Betel Leaves : ವೀಳ್ಯದೆಲೆ ನಿಮ್ಮ ಈ ನೋವನ್ನು ಕಡಿಮೆ ಮಾಡುವಲ್ಲಿ ಸಹಾಯ ಮಾಡುತ್ತೆ!

ವೀಳ್ಯದೆಲೆ ಇದು ಹೆಚ್ಚಿನ ನೀರಿನ ಅಂಶ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು ಇದು ಕಡಿಮೆ ಪ್ರಮಾಣದ ಕೊಬ್ಬು ಮತ್ತು ಮಧ್ಯಮ ಪ್ರಮಾಣದ ಪ್ರೋಟೀನ್ ಅನ್ನು ಸಹ ಹೊಂದಿದೆ. ಇದು ಅಯೋಡಿನ್, ಪೊಟ್ಯಾಶಿಯಮ್, ವಿಟಮಿನ್ ಎ, ವಿಟಮಿನ್ ಬಿ 1, ವಿಟಮಿನ್ ಬಿ 2 ಮತ್ತು ನಿಕೋಟಿನಿಕ್ ಆಮ್ಲದಂತಹ ಪೋಷಕಾಂಶಗಳಿಂದ ಕೂಡಿದ್ದು ಹಲವಾರು ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿದೆ.
ವೀಳ್ಯದೆಲೆಯು ಸುಗಂಧಭರಿತ ಬಳ್ಳಿಯಾಗಿರುವುದರಿಂದ, ಅದನ್ನು ಮನೆಗಳಲ್ಲಿ ಅಲಂಕಾರಿಕ ಸಸ್ಯವಾಗಿ ಸುಲಭವಾಗಿ ಬೆಳೆಸಬಹುದು ಮತ್ತು ಗರಿಷ್ಠ ಆರೋಗ್ಯವನ್ನು ಪಡೆಯಬಹುದು. ಹೌದು ಮಂಡಿ ನೋವು ಕಾಣಿಸಿಕೊಂಡಾಗ ಅದನ್ನು ಗುಣಪಡಿಸುವಲ್ಲಿ ವೀಳ್ಯದೆಲೆಯಿಂದ ಮಾಡಿದ ಮನೆಮದ್ದುಗಳು ಪರಿಣಾಮಕಾರಿ. ಮಂಡಿ ನೋವು ಕಾಣಿಸಿಕೊಂಡಾಗ ಇಲ್ಲಿ ನೀಡಿರುವ ವೀಳ್ಯದೆಲೆ ಮನೆಮದ್ದುಗಳನ್ನು ಮಾಡಿದರೆ ನೋವು ಶಮನವಾಗುತ್ತವೆ.

ದೇಹದಲ್ಲಿ ಯೂರಿಕ್ ಆಮ್ಲದ ಪ್ರಮಾಣ ಹೆಚ್ಚಾದರೆ, ಹೃದಯ ಮತ್ತು ಮೂಳೆ ಹಾನಿಯಾಗುವ ಅಪಾಯ ಹೆಚ್ಚಾಗುತ್ತದೆ. ನಾವು ಯೂರಿಕ್ ಆಮ್ಲಕ್ಕೆ ಮನೆಮದ್ದುಗಳ ಮೂಲಕ ಚಿಕಿತ್ಸೆ ನೀಡಬಹುದು ಮತ್ತು ಗಂಭೀರ ಸಮಸ್ಯೆಗಳನ್ನು ತಪ್ಪಿಸಬಹುದು. ಸದ್ಯ ವೀಳ್ಯದೆಲೆಯಲ್ಲಿರುವ ಗುಣಲಕ್ಷಣಗಳು ಯೂರಿಕ್ ಆಮ್ಲವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ನಮ್ಮ ಜೀವನಶೈಲಿಯು ಯೂರಿಕ್ ಆಮ್ಲವನ್ನು ಹೆಚ್ಚಿಸಲು ಕಾರಣವಾಗಿದೆ. ಅನಿಯಮಿತ ಆಹಾರ ಸೇವನೆ, ಸಕ್ಕರೆ, ವ್ಯಾಯಾಮ ಮಾಡದಿರುವುದು, ಅನಿಯಮಿತ ನಿದ್ರೆ , ಅತಿಯಾದ ಮದ್ಯಪಾನ ಮತ್ತು ಕಲಬೆರಕೆ ಆಹಾರವು ಯೂರಿಕ್ ಆಮ್ಲವನ್ನು ಹೆಚ್ಚಿಸಲು ಕಾರಣವಾಗಬಹುದು.

