ಪರಿಶಿಷ್ಟ ವರ್ಗ , ಪರಿಶಿಷ್ಟ ಪಂಗಡಕ್ಕೆ ಭರ್ಜರಿ ಸಿಹಿ ಸುದ್ದಿ ಘೋಷಿಸಿದ ರಾಜ್ಯ ಸರ್ಕಾರ!!

ಸಾಮಾನ್ಯ ಜನರು ಮೂಲಭೂತ ಸೌಕರ್ಯ ಪಡೆದುಕೊಳ್ಳುವಲ್ಲಿ ಆರ್ಥಿಕವಾಗಿ ಅಶಕ್ತರಾಗಿರುತ್ತಾರೆ. ಹಾಗಾಗಿ ಬಡವರ ಜೀವನ ಸುಧಾರಿಸಿಕೊಳ್ಳಲು ಸರ್ಕಾರ ಹೆಚ್ಚಿನ ಪ್ರಯತ್ನ ಪಡುತ್ತಿದೆ ಅದಲ್ಲದೆ ಕೆಲವು ಸೌಲಭ್ಯಗಳನ್ನು ನೀಡಿ ಬಡವರನ್ನು ಪ್ರೋತ್ಸಾಹಿಸುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಈ ಕೆಳಗಿಂನಂತೆ ಹಲವಾರು ಯೋಜನೆಗಳನ್ನು ಜಾರಿ ತಂದಿದೆ.

ಪ್ರಸ್ತುತ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವತಿಯಿಂದ ಆಯೋಜಿಸಿದ್ದ ವಿಜ್ಞಾನ ಮೇಳ-2023ನ್ನು ಮಾನ್ಯ ಮುಖ್ಯ ಮಂತ್ರಿ ಬಸವ ರಾಜ್ ಬೊಮ್ಮಾಯಿ ಅವರು ಉದ್ಘಾಟಿಸಿ ಕಾರ್ಯಕ್ರಮ ಕುರಿತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ದೃಷ್ಟಿಕೋನ, ವಿಜ್ಞಾನದಲ್ಲಿ ಆಸಕ್ತಿ ಮೂಡಿಸಲು ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೊತ್ಸಾಹಿಸಲು ವಿಜ್ಞಾನ ಮೇಳವನ್ನು ಆಯೋಜಿಸಿರುವುದು ಅತ್ಯಂತ ಸಂತೋಷದ ಸಂಗತಿ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು.

ಜೊತೆಗೆ ರಾಜ್ಯದ ವಸತಿ ಶಿಕ್ಷಣ ಸಂಸ್ಥೆಗೆ ಸಾವಿರಾರು ಕೋಟಿ ಹಣವನ್ನು ಕಟ್ಟಡ ಕಾಮಗಾರಿ ಸೇರಿದಂತೆ ವಿವಿಧ ಕೆಲಸಗಳಿಗೆ ಸರ್ಕಾರ ವಿನಿಯೋಗಿಸುತ್ತಿದೆ. ಈಗಾಗಲೆ ಸಚಿವ ಸಂಪುಟ, ಹಲವಾರು ಸಭೆಗಳಲ್ಲಿ ಹೇಳಿರುವಂತೆ ಮಕ್ಕಳಿಗೆ ಬೇಕಾಗುವಂತಹ ವ್ಯವಸ್ಥೆಗಳನ್ನು ಮಾಡಲು ವಿಶೇಷ ಗಮನ ನೀಡಬೇಕು. ಕಳೆದ ಮೂರು ವರ್ಷದಿಂದ ಮಕ್ಕಳಿಗೆ ವಿಶೇಷ ಅನುದಾನದಿಂದ ಡೆಸ್ಕ್, ಪುಸ್ತಕ ಹಾಗೂ ಇತರ ಸೌಕರ್ಯಗಳನ್ನು ನೀಡಲಾಗುತ್ತಿದ್ದು ಈ ದಿಕ್ಕಿನಲ್ಲಿ ಸಾಕಷ್ಟು ಸುಧಾರಣೆಯಾಗಿದೆ ಎಂದರು.

ಇದರ ಜೊತೆಗೆ ಪರಿಶಿಷ್ಟ ಸಮುದಾಯ / ಪರಿಶಿಷ್ಟ ಪಂಗಡ/ ಒಬಿಸಿ ಸಮುದಾಯದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಹಾಗೂ ಎಲ್ಲಾ ಸೌಕರ್ಯವಿರುವ ವಸತಿ ಶಾಲೆಯನ್ನು ಪ್ರಾರಂಭ ಮಾಡಲಾಗಿದ್ದು, ಒಂದು ಸಾವಿರಕ್ಕೂ ಹೆಚ್ಚು ಇಂತಹ ಶಾಲೆಗಳು ಇವೆ. ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ರೀತಿಯಲ್ಲಿ ಅಂಕಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಮಕ್ಕಳಲ್ಲಿ ಕೀಳರಿಮೆ ಹೋಗಿ ಆತ್ಮವಿಶ್ವಾಸವು ಜಾಗೃತವಾಗಿದೆ. ಹೀಗಾಗಿ ಸಂಸ್ಥೆಗಳನ್ನ ಬಲಪಡಿಸಬೇಕಾಗಿದೆ. ಇನ್ನಷ್ಟು ಗುಣಾತ್ಮಕವಾದ ಶಿಕ್ಷಣ ಕೊಟ್ಟು, ವ್ಯಕ್ತಿವಿಕಸನ ಮಾಡಿಸಬೇಕು. ಈ ದಿಕ್ಕಿನಲ್ಲಿ ಸರ್ಕಾರವು ವಿಶೇಷವಾದ ಕಾರ್ಯಕ್ರಮವನ್ನು ರೂಪಿಸುತ್ತಿದೆ ಎಂದು ಆಶ್ವಾಸನೆ ನೀಡಿದರು.

