ಭಾರತ್‌ ಜೋಡೋ ಯಾತ್ರೆಯ ಸಮಾರೋಪಕ್ಕೆ ದೇವೇಗೌಡರಿಗೆ ಬಂತು ಆಹ್ವಾನ! ರಾಹುಲ್ ಗಾಂಧಿ ಹೊಗಳಿ ಮರು ಪತ್ರ ಬರೆದ್ರು ಮಾಜಿ ಪ್ರಧಾನಿ!

ಕನ್ಯಾಕುಮಾರಿಯಿಂದ ಆರಂಭವಾಗಿರುವ ಕಾಂಗ್ರೆಸ್‌ನ ಭಾರತ್‌ ಜೋಡೋ ಯಾತ್ರೆ ತನ್ನ ಗುರಿಯಂತೆ ಜಮ್ಮು ಕಾಶ್ಮೀರವನ್ನು ತಲುಪಿದೆ. ಇದೀಗ ಯಾತ್ರೆಯು ಪೂರ್ಣಗೊಂಡು ಸಮಾರೋಪದ ಅಂತ್ಯಕ್ಕೆ ಬಂದಿದೆ. ಹೀಗಾಗಿ ಜನವರಿ 30ರಂದು ಶ್ರೀನಗರದಲ್ಲಿ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ವಿವಿಧ ಪಕ್ಷಗಳ ನಾಯಕರನ್ನು ಕಾಂಗ್ರೆಸ್‌ ಆಹ್ವಾನಿಸಿದೆ. ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ಕೂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನಿಸಿದ್ದಾರೆ.

ಕಾರ್ಯಕ್ರಮಕ್ಕೆ ವಿವಿಧ ಪಕ್ಷಗಳ ನಾಯಕರನ್ನು ಕಾಂಗ್ರೆಸ್‌ ಆಹ್ವಾನಿಸಿದೆ. ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ಕೂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನಿಸಿದ್ದಾರೆ. ಆದರೆ, ಎಚ್‌ಡಿ ದೇವೇಗೌಡರು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ಎಚ್‌ಡಿ ದೇವೇಗೌಡ ಅವರು, ನಾನು ವೈಯಕ್ತಿಕವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗುತ್ತಿಲ್ಲ ಎಂದಿದ್ದಾರೆ.

ಪತ್ರದಲ್ಲಿ ‘ನಾನು ಈ ಕಾರ್ಯಕ್ರಮಕ್ಕೆ ಹಾಜರಾಗಲು ಆಗುತ್ತಿಲ್ಲ. ಆದರೂ ರಾಹುಲ್‌ ಗಾಂಧಿ ಅವರಿಗೆ ನನ್ನ ಬೆಂಬಲ ಇದೆ. ರಾಹುಲ್ ಗಾಂಧಿ ಅವರಿಗೆ ಶುಭಾಷಯ ಕೋರುತ್ತೇನೆ. ದೇಶದ ಒಗ್ಗೂಡಿವಿಕೆಗೆ ರಾಹುಲ್ ಗಾಂಧಿಯವರು ಪಾದಯಾತ್ರೆ ಮಾಡಿದ್ದಾರೆ. ಅವರು ದ್ವೇಷ ಮತ್ತು ಹಿಂಸೆಯ ವಿರುದ್ಧ ಹೋರಾಡುತ್ತಿದ್ದಾರೆ. ರಾಷ್ಟ್ರಪಿತ ಮಹಾತ್ಮ ಗಾಂಧಿ ಹುತಾತ್ಮರಾದ ದಿನದಂದು ಈ ಕಾರ್ಯಕ್ರಮ ಆಯೋಜಿಸುತ್ತಿರುವುದು ಅತ್ಯಂತ ಸೂಕ್ತವಾಗಿದೆ. ಜನರಲ್ಲಿ ಕೋಮು ಸೌಹಾರ್ದತೆಯ ಸಂದೇಶ ಬಿತ್ತಲು 3,500 ಕಿಲೋ‌ಮೀಟರ್ ರಾಹುಲ್ ಗಾಂಧಿ ಯಾತ್ರೆ ನಡೆಸಿದ್ದಾರೆ. ನನ್ನ ಶುಭಾಶಯಗಳನ್ನು ರಾಹುಲ್ ಗಾಂಧಿ ಅವರಿಗೆ ತಿಳಿಸಿ ಎಂದು ಅಭಿನಂದನೆ ತಿಳಸಿದ್ದಾರೆ. ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರವನ್ನು ಅವರ ಟ್ವೀಟ್‌ ಮಾಡಿದ್ದಾರೆ.

ಜನವರಿ 10, 2023ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರಿಗೆ ಭಾರತ್‌ ಜೋಡೋ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಆಹ್ವಾನಿಸಿದ್ದರು. ಅದನ್ನು ಕೂಡ ಎಚ್‌ಡಿ ದೇವೇಗೌಡರು ತಮ್ಮ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ. ಇನ್ನು, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್‌ ವಿರುದ್ಧ ಹರಿಹಾಯುತ್ತಿದ್ದಾರೆ. ಆದರೆ, ಜೆಡಿಎಸ್‌ ವರಿಷ್ಠ ಎಚ್‌ಡಿ ದೇವೇಗೌಡ ಅವರು ರಾಹುಲ್‌ ಗಾಂಧಿ ಅವರನ್ನು ಹೊಗಳಿರುವುದು ಭಾರೀ ಕುತೂಹಲ ಕೆರಳಿಸಿದೆ.

Leave A Reply

Your email address will not be published.