ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರನ್ನು ಈ ರೀತಿ ಸೇರಿಸಿ | ಎಲ್ಲ ಪ್ರಕ್ರಿಯೆ ಇಲ್ಲಿದೆ

Share the Article

ರಾಜ್ಯ ಹಾಗೂ ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳ ಏಳಿಗೆಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಿ ಜನರಿಗೆ ಬೆಂಬಲವಾಗಿ ನಿಂತಿವೆ. ಅದೇ ರೀತಿಯಲ್ಲಿ ಸರ್ಕಾರ ಹಾಗೂ ರಾಜ್ಯ ಸರ್ಕಾರವು ಬಡ ಕುಟುಂಬಕ್ಕೆ ನೆರವಾಗುವ ಸಲುವಾಗಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾನ್ ಅನ್ನ ಯೋಜನೆ ಜಾರಿಗೆ ತಂದು ಬಡ ಕುಟುಂಬಕ್ಕೆ ಗೋಧಿ, ಅಕ್ಕಿ, ಎಣ್ಣೆ, ಬೇಳೆ, ಹಿಟ್ಟು ಮೊದಲಾದವುಗಳನ್ನು ಕಡಿಮೆ ದರದಲ್ಲಿ ಲಭ್ಯವಾಗುವಂತೆ ಮಾಡಿದೆ.
ನಿಮ್ಮಲ್ಲಿ ರೇಷನ್ ಕಾರ್ಡ್ ಇದ್ದು, ಆ ರೇಷನ್ ಕಾರ್ಡ್‌ಗೆ ಕುಟುಂಬದ ಹೊಸ ಸದಸ್ಯರ ಹೆಸರನ್ನು ಸೇರ್ಪಡೆ ಮಾಡುವುದು ಹೇಗೆ ಎಂಬ ಗೊಂದಲ ನಿಮ್ಮನ್ನು ಕಾಡುತ್ತಿದ್ದರೆ ಚಿಂತಿಸಬೇಕಾಗಿಲ್ಲ!!! ಈಗ ಆನ್‌ಲೈನ್‌ ಮೂಲಕ ರೇಷನ್ ಕಾರ್ಡ್‌ಗೆ ಹೊಸ ಸದಸ್ಯರ ಹೆಸರನ್ನು ಸೇರಿಸಬಹುದು.

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರವು ಈ ಯೋಜನೆಯಡಿಯಲ್ಲಿ ಒಟ್ಟಾಗಿ 3.91 ಲಕ್ಷ ಕೋಟಿ ರೂಪಾಯಿ ಸಬ್ಸಿಡಿಯನ್ನು ಒದಗಿಸುತ್ತಿದೆ. ಈವರೆಗೆ ದೇಶದಲ್ಲಿ 1,118 ಲಕ್ಷ ಟನ್ ರೇಷನ್ ಅನ್ನು ಪಡಿತರ ಅಂಗಡಿಯ ಮುಖಾಂತರ ವಿತರಣೆಯಾಗುತ್ತಿದೆ.
ಪ್ರಸ್ತುತ ರೇಷನ್ ಕಾರ್ಡ್ ನಾಗರಿಕರ ಗುರುತನ್ನು ಒದಗಿಸುವ ಮುಖ್ಯ ದಾಖಲೆಗಳಲ್ಲಿ ಒಂದಾಗಿದ್ದು, ಉಚಿತವಾಗಿ ಹಾಗೂ ಕಡಿಮೆ ದರದಲ್ಲಿ ಪಡಿತರ ಅಂಗಡಿಯಲ್ಲಿ ರೇಷನ್ ಅನ್ನು ಪಡೆಯಲು ಬಳಕೆ ಮಾಡೋದು ಎಲ್ಲರಿಗೂ ಗೊತ್ತಿರುವ ವಿಚಾರವೇ!! ಆದರೆ, ಸರ್ಕಾರದ ಬೇರೆ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಲು ರೇಷನ್ ಕಾರ್ಡ್ ಅಗತ್ಯವಾಗಿದ್ದು, ಹೀಗಾಗಿ ರೇಷನ್ ಕಾರ್ಡ್ ಗೆ ಹೆಸರನ್ನು ಸೇರ್ಪಡೆ ಮಾಡಲು ರಾಜ್ಯ ಸರ್ಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕಾಗುತ್ತದೆ.

ರೇಷನ್ ಕಾರ್ಡ್‌ಗೆ ಹೊಸ ಸದಸ್ಯರ ಹೆಸರನ್ನು ಸೇರ್ಪಡೆ ಮಾಡಲು ಕುಟುಂಬದ ಒಡೆಯನ ರೇಷನ್ ಕಾರ್ಡ್ ಜೊತೆಗೆ ಜೆರಾಕ್ಸ್ ಪ್ರತಿ ಬೇಕಾಗುತ್ತದೆ.ಹೊಸ ವಿವಾಹಿತ ಮಹಿಳೆಯಾಗಿದ್ದರೆ ಆಧಾರ್ ಕಾರ್ಡ್, ವಿವಾಹ ಪ್ರಮಾಣಪತ್ರ, ತನ್ನ ಪೋಷಕರ ರೇಷನ್ ಕಾರ್ಡ್ ಅನ್ನು ಹೊಂದಿರಬೇಕಾಗುತ್ತದೆ. ಅದೇ ರೀತಿ, ಮಗುವಿನ ಇಲ್ಲವೇ ಕುಟುಂಬದ ಹೊಸ ಸದಸ್ಯರ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಬೇಕಾಗಿದ್ದು, ಮಗುವಾಗಿದಲ್ಲಿ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. .

