ಗಮನಿಸಿ : ಹಳೆಯ ವಾಹನಗಳ ಕುರಿತು ಗಡ್ಕರಿ ನೀಡಿದ್ರು ಮಹತ್ವದ ಮಾಹಿತಿ!!!

ಕೇಂದ್ರ ಸರ್ಕಾರ ವಾಹನ ಗುಜರಿ ನೀತಿಯನ್ನು ಕಳೆದ ವರ್ಷ ಪ್ರಕಟಿಸಿದೆ. ಈ ನಡುವೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಇತ್ತೀಚೆಗಷ್ಟೇ, ಈ ವಿಚಾರವನ್ನು ಪ್ರಸ್ತಾಪಿಸಿದ್ದು, 15 ವರ್ಷಕ್ಕಿಂತ ಹಳೆಯದಾದ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಲಾಗುವ ಕುರಿತು ಮಾಹಿತಿ ನೀಡಿದ್ದಾರೆ.

ವಿಶ್ವದ ಹವಾಮಾನ ಬದಲಾವಣೆ ಸಮಸ್ಯೆಯನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಹಲವು ಕ್ರಮಗಳಲ್ಲಿ ವಾಹನಗಳ ಮಾಲಿನ್ಯ ನಿಗ್ರಹಿಸುವುದು ಒಂದಾಗಿದೆ. ಭಾರತ ಈ ನಿಟ್ಟಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ಹಂತ ಹಂತವಾಗಿ ನಿಲ್ಲಿಸಿ ಎಲೆಕ್ಟ್ರಿಕ್ ವಾಹನಗಳನ್ನು ಸಂಪೂರ್ಣವಾಗಿ ತರುವ ಯೋಜನೆ ಜಾರಿಗೆ ತರಲು ಮುಂದಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಚಾಲಿತ ವಾಹನಗಳಿಂದ ಹೆಚ್ಚು ಮಾಲಿನ್ಯವಾಗುತ್ತದೆ. ಅದರಲ್ಲೂ 15 ವರ್ಷಗಳಿಗಿಂತ ಹೆಚ್ಚು ಹಳೆಯದಾದ ವಾಹನಗಳಿಂದ ಮಾಲಿನ್ಯ ಹೆಚ್ಚು. ಹೀಗಾಗಿ, ಇವುಗಳನ್ನು ನಿಲ್ಲಿಸುವುದು ಸರ್ಕಾರದ ಸದ್ಯದ ಗುರಿಯಾಗಿದ್ದು, ಈ ಹಿನ್ನೆಲೆಯಲ್ಲಿ ವಾಹನ ಗುಜರಿ ನೀತಿಯನ್ನು ಜಾರಿಗೆ ತರುತ್ತಿದೆ. ಉದ್ಯಮ ಸಂಸ್ಥೆ ಎಫ್‌ಐಸಿಸಿಐ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗಡ್ಕರಿ, ಎಥೆನಾಲ್, ಮೆಥನಾಲ್, ಬಯೋ-ಸಿಎನ್‌ಜಿ, ಬಯೋ-ಎಲ್‌ಎನ್‌ಜಿ ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸುಲಭಗೊಳಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ, 15 ವರ್ಷಕ್ಕಿಂತ ಹಳೆಯದಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸಾರಿಗೆ ನಿಗಮಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಒಡೆತನದ ಒಂಬತ್ತು ಲಕ್ಷಕ್ಕೂ ಹೆಚ್ಚು ವಾಹನಗಳು ಏಪ್ರಿಲ್ 1 ರಿಂದ ರಸ್ತೆಯಿಂದ ಹೊರಗುಳಿಯಲಿದೆ. ಅವುಗಳ ಬದಲಿಗೆ ಹೊಸ ವಾಹನಗಳು ಸೋಮವಾರ ರಸ್ತೆಗಿಳಿಯಲಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸೋಮವಾರ ಮಾಹಿತಿ ನೀಡಿದ್ದಾರೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಇತ್ತೀಚಿನ ಅಧಿಸೂಚನೆಯ ಪ್ರಕಾರ, ಏಪ್ರಿಲ್ 1 ರಿಂದ, 15 ವರ್ಷಕ್ಕಿಂತ ಹಳೆಯದಾದ ಸಾರಿಗೆ ನಿಗಮಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳ ಒಡೆತನದ ಬಸ್‌ಗಳು ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಒಡೆತನದ ಎಲ್ಲಾ ವಾಹನಗಳನ್ನು ನೋಂದಣಿ ರದ್ದು ಮಾಡಲಾಗುತ್ತದೆ. ದೇಶದ ರಕ್ಷಣೆಗಾಗಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಮತ್ತು ಆಂತರಿಕ ಭದ್ರತೆಯ ನಿರ್ವಹಣೆಗಾಗಿ ಕಾರ್ಯಾಚರಣೆ ಉದ್ದೇಶಗಳಿಗಾಗಿ ಬಳಸುವ ವಿಶೇಷ ಉದ್ದೇಶದ ವಾಹನಗಳಿಗೆ (ಶಸ್ತ್ರಸಜ್ಜಿತ ಮತ್ತು ಇತರ ವಿಶೇಷ ವಾಹನಗಳಿಗೆ) ನಿಯಮ ಅನ್ವಯಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ. ಈಗಾಗಲೇ 15 ವರ್ಷಗಳ ಹಳೆಯ ವಾಹನಗಳನ್ನು ಗುಜರಿಗೆ ಹಾಕುವ ಬಗ್ಗೆ ಕರಡು ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಸರ್ಕಾರಿ ಬಸ್ಸು, ಕಾರು ಇತ್ಯಾದಿ ವಾಹನಗಳೂ ಇದರಲ್ಲಿ ಒಳಗೊಂಡಿವೆ.