ಸದ್ಯ ವೀಳ್ಯದೆಲೆಯು ಯೂರಿಕ್ ಆಮ್ಲವನ್ನು ನಿಯಂತ್ರಿಸುವಲ್ಲಿ ಬಹಳ ಪ್ರಯೋಜನಕಾರಿಯಾಗಿದೆ. ಅವುಗಳ ಸಾರದಲ್ಲಿರುವ ಗುಣಲಕ್ಷಣಗಳು ಯೂರಿಕ್ ಆಮ್ಲವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿದೆ. ನೀವು ವೀಳ್ಯದೆಲೆಗಳನ್ನು ಸೇವಿಸಿದರೆ, ನೀವು ಸುಲಭವಾಗಿ ಯೂರಿಕ್ ಆಮ್ಲವನ್ನು ನಿಯಂತ್ರಿಸಬಹುದು. ವೀಳ್ಯದೆಲೆಯನ್ನು ಜಗಿಯುವ ಮೂಲಕ ಯೂರಿಕ್ ಆಮ್ಲವನ್ನು ನಿಯಂತ್ರಿಸಬಹುದು. ಇದಲ್ಲದೆ, ನೀವು ಎಲೆಗಳ ಸಿರಪ್ ಅನ್ನು ತಯಾರಿಸಬಹುದು ಮತ್ತು ಅದನ್ನು ಕುಡಿಯಬಹುದು. ಇದನ್ನು ನಿಯಮಿತವಾಗಿ ಸೇವಿಸಿದರೆ ಕೆಲವೇ ದಿನಗಳಲ್ಲಿ ಯೂರಿಕ್ ಆಸಿಡ್ ಸಮಸ್ಯೆ ದೂರವಾಗುತ್ತದೆ.

ವೀಳ್ಯದೆಲೆಯ ಹಲವಾರು ಪ್ರಯೋಜನ ಇಲ್ಲಿ ತಿಳಿಯಿರಿ :

