ESIC Karnataka Recruitment 2023: ನೌಕರರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗವಕಾಶ | ಅರ್ಜಿ ಸಲ್ಲಿಸಲು ಕೊನೆ ದಿನ-ಫೆ.17
ಸರ್ಕಾರಿ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ : ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ(Employees State Insurance Corporation Karnataka)
ಹುದ್ದೆ : ಪಾರ್ಟ್ ಟೈಂ ಟೀಚಿಂಗ್ ಫ್ಯಾಕಲ್ಟಿ
ಒಟ್ಟು ಹುದ್ದೆ : 4
ವಿದ್ಯಾರ್ಹತೆ : ಸ್ನಾತಕೋತ್ತರ ಪದವಿ
ವೇತನ ದಿನಕ್ಕೆ : 200-400 ರೂ.
ಉದ್ಯೋಗದ ಸ್ಥಳ : ಕಲಬುರಗಿ
ಅರ್ಜಿ ಸಲ್ಲಿಸಲು ಕೊನೆಯ ದಿನ : ಫೆಬ್ರವರಿ 17, 2023
ಶೈಕ್ಷಣಿಕ ಅರ್ಹತೆ:
ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 3, 2023ಕ್ಕೆ ಗರಿಷ್ಠ 66 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಉದ್ಯೋಗದ ನಿಯಮಾನುಸಾರ ಪಾರ್ಟ್ ಟೈಂ ಟೀಚಿಂಗ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಗಂಟೆಗೆ 200-400 ರೂ. ವೇತನ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ನೇಮಕಾತಿ ಅಧಿಸೂಚನೆ ಪ್ರಕಾರ, ಪಾರ್ಟ್ ಟೈಂ ಟೀಚಿಂಗ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಲಬುರಗಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಬೋಧನಾ ಅನುಭವ
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ಆರಂಭ ದಿನಾಂಕ: 03/02/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಫೆಬ್ರವರಿ 17, 2023
ಹೆಚ್ಚಿನ ಮಾಹಿತಿಗೆ:
ದೂರವಾಣಿ ಸಂಖ್ಯೆ : 08471-265546-265547 ಇ-ಮೇಲ್ : deanmc-gb.kar@esic.nic.in