BIGG NEWS: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ!!

ರಾಜ್ಯ ಹಾಗೂ ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳ ಏಳಿಗೆಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಿ ಜನರಿಗೆ ಬೆಂಬಲವಾಗಿ ನಿಂತಿವೆ. ಇವುಗಳಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ. ಅದೇ ರೀತಿಯಲ್ಲಿ ಸರ್ಕಾರ ಹಾಗೂ ರಾಜ್ಯ ಸರ್ಕಾರವು ಬಡ ಕುಟುಂಬಕ್ಕೆ ನೆರವಾಗುವ ಸಲುವಾಗಿ  ಪ್ರಧಾನ ಮಂತ್ರಿ ಗರೀಬ್ ಕಲ್ಯಾನ್ ಅನ್ನ ಯೋಜನೆ ಜಾರಿಗೆ ತಂದು ಬಡ ಕುಟುಂಬಕ್ಕೆ ಗೋಧಿ, ಅಕ್ಕಿ, ಎಣ್ಣೆ, ಬೇಳೆ, ಹಿಟ್ಟು ಮೊದಲಾದವುಗಳನ್ನು ಕಡಿಮೆ ದರದಲ್ಲಿ ಲಭ್ಯವಾಗುವಂತೆ ಮಾಡಿದೆ. ಆದರೆ,  ಹೊಸದಾಗಿ ಪಡಿತರಕ್ಕೆ ಹೆಸರು ಸೇರಿಸೋದು ಹೇಗೆ ಎಂಬ ಪ್ರಶ್ನೆ ಹಲವರನ್ನು ಕಾಡದಿರದು. ನಿಮಗೂ ಈ ಸಂದೇಹ ಬಂದಿದ್ದರೆ ಚಿಂತಿಸಬೇಕಾಗಿಲ್ಲ. ಉತ್ತರ ನಾವು ಹೇಳ್ತೀವಿ ಕೇಳಿ!!

ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಅರ್ಹತೆ ಹೀಗಿದೆ:
ಕುಟುಂಬದ ಆದಾಯದ ಅನುಸಾರ  ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಕಾರ್ಡ್ ವಿತರಣೆ ಮಾಡೋದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕಾಗುತ್ತದೆ. ಇದಲ್ಲದೇ, ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರುವವರು ಮಾತ್ರ  ಅರ್ಜಿ ಸಲ್ಲಿಸಲು ಅವಕಾಶವಿದೆ. ಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು.

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳು ಹೀಗಿವೆ:

ವೋಟರ್ ಐಡಿ, ಆಧಾರ್ ಕಾರ್ಡ್, ವಯಸ್ಸಿನ ಪ್ರಮಾಣ ಪತ್ರ,
ಡ್ರೈವಿಂಗ್ ಲೈಸೆನ್ಸ್,  ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ, ಮೊಬೈಲ್ ಸಂಖ್ಯೆ,  ಸ್ವಯಂ ಘೋಷಿತ ಪ್ರಮಾಣ ಪತ್ರ ಈ ದಾಖಲೆಗಳ ಮೂಲಕ  ಆನ್ ಲೈನ್ ನಲ್ಲಿ  ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದು.
ರಾಜ್ಯದ ನಾಗರಿಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಪಡಿತರ ಚೀಟಿ ( New Ration Card ) ಪಟ್ಟಿ ಯಲ್ಲಿ ಹೆಸರು ಸೇರ್ಪಡೆಯಾಗದೆ ಇದ್ದಲ್ಲಿ  ಮೇಲೆ ತಿಳಿಸಿದ ಅವಶ್ಯ ದಾಖಲೆಗಳ ಮೂಲಕ  ಅರ್ಜಿಯನ್ನು ಸಲ್ಲಿಸಬಹುದಾಗಿದೆ.  ಅಷ್ಟೇ ಅಲ್ಲದೇ, ಅರ್ಜಿಯ ಸ್ಥಿತಿಗತಿಯನ್ನು ತಿಳಿದುಕೊಳ್ಳಬಹುದು.

ಹೊಸ ಎಪಿಎಲ್ / ಬಿಪಿಎಲ್ ಪಡಿತರ ಚೀಟಿಗೆ ( BPL, APL Ration Card ) ಹೇಗೆ ಅರ್ಜಿ ಸಲ್ಲಿಸಬೇಕು ಎನ್ನುವ ಮಾಹಿತಿ ಇಲ್ಲಿ ನೀಡಲಾಗಿದೆ. ಹೊಸ ಪಡಿತರ ಚೀಟಿಗಾಗಿ ಈ ಹಂತಗಳನ್ನು ಅನುಸರಿಸಿ, ಅರ್ಜಿ ಸಲ್ಲಿಸಬೇಕು.
ಮೊದಲು, kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಬೇಕು. ಆ ಬಳಿಕ, ಈ ಜಾಲತಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀವು ಮುಖಪುಟದಲ್ಲಿನ ಇ-ಸೇವೆಗಳ ಪಟ್ಟಿಯನ್ನು ತೆರೆಯಬೇಕು. ಇದಲ್ಲದೇ https://ahara.kar.nic.in/Home/EServices ತಾಣಕ್ಕೂ ನೇರವಾಗಿ ಕ್ಲಿಕ್ ಮಾಡಬಹುದಾಗಿದೆ. ಈ ಜಾಲತಾಣ ತೆರೆದ ಬಳಿಕ, ನೀವು ಇ-ಪಡಿತರ ಚೀಟಿ ಆಯ್ಕೆ ಮಾಡಿಕೊಂಡು  ಆ ಬಳಿಕ ಕೆಳಗಡೆ ಸ್ಕ್ರಾಲ್ ಮಾಡಬೇಕು.ಆಗ  ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವ ಲಿಂಕ್ ಲಭ್ಯವಾಗಲಿದೆ.  ಈಗ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ಆ ಬಳಿಕ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿಕೊಳ್ಳಬೇಕು.

ನೀವು ಬಿಪಿಎಲ್  ಅಥವಾ ಎಪಿಎಲ್ ಕಾರ್ಡ್  ಯಾವ ಕಾರ್ಡ್ ಗಾಗಿ  ಅರ್ಜಿ  ಸಲ್ಲಿಸುತ್ತಿದ್ದೀರಾ  ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಬೇಕು.ಈ ಪ್ರಕ್ರಿಯೆಯ ಬಳಿಕ ಅರ್ಜಿಯ ಜೊತೆಗೆ ಬೇಕಾದ  ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ ಲೋಡ್ ಮಾಡಿಕೊಳ್ಳಬೇಕು. ಕೊನೆಗೆ ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿಕೊಂಡು ಹೊಸ ಪಡಿತರ ಚೀಟಿಗಾಗಿ ಅರ್ಜಿ ಶುಲ್ಕ ಪಾವತಿ ಮಾಡಬೇಕಾಗಬಹುದು.ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರದು. ಆದರೆ ಪಡಿತರ ಚೀಟಿ ಬಂದ ಬಳಿಕ ಸಂಬಂಧ ಪಟ್ಟ ಅಧಿಕಾರಿಯಿಂದ ಪಡೆಯಲು ರೂ.100 ಪಾವತಿಸಬೇಕಾಗಬಹುದು. ಮೇಲೆ ತಿಳಿಸಿದ ಸರಳ ವಿಧಾನ ಅನುಸರಿಸಿ ಹೊಸ ಪಡಿತರಕ್ಕೆ ಅರ್ಜಿ ಸಲ್ಲಿಸಬಹುದು.

Leave A Reply

Your email address will not be published.