Xiaomi Smartphones: ಸ್ಮಾರ್ಟ್‌ಫೋನ್ ಖರೀದಿಸುವವರೇ ಈ ಸುದ್ದಿ ಓದಿ | ಬಿಡುಗಡೆಯಾಗಿದೆ ಒಂದೇ ಕಂಪನಿಯ 4 ಬೆಸ್ಟ್ ಫೋನ್ ! ವಿವರ ಇಲ್ಲಿದೆ
ಸ್ಮಾರ್ಟ್ ಫೋನ್ ಇತ್ತೀಚಿಗೆ ಒಂದಲ್ಲಾ ಎರಡಲ್ಲ ಸಾವಿರಾರು ಆಯ್ಕೆಗಳಲ್ಲಿ ಇವೆ. ಸದ್ಯ ಯಾವುದು ಬೆಸ್ಟ್ ಅನ್ನೋದು ನೋಡಿ ಸೆಲೆಕ್ಟ್ ಮಾಡೋದು ಮಾತ್ರ ನಮ್ಮ ಕೆಲಸ ಅಷ್ಟೇ. ಅದಲ್ಲದೆ ಕೈಗೆಟಕುವ ಬೆಲೆಯಲ್ಲಿ ಲಭ್ಯವಿದೆ. ಇದೀಗ ಶಿಯೋಮಿ ಕಂಪೆನಿಯಿಂದ ಇತ್ತೀಚೆಗೆ ಬಹುತೇಕ ಸ್ಮಾರ್ಟ್ಫೋನ್ಗಳು ಬಿಡುಗಡೆಯಾಗಿದೆ. ಅದೇ ರೀತಿ ಈ ಕಂಪೆನಿಯಿಂದ ಬಿಡುಗಡೆಯಾದ ಸ್ಮಾರ್ಟ್ಫೋನ್ಗಳಿಗೆ ಈಗಂತೂ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದೆ.
ಜನಪ್ರಿಯ ಸ್ಮಾರ್ಟ್‌ಫೋನ್ ಕಂಪೆನಿಗಳಲ್ಲಿ ಶಿಯೋಮಿ ಕಂಪೆನಿ ಸಹ ಒಂದಾಗಿದೆ. ಈ ಕಂಪೆನಿ ಬಜೆಟ್ ಬೆಲೆಯಿಂದ ಹಿಡಿದು ದುಬಾರಿ ಬೆಲೆಯವರೆಗೂ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಮೂಲಕ ಬಹಳಷ್ಟು ಗ್ರಾಹಕರನ್ನು ತನ್ನತ್ತ ಸೆಳೆದಿದೆ. ಈ ವರ್ಷದಲ್ಲಿ ಶಿಯೋಮಿ ಕಂಪೆನಿಯಿಂದ ಹಲವಾರು ಮೊಬೈಲ್ಗಳು ಬಿಡುಗಡೆಯಾಗಿದ್ದು ಭಾರೀ ಬೇಡಿಕೆಯಲ್ಲಿದೆ.
ಸದ್ಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಬೆಸ್ಟ್ ಸ್ಮಾರ್ಟ್ಫೋನ್ಗಳು ಯಾವುದೆಂಬುದನ್ನು ಇಲ್ಲಿ ತಿಳಿಸಲಾಗಿದೆ.
- ರೆಡ್ಮಿ ಕೆ50ಐ ಸ್ಮಾರ್ಟ್‌ಫೋನ್:
ರೆಡ್ಮಿ ಕೆ50ಐ ಸ್ಮಾರ್ಟ್‌ಫೋನ್ 6.6 ಇಂಚಿನ ಐಪಿಎಸ್ ಎಲ್‌ಸಿಡಿ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇಯು 144Hz ರಿಫ್ರೇಶ್ ರೇಟ್ ಅನ್ನು ಒಳಗೊಂಡಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 8100 ಎಸ್ಓಸಿ ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 12 ಓಎಸ್ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುತ್ತದೆ.
