Bank Strike: ಗ್ರಾಹಕರೇ ಗಮನಿಸಿ | ನಿಮಗೆ ಬ್ಯಾಂಕ್‌ ಕೆಲಸ ಏನಾದರೂ ಇದ್ದರೆ ಇಂದೇ ಮಾಡಿ | ಮುಂದಿನ ವಾರ ಎರಡು ದಿನ ಬ್ಯಾಂಕ್‌ ಮುಷ್ಕರ

ಇಂದಿನ ಡಿಜಿಟಲ್ ಯುಗದಲ್ಲಿ ನಮ್ಮ ಬ್ಯಾಂಕಿಂಗ್ ಕೆಲಸಗಳು ಮನೆಯಲ್ಲೆ ಕುಳಿತು ಸರಾಗವಾಗಿ ಹಣ ವರ್ಗಾವಣೆಯ ಜೊತೆಗೆ ಪಾವತಿ ಮಾಡುವ ಸೌಕರ್ಯವನ್ನು ಎಲ್ಲ ಬ್ಯಾಂಕ್ಗಳು ಒದಗಿಸಿ, ಪ್ರತಿ ಕೆಲಸಕ್ಕೂ ಬ್ಯಾಂಕಿನ ಶಾಖೆಗೆ ಓಡಾಡುವ ತಾಪತ್ರಯವನ್ನು ಕೂಡ ತಪ್ಪಿಸಿದೆ. ಆದರೂ ಕೂಡ ಕೆಲವೊಂದು ಅನಿವಾರ್ಯ ಕಾರ್ಯಗಳಿಗೆ ಬ್ಯಾಂಕ್ಕೆ ಭೇಟಿ ನೀಡಬೇಕಾದ ಪ್ರಸಂಗಗಳು ಎದುರಾಗುತ್ತವೆ. ಆಗ ಬ್ಯಾಂಕ್ಗಳಿಗೆ ರಜೆ ಇದ್ದರೆ ಅದರ ಅರಿವಿಲ್ಲದೆ ಬ್ಯಾಂಕ್ಕೆ ಭೇಟಿ ನೀಡಿ ಸಮಯ ವ್ಯರ್ಥವಾಗುತ್ತದೆ. ಇದನ್ನು ತಪ್ಪಿಸಲು ರಜಾ ದಿನಗಳ ಬಗ್ಗೆ ತಿಳಿದುಕೊಂಡರೆ ಒಳಿತು. ಇದೀಗ, ಬ್ಯಾಂಕ್ ಮುಷ್ಕರದ ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಾಸ ಕಂಡು ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ವಾರಕ್ಕೆ ಐದು ದಿನ ಮಾತ್ರ ಕೆಲಸ ಹಾಗೂ ಬ್ಯಾಂಕ್ ನೌಕರರ ಪಿಂಚಣಿ ವ್ಯವಸ್ಥೆ ನವೀಕರಣ, ಎಲ್ಲ ಕೇಡರ್ಗಳಲ್ಲಿ ನೇಮಕಾತಿ ಮಾಡಿಕೊಳ್ಳಬೇಕು. ಇದಲ್ಲದೇ ವೇತನ ಪರಿಷ್ಕರಣೆ, ಎನ್ಪಿಎಸ್ ರದ್ದತಿ ಹಾಗೂ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್’ ಮುಷ್ಕರಕ್ಕೆ ಕರೆ ನೀಡಿದೆ ಎನ್ನಲಾಗಿದೆ.


ಜನವರಿ 28 ನಾಲ್ಕನೇ ಶನಿವಾರ ಆಗಿರುವುದರಿಂದ ಬ್ಯಾಂಕ್​ ರಜೆ ಇದೆ. ಅದೇ ರೀತಿ, ಮರುದಿನ ಭಾನುವಾರ ಎಂದಿನಂತೆ ರಜೆ ಇದ್ದು, 30 ಮತ್ತು 31ರಂದು ಮುಷ್ಕರ ನಡೆದರೆ ಒಟ್ಟು ನಾಲ್ಕು ದಿನ ಬ್ಯಾಂಕಿಂಗ್ ವಹಿವಾಟು ಸ್ಥಗಿತಗೊಳ್ಳುವ ಸಾಧ್ಯತೆ ಹೆಚ್ಚಿದೆ. ಇದರಿಂದಾಗಿ, ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯಗೊಳ್ಳುವ ಸಂಭವವಿದೆ. ಆದರೆ , ಇಂಟರ್​ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಇತ್ಯಾದಿ ಆನ್​ಲೈನ್ ವಹಿವಾಟುಗಳ ಮೇಲೆ ಹೆಚ್ಚಿನ ಪರಿಣಾಮ ಬೀರದು.

ವಾರದಲ್ಲಿ ಐದು ದಿನ ಮಾತ್ರ ಕೆಲಸ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್​ ಒಕ್ಕೂಟಗಳ ಸಂಘಟನೆ ‘ಯುನೈಟೆಡ್ ಫೋರಮ್​ ಆಫ್ ಬ್ಯಾಂಕ್ ಯೂನಿಯನ್ಸ್ (UFBU)’ ಸೋಮವಾರ ಮತ್ತು ಮಂಗಳವಾರ (ಜನವರಿ 30, 31) ದೇಶದಾದ್ಯಂತ ಬ್ಯಾಂಕ್ ಮುಷ್ಕರಕ್ಕೆ (Bank strike) ಕರೆ ನೀಡಿದೆ. ಮುಷ್ಕರದ ಹಿನ್ನೆಲೆ ವಿವಿಧ ಶಾಖೆಗಳಲ್ಲಿ ಬ್ಯಾಂಕಿಂಗ್​ ಸೇವೆಗಳಲ್ಲಿ ವ್ಯತ್ಯಯವಾಗಲಿದೆ ಎಂದು ಸ್ಟೇಟ್​ ಬ್ಯಾಂಕ್ ಆಫ್ ಇಂಡಿಯಾ (SBI) ಈಗಾಗಲೇ ಗ್ರಾಹಕರಿಗೆ ಮಾಹಿತಿ ನೀಡಿದೆ.

ಈ ಹಿಂದೆ 2022ರ ನವೆಂಬರ್​​ 19ರಂದು ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘವು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿತ್ತು. ಬ್ಯಾಂಕ್ ಉದ್ಯೋಗಿಗಳ ಸಂಘ ಮತ್ತು ಬ್ಯಾಂಕ್‌ಗಳು ದ್ವಿಪಕ್ಷೀಯವಾಗಿ ಸಮಸ್ಯೆಗಳನ್ನು ಪರಿಹರಿಸಲು ಒಪ್ಪಿಕೊಂಡಿದ್ದರಿಂದ ಮುಷ್ಕರ ಹಿಂಪಡೆಯಲಾಗಿತ್ತು. ಇದೀಗ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಬ್ಯಾಂಕ್ ನೌಕರರು ಆಗ್ರಹಿಸಿ ಮುಷ್ಕರ ಮಾಡಲು ಮುಂದಾಗಿದ್ದಾರೆ. ಸದ್ಯ, ಸಾಮಾನ್ಯ ಕಾರ್ಯಾಚರಣೆಗೆ ತೊಂದರೆಯಾಗದಂತೆ ಶಾಖೆಗಳಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಕೆಲವು ಸಿಬ್ಬಂದಿ ಮುಷ್ಕರದಿಂದ ಪ್ರಭಾವಿತರಾಗುವ ಸಂಭವವಿರುವುದರಿಂದ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

Leave A Reply

Your email address will not be published.