ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ 2022-23 | ಸಂಘಟಿತ ಕಾರ್ಮಿಕರ ಮಕ್ಕಳಿಗೆ ನೀಡುವ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ 2022- 2023 ಸಾಲಿನ ಸಂಘಟಿತ ಕಾರ್ಮಿಕರ ಮಕ್ಕಳಿಗೆ ನೀಡುವ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡುವ ಮೂಲಕ ಇಲಾಖೆ ಸಿಹಿಸುದ್ದಿ ನೀಡಿದೆ.

ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿ ಹಾಗೂ ವೈದ್ಯಕೀಯ /ಇಂಜಿನಿಯರಿಂಗ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದ್ದು. ಈ ಶೈಕ್ಷಣಿಕ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.28 ರವರೆಗೆ ವಿಸ್ತರಣೆ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗೆ ಇಲಾಖೆ ವಿಳಾಸ:
ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48,1ನೇ ಮಹಡಿ & 2ನೇ ಮಹಡಿ ,ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು – 560022

ದೂರವಾಣಿ ಸಂಖ್ಯೆ : 080-23475188, 8277291175, 8277120505, 9141585402, 9141602562

ವೆಬ್ ಸೈಟ್ : www.k1wbapps.karnataka.gov.in

Leave A Reply

Your email address will not be published.