ಈ ಅಧಿಸೂಚನೆಯ ಅನುಸಾರ, ವಾಹನಗಳು 15 ವರ್ಷಗಳಿಗಿಂತ ಹಳೆಯದಾದ ದುರಸ್ತಿ ಸ್ಥಿತಿಯಲ್ಲಿರುವ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಲ್ಲಾ ವಾಹನಗಳನ್ನು 2023 ಏಪ್ರಿಲ್ 1ರಿಂದ ಗುಜರಿಗೆ ಹಾಕಲು ಆದೇಶಿಸಲಾಗಿದೆ. ಕೆಲ ಸಮೀಕ್ಷೆಗಳ ಪ್ರಕಾರ, ಕರ್ನಾಟಕದಲ್ಲೇ ಅತಿ ಹೆಚ್ಚು ಹಳೆಯ ವಾಹನಗಳಿವೆ ಎನ್ನಲಾಗಿದ್ದು, ವಾಹನಗಳನ್ನು ಗುಜರಿಗೆ ಹಾಕುವ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರ ಮುಂದಿನ 15 ದಿನಗಳಲ್ಲಿ ನೀತಿ ಹೊರತರುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. 15 ವರ್ಷಕ್ಕಿಂತ ಹೆಚ್ಚು ಹಳೆಯದಾದ ಒಂಬತ್ತು ಲಕ್ಷಕ್ಕೂ ಹೆಚ್ಚು ಸರ್ಕಾರಿ ವಾಹನಗಳನ್ನು ಸ್ಕ್ರ್ಯಾಪ್ ಮಾಡಲು ಈಗಾಗಲೇ ಸೂಚಿಸಿರುವ ಕುರಿತು ಸಚಿವರು ಮಾಹಿತಿ ನೀಡಿದ್ದು, ಮಾಲಿನ್ಯಕಾರಕವಲ್ಲದ ಬಸ್‌ಗಳು ಮತ್ತು ಕಾರುಗಳು ರಸ್ತೆಗಿಳಿಯುತ್ತವೆ ಎಂದು ತಿಳಿಸಿದ್ದಾರೆ.

ಪರ್ಯಾಯ ಇಂಧನಗಳೊಂದಿಗೆ ಹೊಸ ವಾಹನಗಳ ಮೂಲಕ ಅವುಗಳನ್ನು ಬದಲಾಯಿಸುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ವಾಯು ಮಾಲಿನ್ಯವನ್ನು ಮತ್ತಷ್ಟು ಕಡಿಮೆ ಮಾಡುತ್ತದೆ” ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು ಮಾಹಿತಿ ನೀಡಿದ್ದಾರೆ.ಹಳೆಯ ವಾಹನಗಳು ಸರಿಯಾಗಿ ಕಾರ್ಯನಿರ್ವಹಣೆ ಮಾಡದೇ ಇದ್ದಲ್ಲಿ, ಅಪಘಾತ ಆಗುವ ಸಂಭವ ಹೆಚ್ಚು ಇದ್ದು, ಇದರ ಹೊರತಾಗಿ, ಹೊಸ ವಾಹನಗಳಲ್ಲಿ ಸುರಕ್ಷತೆಯ ಅಂಶಗಳನ್ನು ಕೇಂದ್ರೀಕರಿಸಲಾಗಿರುತ್ತದೆ. ಹೀಗಾಗಿ, ರಸ್ತೆಯಲ್ಲಿ ವಾಹನ ನಿಯಂತ್ರಣ ಸುಲಭವಾಗಲಿದ್ದು, ಅಷ್ಟೆ ಅಲ್ಲದೆ, ಇದರಿಂದ ಅಪಘಾತ ಸಾಧ್ಯತೆ ಕಡಿಮೆ ಆಗುವ ನಿರೀಕ್ಷೆಯಿದೆ. ಹಳೆಯ ವಾಹನ ಗುಜರಿಗೆ ಸೇರಿದರೆ ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚಾಗಲಿದ್ದು, ಇದರ ಪರಿಣಾಮದಿಂದ ಆಟೊಮೊಬೈಲ್ ಕ್ಷೇತ್ರವನ್ನು ಉತ್ತೇಜನಗೊಳಿಸಿದಂತೆ ಆಗುತ್ತದೆ.

Leave A Reply

Your email address will not be published.