ಆಂಧ್ರಪ್ರದೇಶದ ನೂತನ ರಾಜಧಾನಿ ವಿಶಾಖಪಟ್ಟಣಂ : ಸಿಎಂ ಜಗಮೋಹನ್ ರೆಡ್ಡಿ

ಆಂಧ್ರ ಪ್ರದೇಶದ ನೂತನ ರಾಜಧಾನಿ ವಿಶಾಖಪಟ್ಟಣಂ ಎಂದು ಸಿಎಂ ಜಗಮೋಹನ್ ರೆಡ್ಡಿ ಘೋಷಣೆ ಮಾಡಿದ್ದಾರೆ. ಈ ಹಿಂದೆ ರಾಜಧಾನಿಯ ಬಗ್ಗೆ ಹಲವಾರು ಚರ್ಚೆಗಳು ನಡೆದಿದ್ದು, ವಿವಾದಗಳು ಉಂಟಾಗಿದ್ದು, ಇದೀಗ ಆಂಧ್ರ ಪ್ರದೇಶದ ನೂತನ ರಾಜಧಾನಿಯಾಗಿ ವಿಶಾಖಪಟ್ಟಣಂ ಆಯ್ಕೆ ಆಗಿದೆ.

ವಿಶಾಖಪಟ್ಟಣದಲ್ಲಿ ಈಗಾಗಲೇ ಸರ್ಕಾರದ ಮುಖ್ಯ ಕಛೇರಿಗಳು ಕಾರ್ಯ ನಿರ್ವಹಿಸುತ್ತಿದ್ದು, ಮುಖ್ಯಮಂತ್ರಿ ಕಛೇರಿ ಸೇರಿದಂತೆ ಇನ್ನು ಹಲವು ಪ್ರಮುಖ ಕಛೇರಿಗಳು ಅಲ್ಲಿಗೆ ಸ್ಥಳಾಂತರಗೊಳ್ಳಲಿದೆ ಎನ್ನಲಾಗಿದೆ.

ಈ ಮೊದಲು ಅಮರಾವತಿಯನ್ನು ಆಂಧ್ರ ಪ್ರದೇಶದ ರಾಜಧಾನಿಯನ್ನಾಗಿ ಮಾಡುವ ಪ್ರಸ್ತಾಪ ಬಂದಿದ್ದು, ಈ ಬಗ್ಗೆ ಜಗನ್‌ಮೋಹನ್ ರೆಡ್ಡಿ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ನೂತನ ರಾಜಧಾನಿಯ ಘೋಷಣೆ ಆಗಿದ್ದು, ವಿಶಾಖಪಟ್ಟಣದಿಂದಲೇ ಸರ್ಕಾರ ಕಾರ್ಯ ನಿರ್ವಹಿಸಲಿದೆ ಎಂದು ತಿಳಿದುಬಂದಿದೆ.

Leave A Reply

Your email address will not be published.