ಯಶಸ್ವಿನಿ ಯೋಜನೆ ಫಲಾನುಭವಿಗಳಿಗಾಗಿಯೇ ಇದೆ ರಾಜ್ಯ ಸರಕಾರದಿಂದ ಮುಖ್ಯ ಮಾಹಿತಿ!

ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರಕಾರದಿಂದ ಮುಖ್ಯವಾದ ಮಾಹಿತಿ ದೊರಕಿದ್ದು, ಯೋಜನೆಯಡಿಯಲ್ಲಿ ಬರುವ ಚಿಕಿತ್ಸಾ ದರ ಪರಿಷ್ಕರಿಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ.

ಪ್ರಸ್ತುತ ಆಯುಷ್ಮಾನ್ ಭಾರತ್ ಯೋಜನೆ ದರಕ್ಕಿಂತ ಕಡಿಮೆಯಿದ್ದಲ್ಲಿ ಅಂತಹ ಚಿಕಿತ್ಸಾ ದರಗಳನ್ನು ಹಿಂದೇ ಜಾರಿಯಲ್ಲಿದ್ದ ದರಕ್ಕೆ ಸಮಾನವಾಗಿ ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಸಹಾಯಧನ ನೀಡುವ ಮೂಲಕ ಅವರ ವಾರ್ಷಿಕ ಸದಸ್ಯತ್ವದ ವಂತಿಗೆಯನ್ನು ಸರ್ಕಾರವೇ ಭರಿಸುತ್ತದೆ.

ಗ್ರಾಮೀಣ ಸಹಕಾರ ಸಂಘಗಳ, ಸ್ವ-ಸಹಾಯ ಗುಂಪುಗಳ ಗರಿಷ್ಟ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ರೂ.500/- ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.100/-ಗಳನ್ನು ಪಾವತಿಸಬೇಕು. ನಗರ ಸಹಕಾರ ಸಂಘಗಳ ಗರಿಷ್ಠ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ರೂ.1,000/- ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.200/- ಗಳನ್ನು ಪಾವತಿಸಬೇಕು.

Leave A Reply

Your email address will not be published.