ಮೊಟ್ಟೆ ಕೇಳಿದ್ರೆ ಮೊಟ್ಟೆಯನ್ನೇ ನೀಡ್ಬೇಕು, ಬಾಳೆಹಣ್ಣು, ಚಿಕ್ಕಿ ನೀಡುವಂತಿಲ್ಲ : ರಾಜ್ಯ ಸರ್ಕಾರ ಸೂಚನೆ
ಬೆಂಗಳೂರು : ಮೊಟ್ಟೆ ಪ್ರಿಯ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಶಾಲಾ ಮಕ್ಕಳು ಮೊಟ್ಟೆ ಕೇಳಿದರೆ ಮೊಟ್ಟೆಯನ್ನೇ ನೀಡಬೇಕು. ಬಾಳೆಹಣ್ಣು, ಚಿಕ್ಕಿ ನೀಡುವಂತಿಲ್ಲ ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಸರ್ಕಾರಿ ಶಾಲೆಯ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಯೋಜನೆಯನ್ನು ಶಿಕ್ಷಣ ಇಲಾಖೆ ಜಾರಿಗೆ ತಂದಿದೆ. ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಮಾತ್ರ ಬಾಳೆಹಣ್ಣು, ಮಾತ್ರ ಚಿಕ್ಕಿ ನೀಡಬಹುದು. ಆದರೆ ಕೆಲವು ಕಡೆ ಮಕ್ಕಳು ಮೊಟ್ಟೆ ಕೇಳಿದರೂ ಬಲವಂತವಾಗಿ ಬಾಳೆಹಣ್ಣು, ಚಿಕ್ಕಿ ನೀಡುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದೆ. ಆದ್ದರಿಂದ ಮೊಟ್ಟೆಕೇಳಿದವರಿಗೆ ಮೊಟ್ಟೆಯನ್ನೇ ನೀಡಬೇಕು ಎಂದು ಸೂಚನೆ ನೀಡಲಾಗಿದೆ.