ಕಾಪು ದೇವಸ್ಥಾನದ ಬಳಿಯಲ್ಲೇ ಚೂರಿ ಇರಿತ!! ಹಾಡಹಗಲೇ ನಡೆಯಿತು ಭೀಕರ ಕೊಲೆ!?

Share the Article

ಉಡುಪಿ : ಇಂದು ಸಂಜೆ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆಯೊಂದು ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಪಾಂಗಾಳ ಎಂಬಲ್ಲಿ ನಡೆದಿದೆ.

ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ (41) ಕೊಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಚೂರಿ ಇರಿತಕ್ಕೊಳಗಾದ ವ್ಯಕ್ತಿಗೆ ತೀವ್ರ ರಕ್ತಸ್ರಾವ ಉಂಟಾಗಿದ್ದು, ರಕ್ತದ ಮಡುವಿನ್ಲೇ ಬಿದ್ದಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡ ಅವರು ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.

ಪಾಂಗಾಳ ಶ್ರೀ ಜನಾರ್ದನ ದೇವಸ್ಥಾನದ ಬಳಿಯ ಅಂಗಡಿಯ ಬಳಿ ಈ ಕೃತ್ಯ ನಡೆದಿದೆ. ಕೊಲೆಗೆ ನಿಖರ ಕಾರಣ ಗೊತ್ತಿಲ್ಲ. ಅಂದಾಜಿನ ಪ್ರಕಾರ ಭೂ ವ್ಯವಹಾರದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಶಂಕೆ ವ್ಯಕ್ತಪಡಿಸಲಾಗಿದೆ.

ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ, ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ, ಕಾಪು ಎಸೈ ಸುಮ ಬಿ., ಕ್ರೈಂ ಎ ಭರತೇಶ್ ಕಂಕಣವಾಡಿ ಸಹಿತ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Leave A Reply