ಬೆತ್ತಲೆಯಾಗಿ ಹಿಂದೂ ದೇವರ ದೇವಸ್ಥಾನಕ್ಕೆ ನುಗ್ಗಿ, ಮೂರ್ತಿ ಧ್ವಂಸ ಮಾಡಿದ ವ್ಯಕ್ತಿ | ಹಿಂದೂ ಸಂಘಟನೆಗಳಿಂದ ಆಕ್ರೋಶ!

ಕೇರಳದ ಕೊಡುಂಗಲ್ಲೂರಿನಲ್ಲಿರುವ ಶ್ರೀ ಕುರುಂಬಾ ಭಗವತಿ ದೇವಸ್ಥಾನಕ್ಕೆ ಬೆತ್ತಲೆಯಾಗಿ ನುಗ್ಗಿದ ವ್ಯಕ್ತಿಯೊಬ್ಬ ಮೂಲಸ್ಥಾನದಲ್ಲಿದ್ದ ಪ್ರಮುಖ ದೇವರ ಮೂರ್ತಿಯನ್ನು ಧ್ವಂಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಇಂದು ಬೆಳಗ್ಗೆ 4.30 ಆಸುಪಾಸಿನಲ್ಲಿ ನಡೆದಿದೆ ಎನ್ನಲಾಗಿದೆ.

 

ಕೆಲ ಬಲ್ಲ ಮೂಲಗಳ ಪ್ರಕಾರ ಆರೋಪಿಯು ಮಾನಸಿಕ ಅಸ್ವಸ್ಥ ಎಂದು ತಿಳಿದುಬಂದಿದ್ದು, ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆಯನ್ನು ಖಂಡಿಸಿರುವ ಹಿಂದು ಐಕ್ಯ ವೇದಿ ಹೆಸರಿನ ಹಿಂದು ಸಂಘಟನೆ, ತಾಲೂಕಿನ ಮಟ್ಟದಲ್ಲಿ ಪ್ರತಿಭಟನೆಯನ್ನು ಆಯೋಜಿಸಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. ಸದ್ಯ ಪೋಲೀಸರು ಶಂಕಿತನನ್ನು ವಶಕ್ಕೆ ಪಡೆದಿದ್ದು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Leave A Reply

Your email address will not be published.