BREAKING NEWS: ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Share the Article

ಕರುನಾಡ ಹಿರಿಯ ಸಾಹಿತಿ, ಚಿತ್ರ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎಂದು ತಿಳಿದುಬಂದಿದೆ. ದಾವಣಗೆರೆ ಜಿಲ್ಲೆ ಹರಿಹರದಲ್ಲಿ ನಡೆದ ಬಂಡಾಯ ಸಾಹಿತ್ಯ ಕಾರ್ಯಕ್ರಮಕ್ಕೆ ಭಾಗವಹಿಸಿದ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ವೇದಿಕೆ ಮೇಲೆ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಘಟನೆ ವರದಿಯಾಗಿದೆ.

ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಭಾಷಣ ಆದ ಬಳಿಕ ಬರಗೂರು ರಾಮಚಂದ್ರಪ್ಪ ಅವರಿಗೆ ರಕ್ತದೊತ್ತಡ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿ, ತಕ್ಷಣವೇ ದಾವಣಗೆರೆಯ ಅಕ್ಷಯ ಆಸ್ಪತ್ರೆಗೆ ಬರಗೂರು ರಾಮಚಂದ್ರಪ್ಪನವರನ್ನು ದಾಖಲಿಸಲಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಆಸ್ಪತ್ರೆಗೆ ದಾಖಲಿಸಿದ ಬಳಿಕ ಸದ್ಯ ಬರಗೂರು ರಾಮಚಂದ್ರಪ್ಪ ಅವರ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡು ಬಂದಿದ್ದರು ಕೂಡ ಹೆಚ್ಚಿನ ಚಿಕಿತ್ಸೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Leave A Reply

Your email address will not be published.