ಸ್ಯಾಂಡಲ್ ವುಡ್ ಹಿರಿಯ ನಟ ಲಕ್ಷ್ಮಣ್ ವಿಧಿವಶ !

Share the Article

ಸ್ಯಾಂಡಲ್ವುಡ್ ಹಿರಿಯ ನಟ ಲಕ್ಷ್ಮಣ್‌ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.

ಯಜಮಾನ’, ‘ಸೂರ್ಯವಂಶ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ ಗಮನ ಸೆಳೆದಿದ್ದ ನಟ ಲಕ್ಷ್ಮಣ್ ಇಂದು (ಜನವರಿ 23) ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಲಕ್ಷ್ಮಣ್ ನಿಧನಕ್ಕೆ ಸ್ಯಾಂಡಲ್‌ವುಡ್ ಗಣ್ಯರು ಮತ್ತು ಸಿನಿಪ್ರೇಮಿಗಳು ಸಂತಾಪ ಸೂಚಿಸಿದ್ದಾರೆ.

Leave A Reply