Vani Jayaram Passes Away : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಂ ಇನ್ನಿಲ್ಲ!!!
ದಕ್ಷಿಣ ಭಾರತದ ಖ್ಯಾತ ಗಾಯಕಿ ವಾಣಿಜಯರಾಂ ಇಂದು ನಿಧನರಾಗಿದ್ದಾರೆ. ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ವಾಣಿ ಜಯರಾಂ ಮೃತಪಟ್ಟಿದ್ದಾರೆ. ತಮಿಳು, ತೆಲಗು, ಕನ್ನಡ, ಮಲಯಾಳಂ, ಹಿಂದಿ, ಉರ್ದು, ಮರಾಟಿ, ಬೆಂಗಾಲಿ, ಬೋಜ್‌ಪುರಿ, ತುಳು ಮತ್ತು ಓಡಿಯಾ ಭಾಷೆಗಳಲ್ಲಿ ಹಾಡಿರುವ ವಾಣಿ ಜಯರಾಂ ಮೊನ್ನೆಯಷ್ಟೇ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ್ದರು. 19456ರಲ್ಲಿ ತಮಿಳುನಾಡಿನ ವೆಲ್ಲೋರ್ ನಲ್ಲಿ ಜನಿಸಿದ ವಾಣಿ ಜಯರಾಮ್ ಅವರು, ಬಾಲ್ಯದಿಂದಲೇ ಸಂಗೀತದಲ್ಲಿ ವಿಶೇಷ ಆಸಕ್ತಿ ಹೊಂದಿದ್ದರು. ಮದ್ರಾಸ್ ವಿವಿಯ ವಿದ್ಯಾರ್ಥಿಯಾಗಿ ಆ ಬಳಿಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕೆಲಸಕ್ಕೆ ಸೇರ್ಪಡೆಗೊಂಡರು.
ಮದುವೆಯ ಬಳಿಕವೂ ತಮ್ಮ ಪತಿಯ ಬೆಂಬಲದಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಹೊಂದಿದ್ದರು. 1971ರಿಂದ ಚಿತ್ರಗೀತೆಗಳನ್ನು ಹಾಡಲು ಆರಂಭಿಸಿ, ಭಾರತದ ಪ್ರಮುಖ ಭಾಷೆಗಳ ಮೇರು ಗಾಯಕರೊಂದಿಗೆ ಹಾಡಿದ ಹಿರಿಮೆ ಹೊಂದಿದ್ದಾರೆ. ವಾಣಿ ಜಯರಾಮ್ ( Veteran playback singer Vani Jairam ) ಅವರು ಭಾರತ ಚಿತ್ರರಂಗದ ಪ್ರಖ್ಯಾತ ಹಿನ್ನಲೆ ಗಾಯಕಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು.
ಇವರು ಕನ್ನಡ, ಹಿಂದಿ, ತೆಲುಗು, ತಮಿಳು ಸೇರಿದಂತೆ ವಿವಿಧ ಭಾಷೆಗಳಲ್ಲಿ 20 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ವಾಣಿ ಜಯರಾಂ ಅವರಿಗೆ 78 ವರ್ಷ ವಯಸ್ಸಾಗಿತ್ತು. ಇದೀಗಚೆನ್ನೈನ ನುಂಗಂಬಾಕ್ಕಂನ ಹಡೋಸ್ ರಸ್ತೆಯಲ್ಲಿರುವ ಅವರ ಮನೆಯಲ್ಲೇ ನಿಧನರಾಗಿದ್ದು, ವಾಣಿ ಜಯರಾಮ್ ಹಣೆಗೆ ಗಾಯವಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಇವರ ನಿಧನಕ್ಕೆ ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.