ಮಂಗಳೂರು : ನರ್ಸಿಂಗ್ ಕಾಲೇಜಿನ ನೂರಾರು ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥ | ರಾತ್ರಿ ಊಟ ಮಾಡಿದ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿರುವ ನರ್ಸಿಂಗ್ ಕಾಲೇಜ್ ನ ನೂರಾರು ವಿದ್ಯಾರ್ಥಿಗಳು ಆಹಾರ ಸೇವಿಸಿ ಅಸ್ವಸ್ಥಗೊಂಡಿರುವ ಘಟನೆ ಸೋಮವಾರ ರಾತ್ರಿ ಬೆಳಕಿಗೆ ಬಂದಿದೆ.
ಮಂಗಳೂರು ಶಕ್ತಿನಗರದ ಹಾಸ್ಟೆಲ್ ನಲ್ಲಿ ಘಟನೆ ನಡೆದಿದ್ದು ಅಸ್ವಸ್ಥ ವಿದ್ಯಾರ್ಥಿಗಳನ್ನು ಕಾಲೇಜ್ ಬಸ್ ಗಳಲ್ಲಿ ಕರೆತಂದು ನಗರದ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾತ್ರಿ ಊಟ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಘಟನೆಗೆ ಸೂಕ್ತ ಕಾರಣ ತಿಳಿದುಬಂದಿಲ್ಲ.