ಇನ್ನು ಯಾವ ಶಾಲೆಗಳಲ್ಲಿ ಏನು ಕೊರತೆ ಎಂಬುದರ ಕುರಿತು ಪಟ್ಟಿಯನ್ನು ನೀಡಿದರೆ ಶಾಲೆಗೆ ಬೇಕಾಗಿರುವ ಅನುದಾನ ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ ಎಲ್ಲಾ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಬೇಕು. ಹತ್ತು ವರ್ಷವಾಗಿರುವ ಹಾಗೂ ಎಲ್ಲಾ ವ್ಯವಸ್ಥೆಗಳಿರುವ ಶಾಲೆಗಳಲ್ಲಿ ಮುಂದಿನ ವರ್ಷದಿಂದ ಮಕ್ಕಳಿಗೆ ಪಿ.ಯು.ಸಿ ತರಗತಿಯನ್ನು ಕಡ್ಡಾಯವಾಗಿ ಪ್ರಾರಂಭಿಸಲು ಆದೇಶ ನೀಡಿದ್ದಾರೆ.

ಇದಲ್ಲದೆ ಪರಿಶಿಷ್ಟ ಸಮುದಾಯ / ಪರಿಶಿಷ್ಟ ಪಂಗಡಕ್ಕೆ ಸರಿಯಾದ ಸ್ವ ಭೂಮಿ ಇಲ್ಲದೆ ಅಲೆಮಾರಿ ಬದುಕು ನಡೆಸುತ್ತಿರುವ ಜನರಿಗಾಗಿ ಜಮೀನು ಖರೀದಿ ಮಾಡಲು ರೂ. 20 ಲಕ್ಷ ನೀಡಲು ಯೋಜನೆ ರೂಪಿಸಲಾಗುತ್ತಿದೆ. ಮೀಸಲಾತಿಯನ್ನು ಪರಿಶಿಷ್ಟ ಸಮುದಾಯಕ್ಕೆ 15% ರಿಂದ 17%, ಪರಿಶಿಷ್ಟ ಪಂಗಡಕ್ಕೆ 3% ರಿಂದ 7% ಹೆಚ್ಚಿಸಲಾಗಿದೆ.

ಸಮುದಾಯಗಳು ಮುಖ್ಯವಾಹಿನಿಗೆ ಸೇರಲು ಬಾಬು ಜಗಜೀವನ್‍ರಾಮ್ ಹೆಸರಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ 100 ಯುವಕರಿಗೆ ಸ್ವಯಂ ಉದ್ಯೋಗಕ್ಕೆ ಕಾರ್ಯಕ್ರಮ ರೂಪಿಸಿದೆ. ಸಮಾಜ ಕಲ್ಯಾಣ ಇಲಾಖೆಯು ಉದ್ಯೋಗ, ಶಿಕ್ಷಣ, ಸಬಲೀಕರಣ ಮಾಡುತ್ತಿದೆ. ಸಬ್ ಕೆ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ಪ್ರಯಾಸ್ ಇದೇ ಪ್ರಧಾನ ಮಂತ್ರಿಗಳ ಉದ್ದೇಶ ಎಂದು ಸಾರಿದರು.

ಇನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥ್ತೆಗಳ ಸಂಘದ 830 ಮತ್ತು ಅಲ್ಪಸಂಖ್ಯಾತ ಇಲಾಖಾ ವ್ಯಾಪ್ತಿಯ 326 ಶಾಲೆಗಳು ಸೇರಿದಂತೆ ಒಟ್ಟು 1156 ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ವೈಜ್ಞಾನಿಕ ವಿಚಾರವನ್ನು ಹಂಚಿಕೊಳ್ಳಬೇಕೆಂಬ ಉದ್ದೇಶದಿಂದ “ವಿಜ್ಞಾನ ಮೇಳ”ವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಒಟ್ಟಿನಲ್ಲಿ ವಿದ್ಯಾರ್ಥಿಗಳ ಶಿಕ್ಷಣ ಜೊತೆಗೆ ಬಡ ಕುಟುಂಬಗಳ ಅಭಿವೃದ್ಧಿಗೆ ಸರ್ಕಾರವು ಹಲವಾರು ಯೋಜನೆ ರೂಪಿಸಿದ್ದು ಜನರು ಈ ಮೂಲಕ ಆಶ್ವಾಸನೆ ನೀಡಲಾಯಿತು.

Leave A Reply

Your email address will not be published.