  • ಮುಖ್ಯವಾಗಿ ಸಂದಿಗಳಲ್ಲಿ ಗಂಟು ನೋವು ಕಾಣಿಸಿಕೊಂಡಾಗ 2 ವೀಳ್ಯದೆಲೆಯನ್ನು ಸ್ವಲ್ಪ ಮಂದ ಜ್ವಾಲೆಯಲ್ಲಿ ಬಿಸಿ ಮಾಡಿ ಅದಕ್ಕೆ ಸ್ವಲ್ಪ ಸಾಸಿವೆ ಎಣ್ಣೆ ಹಚ್ಚಿ ಅದರೊಳಗೆ ಎಣ್ಣೆ ಮಿಶ್ರಿತ ಬಿಸಿ ಮಾಡಿದ ಅರಸಿನ ಹುಡಿಯನ್ನು ದಪ್ಪಗೆ ಸವರಿ ಒಂದರ ಮೇಲೆ ಒಂದು ಎಲೆಯನ್ನು ಮುಚ್ಚಿ ಗಂಟುಗಳ ಮೇಲಿಟ್ಟು ಶಾಖ ಕೊಡಿ. ಹೀಗೆ ಒಂದೆರಡು ಬಾರಿ ಬಿಸಿ ಮಾಡಿ ಪುನರಾವರ್ತಿಸಿ ಬಟ್ಟೆಯಿಂದ ಸುತ್ತಿ ಕಟ್ಟಿ. ಹೀಗೆ ಇದನ್ನು 4-5 ತಿಂಗಳು ಮಾಡುತ್ತಾ ಬಂದರೆ ಗಂಟುನೋವು ಕಡಿಮೆಯಾಗುವುದು.
  • ವೀಳ್ಯದೆಲೆಯಲ್ಲಿರುವ ಗುಣಗಳು ಗ್ಯಾಸ್ಟ್ರಿಕ್ ಅಲ್ಸರ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರಲ್ಲಿ ಆ್ಯಂಟಿಆಕ್ಸಿಡೆಂಟ್‌ಗಳು ಹೇರಳವಾಗಿ ಇರುತ್ತವೆ. ಇದು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸುವ ಕೆಲಸ ಮಾಡುತ್ತದೆ. ವೀಳ್ಯದೆಲೆಯಲ್ಲಿ ಉರಿಯೂತ ಶಮನಕಾರಿ ಗುಣಗಳಿವೆ. ಸಂಧಿವಾತದ ನೋವನ್ನು ನಿವಾರಿಸಲು ಸಹ ಅವರು ಸಹಾಯ ಮಾಡುತ್ತಾರೆ.
  • ವೀಳ್ಯದೆಲೆಯನ್ನು ಅರೆದು ತೆಗೆದ ರಸವನ್ನು ಗಾಯಗಳಿಗೆ ಹಚ್ಚಿದರೆ ಗಾಯಗಳು ಶೀಘ್ರ ಗುಣವಾಗುತ್ತದೆ.
  • ಒಂದು ವೀಳ್ಯದೆಲೆ, ಸ್ವಲ್ಪ ತುಳಸಿ ಹಾಗೂ ಒಂದು ಲವಂಗವನ್ನು ಅರೆದು ದಿನಕ್ಕೆ 2 ಬಾರಿ ಸೇವಿಸಿದರೆ ಕೆಮ್ಮು ಕಡಿಮೆಯಾಗುವುದು.
  • ವೀಳ್ಯದೆಲೆಗಳನ್ನು ಕತ್ತರಿಸಿ ನೀರಿನಲ್ಲಿ ಹಾಕಿ ಕುದಿಸಿ ಬಳಿಕ ಸೋಸಿ ಈ ಕಷಾಯಕ್ಕೆ ಉಪ್ಪು ಬೆರೆ‌ಸಿ ಬಾಯಿ ಮುಕ್ಕಳಿಸಿದರೆ ವಸಡಿನ ನೋವು ಊತ ಗುಣವಾಗುತ್ತದೆ.
  • ಉಸಿರಾಟದ ತೊಂದರೆ ಇರುವವರು ವೀಳ್ಯದೆಲೆ ರಸ, ಈರುಳ್ಳಿ ರಸ, ಶುಂಠಿ ರಸ ಹಾಗೂ ಜೇನು ತುಪ್ಪ ಬೆರೆಸಿ ಬೆಳಿಗ್ಗೆ ಖಾಲಿ ಹೊಟ್ಟೆಗೆ ಸೇವಿಸಿ ಇದನ್ನು ಸುಮಾರು 4-5 ತಿಂಗಳು ತೆಗೆದುಕೊಳ್ಳುತ್ತಾ ಬಂದರೆ ಉಸಿರಾಟದ ತೊಂದರೆ ಅತೀ ಬೇಗನೆ ವಾಸಿಯಾಗುವುದು.
  • ಒಂದೆರೆಡು ಚಮಚ ವೀಳ್ಯದೆಲೆ ರಸಕ್ಕೆ ಸ್ವಲ್ಪ ಜೇನು ತುಪ್ಪ ಬೆರೆಸಿ ದಿನಕ್ಕೆ 3 ಬಾರಿ ಸೇವಿಸುತ್ತಾ ಬಂದರೆ ಶ್ವಾಸಕೋಶಕ್ಕೆ ಸಂಬಂಧಿಸಿ ರೋಗಗಳು ನಿವಾರಣೆಯಾಗುವುದು.
  • ವೀಳ್ಯದೆಲೆಗೆ ಉಪ್ಪು ಹಾಕಿಕೊಂಡು ಅಗಿದು ರಸವನ್ನು ನುಂಗುತ್ತಿದ್ದರೆ ಹೊಟ್ಟೆನೋವು ಕಡಿಮೆಯಾಗುವುದು.
  • ಕ್ಯಾಲ್ಸಿಯಂ ಅಂಶ ಹೆಚ್ಚಿರುವ ವೀಳ್ಯದೆಲೆ ತಿನ್ನುವುದರಿಂದ ಜೀರ್ಣ ಶಕ್ತಿ ಹೆಚ್ಚಿಸಿ,ಧ್ವನಿ ಸರಿಪಡಿಸಿ,ಗ್ಯಾಸ್ಟ್ರಿಕ್‌ ಟ್ರಬಲ್‌ವನ್ನು ಬಹುಮಟ್ಟಿಗೆ ಗುಣಪಡಿಸುತ್ತದೆ.
  • ಒಂದು ಚಮಚದಷ್ಟು ವೀಳ್ಯದೆಲೆಯ ರಸವನ್ನು ಮಕ್ಕಳಿಗೆ ಕೊಡುವುದರಿಂದ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸಬಹುದು.
  • ವೀಳ್ಯದೆಲೆಯನ್ನು ಎಳ್ಳೆಣ್ಣೆಯಲ್ಲಿ ನೆನೆಸಿ ಸ್ವಲ್ಪ ಬಿಸಿ ಮಾಡಿ ಮಕ್ಕಳ ಎದೆ ಮೇಲೆ ಉಜ್ಜಿದರೆ ಅಯಾಸ, ಕೆಮ್ಮಿನಂತಹ ಸಮಸ್ಯೆಗಳು ಕಡಿಮೆಯಾಗುತ್ತವೆ.
  • ತಲೆ ಹೊಟ್ಟು ಇದ್ದಲ್ಲಿ ಬೇಕಾಗುವಷ್ಟು ವೀಳ್ಯದೆಲೆಯನ್ನು ನುಣ್ಣಗೆ ಅರೆದು ಕೊಬ್ಬರಿ ಎಣ್ಣೆಯೊಂದಿಗೆ ಮಿಶ್ರ ಮಾಡಿ. ಇದಕ್ಕೆ ಅರ್ಧ ಲಿಂಬೆರಸ ಬೆರೆಸಿ ತಲೆಯ ಪ್ರತಿಯೊಂದು ಭಾಗಕ್ಕೆ ಪೇಸ್ಟ್‌ ತರ ಹೆಚ್ಚಿಡಿ. ಅರ್ಧಗಂಟೆ ಬಳಿಕ ಸ್ನಾನ ಮಾಡಿದರೆ ತಲೆಯ ಹೊಟ್ಟು ಮತ್ತು ಕೂದಲು ಉದುರುವುದು ಕಡಿಮೆಯಾಗುತ್ತದೆ.

ಈ ರೀತಿಯಾಗಿ ನೀವು ಹಲವಾರು ಪ್ರಯೋಜನಗಳನ್ನು ವೀಳ್ಯದೆಲೆ ಯನ್ನು ಉಪಯೋಗಿಸುವುದರಿಂದ ಪಡೆದುಕೊಳ್ಳಬಹುದಾಗಿದೆ.

Leave A Reply

Your email address will not be published.