NMPT Recruitment 2023 : ಪದವೀಧರರಿಗೆ ಎನ್‌ಎಂಪಿಟಿಯಲ್ಲಿ ಬಂಪರ್ ಉದ್ಯೋಗ | ತಿಂಗಳಿಗೆ 1.40 ಲಕ್ಷ ಸಂಬಳ

NMPT Recruitment 2023: ಮಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತರಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ ಎಂದೇ ಹೇಳಬಹುದು. ನವ ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಇಲ್ಲಿದೆ. ಫೆಬ್ರವರಿ 13, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಫ್​ಲೈನ್(Offline)​ನಲ್ಲಿ ಮಾತ್ರ ಅರ್ಜಿ ಸ್ವೀಕಾರ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/01/2023
ಅರ್ಜಿ ಸಲ್ಲಿಸಲು ಕೊನೆ ದಿನ: ಫೆಬ್ರವರಿ 13, 2023

ಸಂಸ್ಥೆ : ನವ ಮಂಗಳೂರು ಬಂದರು ಟ್ರಸ್ಟ್
ಹುದ್ದೆ : ಅಸಿಸ್ಟೆಂಟ್ ಸೆಕ್ರೆಟರಿ
ಒಟ್ಟು ಹುದ್ದೆ : 2
ವಿದ್ಯಾರ್ಹತೆ : ಪದವಿ
ವೇತನ : ಮಾಸಿಕ ₹ 40,000-1,40,000
ಉದ್ಯೋಗದ ಸ್ಥಳ :ಮಂಗಳೂರು

ವಿದ್ಯಾರ್ಹತೆ : ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 35 ಮೀರಿರಬಾರದು. ವಯೋಮಿತಿ ಸಡಿಲಿಕೆಯನ್ನು ಮೀಸಲಾತಿ ಅನುಸಾರ ನೀಡಲಾಗಿದೆ.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ : ಸೆಕ್ರೆಟರಿ I/c
ನವ ಮಂಗಳೂರು ಬಂದರು ಪ್ರಾಧಿಕಾರ
ಪಣಂಬೂರು
ಮಂಗಳೂರು-575010

Leave A Reply

Your email address will not be published.