ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಶಿಕ್ಷಕರಿಗೆ ಸಿಗಲಿದೆ ಸಿಂಗಾಪುರದಲ್ಲಿ ಟ್ರೈನಿಂಗ್! ಯಾವ ರಾಜ್ಯದವರಿಗೆ? ಇಲ್ಲಿದೆ ಮಾಹಿತಿ

ಈಗಾಗಲೇ ರಾಜ್ಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯ ಭರವಸೆಯೊಂದಿಗೆ ಆಮ್ ಆದ್ಮಿ ಪಕ್ಷ ಪಂಜಾಬ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು ಈ ನಿಟ್ಟಿನಲ್ಲಿ ನಮ್ಮ ಪಕ್ಷ ಹಗಲಿರುಳು ಶ್ರಮವಹಿಸಿ ದುಡಿಯುತ್ತಿದ್ದು ಸದ್ಯ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಸಿಂಗಾಪುರಕ್ಕೆ ಕಳುಹಿಸುವುದಾಗಿ ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಭಗವಂತ್ ಮಾನ್ ಮಹತ್ವದ ಘೋಷಣೆ ಮಾಡಿದ್ದಾರೆ.

ಶಿಕ್ಷಕರು ಮತ್ತು ಮಗುವಿನ ಪೋಷಕರ ನಡುವಿನ ಅಂತರ ಕೊನೆಗೊಳ್ಳುವ ಅಗತ್ಯವಿದ್ದು ಮಗು ಶಾಲೆಯಲ್ಲಿ ಯಾವ ರೀತಿ ಕಾರ್ಯನಿರ್ವಹಿಸುತ್ತಿದೆ ಎಂಬುದರ ಬಗ್ಗೆ ಪೋಷಕರಿಗೆ ಅರಿವಿರಬೇಕು. ಅಂತೆಯೇ, ಶಾಲೆಯಲ್ಲಿನ ಚಟುವಟಿಕೆಯ ಹೊರತು ಮಗು ಯಾವ ಯಾವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತದೆ. ಪಠ್ಯೇತರ ಚಟುವಟಿಕೆಗಳಲ್ಲಿ ಮಗುವಿನ ಆಸಕ್ತಿಗಳ ಬಗ್ಗೆ ಶಿಕ್ಷಕರಿಗೂ ತಿಳಿದಿರುವುದು ಅತ್ಯಗತ್ಯವಾಗಿದೆ. ಈ ಕುರಿತಂತೆ ಶಿಕ್ಷಣ ನೀತಿಯಲ್ಲಿ ಕೆಲವು ಬದಲಾವಣೆ ಅಗತ್ಯವಿದ್ದು ಶಿಕ್ಷಕರಿಗೆ ತರಬೇತಿಯ ಅಗತ್ಯ ಇದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಈ ಕುರಿತಂತೆ ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸುವ ಅವಶ್ಯಕತೆ ಇರುವ ಸಲುವಾಗಿ ಪಂಜಾಬ್ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಪಂಜಾಬ್ ರಾಜ್ಯಕ್ಕೆ ಕಳುಹಿಸಲಾಗುವುದು. ಸದ್ಯ ಫೆಬ್ರವರಿ 6 ರಿಂದ ಫೆಬ್ರವರಿ 10ರವರೆಗೆ ಸಿಂಗಾಪುರದಲ್ಲಿ ಸರ್ಕಾರಿ ಶಾಲಾ ಮುಖ್ಯಸ್ಥರಿಗೆ ತರಬೇತಿ ನೀಡಲಾಗುವುದು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಾಹಿತಿ ನೀಡಿದ್ದಾರೆ.

Leave A Reply

Your email address will not be published.