ಇದರೊಂದಿಗೆ ಈ ಫೋನ್ 8ಜಿಬಿ ರ್‍ಯಾಮ್ ಮತ್ತು 256ಜಿಬಿ ಮತ್ತು 6ಜಿಬಿ ರ್‍ಯಾಮ್ ಮತ್ತು 128ಜಿಬಿ ಸ್ಟೋರೇಜ್ ಸಾಮರ್ಥ್ಯದಲ್ಲಿ ಮಾರುಕಟ್ಟೆಗೆ ಬಿಡುಗಡೆಯಾಗಿದೆ. ಹಾಗೆಯೇ ಈ ಸ್ಮಾರ್ಟ್ಫೊನ್ 5,080mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಅನ್ನು ಹೊಂದಿದೆ. ಈ ಬ್ಯಾಟರಿಯು 67W ವೇಗದ ಚಾರ್ಜ್ ಆಗುತ್ತದೆ.
- ಶಿಯೋಮಿ 11ಟಿ ಪ್ರೋ 5ಜಿ ಸ್ಮಾರ್ಟ್‌ಫೋನ್:
ಶಿಯೋಮಿ 11ಟಿ ಪ್ರೋ 5ಜಿ ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 ಎಸ್ಓಸಿ ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಅದಲ್ಲದೆ 8ಜಿಬಿ ರ್‍ಯಾಮ್ ಮmತ್ತು 128ಜಿಬಿ, 8ಜಿಬಿ ರ್‍ಯಾಮ್ ಮತ್ತು 256ಜಿಬಿ ಮತ್ತು 12ಜಿಬಿ ರ್‍ಯಾಮ್ ಮತ್ತು 256ಜಿಬಿ ಸಾಮರ್ಥ್ಯದ ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
- ರೆಡ್ಮಿ ನೋಟ್ 12 5ಜಿ ಸ್ಮಾರ್ಟ್‌ಫೋನ್:
ರೆಡ್ಮಿ ನೋಟ್ 12 5ಜಿ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲ್ಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2,400 x 1,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 4 ಜೆನ್ 1 ಎಸ್ಓಸಿ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 4ಜಿಬಿ ರ್‍ಯಾಮ್ ಮತ್ತು 128ಜಿಬಿ, 4ಜಿಬಿ ರ್‍ಯಾಮ್ ಮತ್ತು 128ಜಿಬಿ ಮತ್ತು 6ಜಿಬಿ ರ್‍ಯಾಮ್ ಮತ್ತು 128ಜಿಬಿ ಇಂಟರ್ನಲ್ ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ. ಇನ್ನು ಈ ಸ್ಮಾರ್ಟ್ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
- ರೆಡ್ಮಿ ನೋಟ್ 10ಟಿ 5ಜಿ ಸ್ಮಾರ್ಟ್‌ಫೋನ್:
ರೆಡ್ಮಿ ನೋಟ್ 10ಟಿ 5ಜಿ ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ. ಇನ್ನು ಈ ಫೋನ್ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 ಎಸ್ಓಸಿ ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಈ ಫೋನ್ 4ಜಿಬಿ ರ್‍ಯಾಮ್ ಮತ್ತು 64ಜಿಬಿ ಮತ್ತು 6ಜಿಬಿ ರ್‍ಯಾಮ್ ಮತ್ತು 128ಜಿಬಿ ಇಂಟರ್ನಲ್ ಸ್ಟೋರೇಜ್ ಆಯ್ಕೆಗಳನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಜೊತೆಗೆ 18W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯವನ್ನು ಒಳಗೊಂಡಿದೆ.
ಹೌದು ಈ ಮೇಲೆ ಪಟ್ಟಿ ಮಾಡಲಾಗಿರುವ ಸ್ಮಾರ್ಟ್ ಫೋನ್ ನಲ್ಲಿ ಇಷ್ಟ ಆಗಿರುವುದನ್ನು ನೀವು ಖರೀದಿಸಬಹುದು.