ಜಲ ಸಂಪನ್ಮೂಲ ಇಲಾಖೆಯಲ್ಲಿ 400 ಹುದ್ದೆಗಳಿಗೆ ಅರ್ಜಿ ಆಹ್ವಾನ!

ಇಂದಿನ ಕಾಲದಲ್ಲಿ ಉದ್ಯೋಗ ಅತ್ಯವಶ್ಯಕವಾಗಿದೆ. ಆದರೆ, ಬಯಸಿದ ಉದ್ಯೋಗ ಪಡೆಯುವುದು ಸುಲಭದ ಮಾತಲ್ಲ. ಪೈಪೋಟಿಯ ನಡುವೆ ನೆಚ್ಚಿನ ಕೆಲ್ಸ ಗಿಟ್ಟಿಸಿಕೊಳ್ಳೋದು ಯುವಜನತೆಯ ಪಾಲಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದೀಗ ಕೆಲಸದ ಹುಡುಕಾಟ ನಡೆಸುತ್ತಿರುವವರಿಗೆ ಮುಖ್ಯ ಮಾಹಿತಿ ಇಲ್ಲಿದೆ.


ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 400 ಅಸಿಸ್ಟೆಂಟ್ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು ಹುದ್ದೆಗಳ ಭರ್ತಿಗೆ ಇಲಾಖೆಯು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರಸ್ತುತ, ಇಲಾಖೆಯಲ್ಲಿ 1000 ಎಂಜಿನಿಯರ್ ಹುದ್ದೆಗಳು ಖಾಲಿಯಿದ್ದು, ಹಣಕಾಸು ಇಲಾಖೆಯು ಈ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಂಡಿದೆ.

400 ಸಹಾಯಕ ಇಂಜಿನಿಯರ್, ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಯನ್ನು ಇನ್ನೆರಡು ತಿಂಗಳಲ್ಲಿ ಪೂರ್ಣಗೊಳಿಸಲಾಗುತ್ತದೆ. ಇದಲ್ಲದೆ, ನೇಮಕಗೊಂಡ ಎಂಜಿನಿಯರ್‌ಗಳಿಗೆ ಕೆಇಆರ್‌ಎಸ್, ಮೈಸೂರು ಇಲ್ಲವೇ ಧಾರವಾಡ ವಾಲ್ಮಿ ಸಂಸ್ಥೆಯಲ್ಲಿ ತರಬೇತಿ ನೀಡಲಾಗುತ್ತದೆ.

ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ.

ಹುದ್ದೆಯ ಮಾಹಿತಿ:
ಜೂನಿಯರ್ ಎಂಜಿನಿಯರ್- 300
ಸಹಾಯಕ ಎಂಜಿನಿಯರ್- 100

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ವಿದ್ಯಾರ್ಹತೆಯ ಕುರಿತಂತೆ ಮಾಹಿತಿ ಸದ್ಯದಲ್ಲೇ ಪ್ರಕಟಿಸಲಾಗುತ್ತದೆ.

ಅಭ್ಯರ್ಥಿಗಳ ವಯಸ್ಸು ಎಷ್ಟಿರಬೇಕೆಂದು ನಿಗದಿಪಡಿಸಿಲ್ಲ ಆದರೆ, ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಲಸಂಪನ್ಮೂಲ ಇಲಾಖೆಯ ಅಧಿಕೃತ ವೆಬ್​ಸೈಟ್​ https://waterresources.karnataka.gov.in/english ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.

Leave A Reply

Your email address will not be published.