗುತ್ತಿದೆ.
ಶಿಯೋಮಿ Civi 3 ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಜೊತೆಗೆ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿರಬಹುದು ಎನ್ನಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಡೈಮೆನ್ಸಿಟಿ 8200 ಚಿಪ್‌ಸೆಟ್ ಅನ್ನು ಜೊತೆಗೆ 8GB RAM ಮತ್ತು 256 GB ವರೆಗಿನ ಇಂಟರ್ ಸ್ಟೋರೇಜ್ ಆಯ್ಕೆಯೊಂದಿಗೆ ಬರಬಹುದು ಎಂದು ಅಂದಾಜಿಸಲಾಗಿದೆ.
ಇನ್ನು, ಸ್ಮಾರ್ಟ್‌ಫೋನ್‌ನ ಕ್ಯಾಮೆರಾ ಹೇಗಿದೆ ಅಂತೀರಾ.. ಶಿಯೋಮಿ Civi 3 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದರಲ್ಲಿ 64ಮೆಗಾಪಿಕ್ಸೆಲ್ ಸೆನ್ಸಾರ್ ಮೇನ್ ಕ್ಯಾಮೆರಾ,16 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಮತ್ತು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಡ್ಯುಯಲ್ ಸೆಲ್ಫಿ ಕ್ಯಾಮೆರಾದೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ
80W ವೇಗದ ಚಾರ್ಜಿಂಗ್‌ಗೆ ಬೆಂಬಲದ ಜೊತೆಗೆ 5000mAh ಬ್ಯಾಟರಿಯನ್ನೂ ಈ ಸ್ಮಾರ್ಟ್‌ಫೋನ್ ಹೊಂದಿರಲಿದೆ ಎನ್ನುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್‌ನ ಮೇಲೆ ಭಾರಿ ನಿರೀಕ್ಷೆ ಇಡಲಾಗಿದೆ. ಆದರೆ ಈ ಫೋನ್‌ನ ಫೀಚರ್ಸ್, ಬೆಲೆಯ ವಿವರಗಳು ಮುಂದಿನ ದಿನಗಳಲ್ಲಿ ಬಹಿರಂಗವಾಗುವ ಸಾಧ್ಯತೆಯಿದೆ.
ಇನ್ನು ಕಳೆದ ವರ್ಷ ಎಂಟ್ರಿ ನೀಡಿದ್ದ ಶಿಯೋಮಿ Civi 2 ಸ್ಮಾರ್ಟ್‌ಫೋನ್ ಕೂಡ ಆಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿತ್ತು. ಈ ಸ್ಮಾರ್ಟ್‌ಫೋನ್ 6.55 ಇಂಚಿನ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ನೀಡಲಿದೆ. ಇದು 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ನೀಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, 50 ಮೆಗಾಪಿಕ್ಸೆಲ್ ಸೆನ್ಸಾರ್ ನ ಮುಖ್ಯ ಕ್ಯಾಮೆರಾ ಪಡೆದಿದೆ. ಇದು ಕೂಡ ಡ್ಯುಯಲ್ ಸೆಲ್ಫಿ ಕ್ಯಾಮೆರಾಗಳನ್ನು ಪಡೆದಿದೆ. ಇದು 32 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 67W ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಐಸ್ ಬ್ಲೂ, ಪಿಂಕ್, ಕಪ್ಪು ಮತ್ತು ಬಿಳಿ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.