Samsung Smartphones : ಸ್ಯಾಮ್‌ಸಂಗ್ ಗ್ಯಾಲಕ್ಸಿ 22 ಮತ್ತು 23 ಯ ಮಧ್ಯೆ ಯಾವುದು ಬೆಸ್ಟ್ ಫೋನ್ ಗೊತ್ತಾ? ಇಲ್ಲಿದೆ ನೋಡಿ ಶಾಕಿಂಗ್ ಮಾಹಿತಿ
ಇದೀಗ ಸ್ಯಾಮ್‌ಸಂಗ್ ಕಂಪನಿ ಹೊಸ ಹೊಸ ಮಾದರಿಯ ಸ್ಮಾರ್ಟ್ಫೋನ್ಗಳನ್ನು ತನ್ನ ಗ್ರಾಹಕರಿಗೆ ಪರಿಚಯಿಸುತ್ತಲೇ ಇದೆ. ಜನಪ್ರಿಯ ಮೊಬೈಲ್ ಕಂಪೆನಿಗಳಲ್ಲಿ ಒಂದಾದ ಸ್ಯಾಮ್‌ಸಂಗ್ ತನ್ನ ಕಂಪೆನಿಯಿಂದ ಹಲವಾರು ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ಬಹಳಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕಳೆದ ವರ್ಷ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್22 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡುವ ಮೂಲಕ ಭಾರೀ ಸಂಚಲನ ಮೂಡಿಸಿತ್ತು. ಇದೇ ಸೀರಿಸ್ನಿಂದ ಈ ಬಾರಿ ಮತ್ತೊಂದು ಹೊಸ ಗ್ಯಾಲಕ್ಸಿ ಎಸ್23 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.
ಸ್ಯಾಮ್‌ಸಂಗ್ ತನ್ನ ಬ್ರಾಂಡ್ನ ಅಡಿಯಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್22 ಮತ್ತು ಗ್ಯಾಲಕ್ಸಿ 23 ಸ್ಮಾರ್ಟ್ಫೋನ್ಗಳಲ್ಲಿ ಬೆಸ್ಟ್ ಯಾವುದು ಎಂದು ಇಲ್ಲಿ ಸಂಪೂರ್ಣ ಮಾಹಿತಿ ತಿಳಿಸಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್22 ಸ್ಮಾರ್ಟ್‌ಫೋನ್:
- ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್22 ಸ್ಮಾರ್ಟ್‌ಫೋನ್ 6.1 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡೈನಾಮಿಕ್ ಅಮೋಲ್ಡ್ 2X ಡಿಸ್‌ಪ್ಲೇಯನ್ನುಪಡೆದಿದೆ. ಜೊತೆಗೆ ಈ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದೆ.
- ಈ ಫೋನ್ ಆಕ್ಟಾ ಕೋರ್ 4nm ಎಸ್ಓಸಿ ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, 8 ಜಿಬಿ ರ್‍ಯಾಮ್ ಮತ್ತು 256 ಜಿಬಿ ಸ್ಟೋರೇಜ್ ಆಯ್ಕೆಯನ್ನು ಪಡೆದಿದೆ.
- ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 12 ಓಎಸ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಇದರೊಂದಿಗೆ 3,700mAh ಬ್ಯಾಟರಿ ಬ್ಯಾಕಪ್ ಅನ್ನು ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್23 ಸ್ಮಾರ್ಟ್‌ಫೋನ್ :
- ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್23 ಸ್ಮಾರ್ಟ್‌ಫೋನ್ 6.1 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡೈನಾಮಿಕ್ ಅಮೋಲ್ಡ್ 2X ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಹಾಗೆಯೇ 240Hz ಗೇಮಿಂಗ್ ಟಚ್ ಸಾಮರ್ಥ್ಯವನ್ನು ಸಹ ಒಳಗೊಂಡಿದೆ.
- ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್23 ಸ್ಮಾರ್ಟ್ಫೋನ್ನ ಡಿಸ್ಪ್ಲೇ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ವನ್ನು ಆ್ಯಡ್ ಮಾಡಲಾಗಿದೆ.
- ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 8 ಜೆನ್ 2 ಪ್ರೊಸೆಸರ್ ಬೆಂಬಲ ಹೊಂದಿದೆ.
- 8ಜಿಬಿ ರ್‍ಯಾಮ್ ಮತ್ತು 256 ಜಿಬಿ ಸ್ಟೋರೇಜ್ ಸಾಮರ್ಥ್ಯದೊಂದಿಗೆ ಬಿಡುಗಡೆಯಾಗಿದೆ.
- ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 13 ಓಎಸ್ ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಇದರೊಂದಿಗೆ 3,900mAh ಬ್ಯಾಟರಿ ಬ್ಯಾಕಪ್ ಅನ್ನು ಸಹ ಹೊಂದಿದೆ.
ಗ್ಯಾಲಕ್ಸಿ ಎಸ್23 ಮತ್ತು ಗ್ಯಾಲಕ್ಸಿ ಎಸ್22 ಸ್ಮಾರ್ಟ್ಫೋನ್ನ ಪ್ರೊಸೆಸರ್ ಸಾಮರ್ಥ್ಯ:
- ಪ್ರೊಸೆಸರ್ ವಿಭಾಗದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್22 ಫೋನ್‌ಗಿಂತ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್23 ಫೋನ್ ಅಪ್‌ಗ್ರೇಡ್ ಪ್ರೊಸೆಸರ್ ಅನ್ನು ಹೊಂದಿದೆ.
- ಗ್ಯಾಲಕ್ಸಿ ಎಸ್22 ಫೋನ್ Exynos 2200 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದರೆ, ನೂತನ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್23 ಫೋನಿನಲ್ಲಿ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 8 ಜೆನ್ 2 ಪ್ರೊಸೆಸರ್ ಅನ್ನು ಹೊಂದಿದೆ.
- ಇನ್ನು ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಸಹ ಒದಗಿಸಲಾಗಿದೆ. ನೂತನ ಪ್ರೊಸೆಸರ್ ಹಿಂದಿನ ಪ್ರೊಸೆಸರ್‌ಗಿಂತ ಉತ್ತಮವಾಗಿದೆ.
- ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ ಸೀರಿಸ್ನ ಫೋನ್‌ಗಳಲ್ಲಿ ಕ್ಯಾಮೆರಾ ಪ್ರಮುಖ ಫೀಚರ್ಸ್ಗಳಲ್ಲಿ ಒಂದಾಗಿದೆ. ಆದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್23 ಫೋನಿನಲ್ಲಿ, ಗ್ಯಾಲಕ್ಸಿ ಎಸ್22 ಫೋನ್‌ಗಿಂತ ಹೆಚ್ಚಿನ ಕ್ಯಾಮೆರಾ ಸೆನ್ಸಾರ್ ಫೀಚರ್ ಅನ್ನು ನೀಡಲಾಗಿಲ್ಲ.
- ಸ್ಯಾಮ್‌ಸಂಗ್ ಕಂಪೆನಿಯಿಂದ ಬಿಡುಗಡೆಯಾದ ಹೊಸ ಫೋನ್ ಸಹ ಹಿಂದಿನ ಫೋನ್‌ನಂತೆ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಇನ್ನು ಸೆಲ್ಫಿ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಆದರೆ ಗ್ಯಾಲಕ್ಸಿ ಎಸ್22 ಫೋನಿನಲ್ಲಿ ಸೆಲ್ಫಿ ಕ್ಯಾಮೆರಾವು 10 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ.
- ಬ್ಯಾಟರಿ ವಿಭಾಗದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್22 ಫೋನ್‌ಗಿಂತ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್23 ಫೋನಿನಲ್ಲಿ ಬ್ಯಾಟರಿ ವಿಭಾಗದಲ್ಲಿ ಬದಲಾವಣೆಗಳನ್ನು ಮಾಡಿಲ್ಲ.
- ಗ್ಯಾಲಕ್ಸಿ ಎಸ್22 ಫೋನ್ 3,700mAh ಬ್ಯಾಟರಿ ಬ್ಯಾಕಪ್ ಅನ್ನು ಒಳಗೊಂಡಿದ್ದು, ನೂತನ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್23 ಫೋನ್ 3,900mAh ಬ್ಯಾಟರಿ ಬ್ಯಾಕಪ್ ಅನ್ನು ಅಳವಡಿಸಲಾಗಿದೆ. ಈ ಮೂಲಕ ಹೊಸ ಸ್ಮಾರ್ಟ್ಫೋನ್ನಲ್ಲಿ ಬ್ಯಾಟರಿ ಬ್ಯಾಕಪ್ ಅನ್ನು 200mAh ನಷ್ಟು ಹೆಚ್ಚಿಸಲಾಗಿದೆ.
ಸದ್ಯ ಈ ಮೇಲಿನ ಮಾಹಿತಿ ಆಧಾರದ ಮೇಲೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್22 ಮತ್ತು ಗ್ಯಾಲಕ್ಸಿ 23 ಸ್ಮಾರ್ಟ್ಫೋನ್ಗಳಲ್ಲಿ ಬೆಸ್ಟ್ ಯಾವುದು ಎಂದು ನೀವು ಆಯ್ಕೆ ಮಾಡಿಕೊಳ್ಳಬಹುದಾಗಿದೆ.