PM Modi Bengaluru Visit: ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ | ನಾಳೆಯ ಕಾರ್ಯಕ್ರಮದ ಸಂಪೂರ್ಣ ವಿವರ ಇಲ್ಲಿದೆ!

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಾಳೆ ರಾಜಧಾನಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರ 6 ಅಧಿಕೃತ ಕಾರ್ಯಕ್ರಮಗಳು ನಿಗದಿಯಾಗಿದೆ. ಅವುಗಳ ವಿವರ ಇಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು–ತುಮಕೂರಿನ ವಿವಿಧ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಸಂಬಂಧಿಸಿದಂತೆ ನಾಳೆ ಬೆಂಗಳೂರಿಗೆ ಆಗಮಿಸಲಿದ್ದು, ದೆಹಲಿಯಿಂದ ದೇವನಹಳ್ಳಿ ಬಳಿಯ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ನಂತರ ವಿವಿಧ ಕಾರ್ಯಕ್ರಮಗಳಿಗೆ ತೆರಳಲಿದ್ದಾರೆ.

ಪ್ರಧಾನಿ ಮೋದಿಯವರು ಸೋಮವಾರ ಬೆಳಗ್ಗೆ 11.30ಕ್ಕೆ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ‘2023ರ ಇಂಧನ ಸಪ್ತಾಹ’ವನ್ನು ಉದ್ಘಾಟನೆ ಮಾಡಲಿದ್ದಾರೆ. ಫೆಬ್ರವರಿ 6 ರಿಂದ 8ರವರೆಗೆ ಐಇಡಬ್ಲ್ಯೂ ಕಾರ್ಯಕ್ರಮ ಆಯೋಜನೆಗೊಂಡಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು ಜಾಗತಿಕ ತೈಲ ಮತ್ತು ಅನಿಲ ವಲಯದ ಸಿಇಒಗಳ ದುಂಡು ಮೇಜಿನ ಸಭೆಯ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ನಂತರ ನರೇಂದ್ರ ಮೋದಿ ಹಸಿರು ಸಾಗಣೆ ಜಾಥಾಗೆ ಚಾಲನೆ ನೀಡಲಿದ್ದಾರೆ. ಹಸಿರು ಇಂಧನ ಕ್ಷೇತ್ರದಲ್ಲಿ ಬಹುಹಂತದ ಉಪಕ್ರಮಗಳು, ಸಾಗಣೆ ಜಾಥಾ ಇದೆಲ್ಲದರ ಬಳಿಕ ಶೀಷರಹಿತ ಉಪಕ್ರಮದಡಿ ಸಮವಸ್ತ್ರವನ್ನ ಮೋದಿ ಬಿಡುಗಡೆ ಮಾಡುತ್ತಾರೆ. ನಂತರ ಭಾರತೀಯ ತೈಲ ನಿಮಗದ ಒಳಾಂಗಣ ಸೌರ ಅಡುಗೆ ವ್ಯವಸ್ಥೆಯ ಅವಳಿ ಕುಕ್ ಟಾಪ್ ಮಾದರಿಯನ್ನು ಲೋಕಾರ್ಪಣೆಗೊಳಿಸಿ ನಂತರ ಬಿಐಇಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ನಂತರ ನರೇಂದ್ರ ಮೋದಿಯವರು ಹಸಿರು ಸಾಗಣೆ ಜಾಥಾಗೆ ಚಾಲನೆ ನೀಡಲಿದ್ದಾರೆ. ಹಸಿರು ಇಂಧನ ಕ್ಷೇತ್ರದಲ್ಲಿ ಬಹುಹಂತದ ಉಪಕ್ರಮಗಳು, ಸಾಗಣೆ ಜಾಥಾ ಇದೆಲ್ಲದರ ಬಳಿಕ ಶೀಷರಹಿತ ಉಪಕ್ರಮದಡಿ ಸಮವಸ್ತ್ರವನ್ನ ಮೋದಿ ಬಿಡುಗಡೆ ಮಾಡುತ್ತಾರೆ. ನಂತರ ಭಾರತೀಯ ತೈಲ ನಿಮಗದ ಒಳಾಂಗಣ ಸೌರ ಅಡುಗೆ ವ್ಯವಸ್ಥೆಯ ಅವಳಿ ಕುಕ್ ಟಾಪ್ ಮಾದರಿಯನ್ನು ಲೋಕಾರ್ಪಣೆಗೊಳಿಸಿ ನಂತರ ಬಿಐಇಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರಿನ ಕಾರ್ಯಕ್ರಮದ ನಂತರ ಪ್ರಧಾನಿ ಮೋದಿ ತುಮಕೂರು ಜಿಲ್ಲೆಯ ಕಾರ್ಯಕ್ರಮಗಳಿಗೆ ತೆರಳಲಿದ್ದಾರೆ. ತುಮಕೂರು ಕಾಯಕ್ರಮದ ವೇಳಾಪಟ್ಟಿಯ ಪ್ರಕಾರ ಮಧ್ಯಾಹ್ನ 3.30ಕ್ಕೆ ಹೆಚ್ಎಎಲ್ (HAL) ಹೆಲಿಕಾಪ್ಟರ್ ಕಾರ್ಖಾನೆಯನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ.

ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಸಾಧಿಸಲು HAL ಹೆಲಿಕಾಪ್ಟರ್ ಕಾರ್ಖಾನೆ ಮತ್ತೊಂದು ಹೆಜ್ಜೆಯಾಗಿದೆ. ಇದು ಏಷ್ಯಾದಲ್ಲಿಯೇ ಅತಿದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಸೌಲಭ್ಯವಿರುವ ಕಾರ್ಖಾನೆಯಾಗಿದೆ. ಆರಂಭಿಕವಾಗಿ ಹಗುರ ಬಳಕೆಯ ಹೆಲಿಕಾಪ್ಟರ್(LUH)ಗಳನ್ನು ಉತ್ಪಾದಿಸಲಾಗುತ್ತದೆ. ಎಲ್‍ಯುಎಚ್ ದೇಶೀಯವಾಗಿ ವಿನ್ಯಾಸಗೊಳಿಸಲಾದ ಮತ್ತು ಅಭಿವೃದ್ಧಿಪಡಿಸಿದ 3-ಟನ್ ಶ್ರೇಣಿ, ಏಕ ಎಂಜಿನ್ ವಿವಿಧೋದ್ದೇಶ ಉಪಯುಕ್ತತೆಯ ಹೆಲಿಕಾಪ್ಟರ್ ಆಗಿದೆ. ಪ್ರಧಾನಿ ಮೋದಿಯವರು 2016ರಲ್ಲಿ ಈ ಘಟಕಕ್ಕೆ ಶಿಲಾನ್ಯಾಸ ನೆರವೇರಿಸಿದ್ದರು. ಇದು ಹಸಿರು ವಲಯ ಸಮರ್ಪಿತ ಹೆಲಿಕಾಪ್ಟರ್ ಕಾರ್ಖಾನೆಯಾಗಿದೆ. ಇದರಿಂದ ಸಾಮರ್ಥ್ಯ ಹೆಚ್ಚಿಸಲಿದೆ ಮತ್ತು ಪರಿಸರ ಸ್ನೇಹಿ ಹೆಲಿಕಾಪ್ಟರ್‍ಗಳನ್ನು ಇಲ್ಲಿ ನಿರ್ಮಾಣ ಮಾಡಲಾಗುತ್ತದೆ.

ಕೈಗಾರಿಕಾ ಪ್ರದೇಶದ ಶಿಲಾನ್ಯಾಸದ ಬಳಿಕ 430 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವ ಜಲಜೀವನ್ ಅಭಿಯಾನದ ಯೋಜನೆಗಳಿಗೆ ನಾಳೆ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ತಿಪಟೂರಿನ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಯನ್ನು 430 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ಚಿಕ್ಕನಾಯಕನಹಳ್ಳಿಯ 147 ಜನವಸತಿ ಪ್ರದೇಶಗಳಿಗೆ 115 ಕೋಟಿ ರೂ. ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಎಲ್ಲ ಕಾರ್ಯಕ್ರಮಗಳನ್ನು ಮುಗಿಸಿ ನಾಳೆ ಸಂಜೆ 4.45ಕ್ಕೆ ತುಮಕೂರಿನಿಂದ ಬೆಂಗಳೂರಿಗೆ ಬಂದು, ಸಂಜೆ 5.20ಕ್ಕೆ ಬೆಂಗಳೂರಿನಿಂದ ದೆಹಲಿಗೆ ಪ್ರಧಾನಿ ನರೇಂದ್ರ ಮೋದಿ ತೆರಳುತ್ತಾರೆ.

Leave A Reply

Your email address will not be published.