PM Kisan Scheme: ರೈತರಿಗೆ ಪಿಎಂ ಕಿಸಾನ್ ಯೋಜನೆ ಕುರಿತು ಮಹತ್ವದ ಮಾಹಿತಿ; ರೈತರು ಹೊಸ ನೋಂದಣಿ, ಇ- ಕೆವೈಸಿ ಮಾಡಿಸಲು ಮನವಿ!!
ಇತ್ತೀಚೆಗಷ್ಟೇ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 12ನೇ ಕಂತಿನ ಹಣ ಬಿಡುಗಡೆ ಮಾಡಿದ್ದು, ಇದೀಗ 13ನೇ ಕಂತಿಗಾಗಿ ರೈತರು ಎದುರು ನೋಡುತ್ತಿದ್ದಾರೆ. ರೈತರ ನೆರವಿಗೆ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಆರ್ಥಿಕ ನೆರವಿನ ಜೊತೆಗೆ ರಸಗೊಬ್ಬರ ಪೂರೈಕೆ ಮಾಡಿ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ.
ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ಆರ್ಥಿಕ ನೆರವು ಪಡೆಯಲು ಇ- ಕೆವೈಸಿ ಕಡ್ಡಾಯಗೊಳಿದ್ದು ಗೊತ್ತಿರುವ ವಿಚಾರವೇ!!! ಆದರೆ, ಈ ನಡುವೆ ಇ-ಕೆವೈಸಿ ಮಾಡಿಸಲು ಬಾಕಿ ಇರುವ ರೈತರು ಶೀಘ್ರದಲ್ಲೇ ಮಾಡಿಸಿಕೊಳ್ಳಲು ಮನವಿ ಮಾಡಲಾಗಿದೆ.ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಆರ್ಥಿಕ ನೆರವಿಗೆ ಹೊಸ ನೋಂದಣಿ ಜೊತೆಗೆ ಇ -ಕೆವೈಸಿ ಮಾಡಿಸಿಕೊಳ್ಳುವಂತೆ ರೈತರಿಗೆ ಕೋರಲಾಗಿದೆ. ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಲು ಅಡಚಣೆ ಉಂಟಾಗಿದೆ ಆರ್ಥಿಕ ನೆರವನ್ನು ಪಡೆಯಲು ಸಾಧ್ಯವಾಗದ ಹಾಗೂ ಖಾತೆಗೆ ಹಣ ವರ್ಗಾವಣೆಯಾಗದ ರೈತರು ತಮ್ಮ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಲು ಮನವಿ ಮಾಡಲಾಗಿದೆ. ದಿನಾಂಕ 01.02.2019ರ ನಂತರ ಪೌತಿ ಕಾರಣದಿಂದ ಭೂಹಿಡುವಳಿ ಮಾಲೀಕತ್ವ ಗಳಿಸಿದ ರೈತರು ಪಿಎಂ ಕಿಸಾನ್ ಯೋಜನೆಯಡಿ ನೋಂದಾವಣಿ ಮಾಡಿಸಿಕೊಳ್ಳಲು ಅರ್ಹರಾಗಿರುತ್ತಾರೆ.
ಜಂಟಿ ಖಾತೆದಾರರಾಗಿದ್ದರೆ ಫ್ರೂಟ್ಸ್(FRUTTS) ನಲ್ಲಿ ಎಲ್ಲಾ ಖಾತೆದಾರರು ತಮ್ಮ ಪಾಲಿನ ಜಮೀನಿನ ವಿಸ್ತೀರ್ಣ ಸೇರ್ಪಡೆ ಮಾಡಿಸಿಕೊಳ್ಳಲು ಸೂಕ್ತ ಕ್ರಮ ಕೈಗೊಂಡು ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಲು ಅರ್ಹರಾಗಿರುತ್ತಾರೆ. ಈ ಕುರಿತ ಹೆಚ್ಚಿನ ಮಾಹಿತಿ ಪಡೆಯಲು ಕೃಷಿ ಇಲಾಖೆ ಕಚೇರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಲು ಮನವಿ ಮಾಡಲಾಗಿದೆ. ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಪೋರ್ಟಲ್ ನಲ್ಲಿ ಫಾರ್ಮರ್ಸ್ ಕಾರ್ನರ್ ನಲ್ಲಿ ಒಟಿಪಿ ಆಧಾರಿತ ಇ-ಕೆವೈಸಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿಯನ್ನು ನಾಗರಿಕ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳಲ್ಲಿ ಕೂಡ ಮಾಡಿಸಬಹುದು.