ರೇಷನ್ ಕಾರ್ಡ್‌ನಲ್ಲಿ ಆನ್‌ಲೈನ್‌ನಲ್ಲಿ ಸಹ ಹೆಸರನ್ನು ಸೇರಿಸಬಹುದು:
ಆಧಾರ್ ಕಾರ್ಡ್‌ಗೆ ಸಂಬಂಧಿಸಿದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಬಳಿಕ ಸಂಬಂಧಿಸಿದ ಅರ್ಜಿಯನ್ನು ಕಚೇರಿಗೆ ಸಲ್ಲಿಸಬೇಕು. ನೀವು ಮನೆಯಲ್ಲಿ ಕುಳಿತು ಆನ್‌ಲೈನ್‌ನಲ್ಲಿ ಹೊಸ ಸದಸ್ಯರ ಹೆಸರನ್ನು ಸೇರಿಸಲು ಮನವಿ ಮಾಡಬಹುದು. ನೀವು ನಿಮ್ಮ ರಾಜ್ಯದ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿದ ಬಳಿಕ ನಿಮ್ಮ ರಾಜ್ಯವು ಆನ್‌ಲೈನ್‌ನಲ್ಲಿ ಸದಸ್ಯರ ಹೆಸರನ್ನು ಸೇರಿಸುವ ಸೌಲಭ್ಯವನ್ನು ಹೊಂದಿದ್ದರೆ, ಮನೆಯಲ್ಲಿ ಕುಳಿತು ಈ ಕೆಲಸವನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ.

ಮಕ್ಕಳ ಹೆಸರನ್ನು ಪಡಿತರ ಚೀಟಿಯಲ್ಲಿ ನೋಂದಾಯಿಸಲು ಸರಳ ವಿಧಾನ ಅನುಸರಿಸಿ:
ನೀವು ಪಡಿತರ ಚೀಟಿಗೆ ಮಗುವಿನ ಹೆಸರನ್ನು ಸೇರಿಸಲು ಇಚ್ಛಿಸಿದರೆ, ಮೊದಲು ನೀವು ಅವರ ಆಧಾರ್ ಕಾರ್ಡ್ ಅನ್ನು ಮಾಡಿಸಬೇಕಾಗುತ್ತದೆ. ಆಧಾರ್ ಕಾರ್ಡ್ ನ ಜೊತೆಗೆ , ಮಗುವಿನ ಜನನ ಪ್ರಮಾಣ ಪತ್ರ ಕೂಡ ಅಗತ್ಯವಾಗಿದೆ. ಆಧಾರ್ ಕಾರ್ಡ್, ಬರ್ತ್ ಸರ್ಟಿಫಿಕೇಟ್ ಪಡೆದ ಬಳಿಕ ನೀವು ಆನ್‌ಲೈನ್‌ನ ಮೂಲಕವೂ ಕೂಡ ರೇಷನ್ ಕಾರ್ಡ್‌ನಲ್ಲಿ ಹೆಸರನ್ನು ನೋಂದಾಯಿಸಲು ಅರ್ಜಿ ಸಲ್ಲಿಸಬಹುದಾಗಿದೆ.

ರೇಷನ್‌ ಕಾರ್ಡ್‌ ಅಪ್‌ಡೇಟ್ ಮಾಡಿಕೊಳ್ಳುವ ವಿಧಾನ ಹೀಗಿದೆ:
ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಬೇಕು. ಹೋಮ್‌ ಪೇಜ್‌ನಲ್ಲಿರುವ ಹೊಸ ಸದಸ್ಯರನ್ನು ಸೇರ್ಪಡೆ ಮಾಡುವ ಆಯ್ಕೆ ಒತ್ತಿ ಕ್ಲಿಕ್ ಮಾಡಬೇಕು. ಆಗ, ಹೊಸ ಫಾರ್ಮ್ ತೆರೆಯಲಿದ್ದು, ಹೊಸ ಕುಟುಂಬ ಸದಸ್ಯರ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿಕೊಳ್ಳಬೇಕು. ಫಾರ್ಮ್ ಜೊತೆಗೆ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿಕೊಂಡು ಫಾರ್ಮ್ ಅನ್ನು ಸಬ್‌ಮಿಟ್ ಮಾಡಿದ ಬಳಿಕ ನಿಮಗೆ ರಿಜಿಸ್ಟ್ರೇಷನ್ ಸಂಖ್ಯೆ ಲಭ್ಯವಾಗಲಿದೆ. ಪೋರ್ಟಲ್‌ನಲ್ಲಿ ನಿಮ್ಮ ಫಾರ್ಮ್‌ನ ಬಗ್ಗೆ ಮಾಹಿತಿ ತಿಳಿಯಲು ಈ ರಿಜಿಸ್ಟ್ರೇಷನ್ ಸಂಖ್ಯೆಯನ್ನು ಬಳಕೆ ಮಾಡಬಹುದು. ಅಧಿಕಾರಿಗಳು ಫಾರ್ಮ್ ಹಾಗೂ ದಾಖಲೆಗಳನ್ನು ಚೆಕ್‌ ಮಾಡಿದ ಬಳಿಕ ಎಲ್ಲ ಮಾಹಿತಿ ಸರಿಯಾಗಿದ್ದರೆ, ಫಾರ್ಮ್ ಅನ್ನು ಮಾನ್ಯ ಮಾಡಿ, ರೇಷನ್ ಕಾರ್ಡ್ ಅನ್ನು ನಿಮ್ಮ ವಿಳಾಸಕ್ಕೆ ಪೋಸ್ಟ್ ಮೂಲಕ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ.

Leave A Reply