ರಾಜ್ಯದ ಅನ್ನದಾತರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ! ರೈತರಿಗೆ 7 ತಾಸು ಬದಲು, 10 ತಾಸು ವಿದ್ಯುತ್ ನೀಡಲು ಮುಂದಾಯ್ತು ಇಲಾಖೆ!!

ಚುನಾವಣೆ ಹಿನ್ನಲೆಯಲ್ಲಿ ಎಲ್ಲಾ ವರ್ಗದ ಜನರಿಗೆ ಸಿಹಿ ಸುದ್ದಿ ನೀಡುತ್ತಿರುವ ಸರ್ಕಾರ ಇದೀಗ ದೇಶದ ಅನ್ನದಾತರಿಗೂ ಗುಡ್ ನ್ಯೂಸ್ ನೀಡಿದೆ. ರಾಜ್ಯದ ರೈತರಿಗೆ ಇಂಧನ ಸಚಿವ ಸುನೀಲ್ ಕುಮಾರ್ ಸಿಹಿಸುದ್ದಿ ನೀಡಿದ್ದು, ರೈತರಿಗೆ 7 ತಾಸು ಬದಲಾಗಿ 10 ತಾಸು ವಿದ್ಯುತ್ ಒದಗಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಅವರು ತಿಳಿಸಿದ್ದಾರೆ.

ಕೊಪ್ಪಳದ ಕನಕಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕ.ವಿ.ಪ್ರ.ನಿ.ನಿ ಮತ್ತು ಗು.ವಿ.ಸ.ಕಂ.ನಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮವಕ್ಕೆ ಚಾಲನೆ ನೀಡಿ ಅವರು ಮಾತನಾಡಿದ ಅವರು, ನಮ್ಮ ಸರ್ಕಾರವು ಅಮೃತ ಜ್ಯೋತಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ 75 ಯುನಿಟ್ ವಿದ್ಯುತ್ ಉಚಿತವಾಗಿ ನೀಡುತ್ತಿದೆ. ರಾಜ್ಯದಲ್ಲಿ 6 ಸಾವಿರ ಕಿ.ಮೀ ವಿದ್ಯುತ್ ಲೈನ್ ಹಾಕಲಾಗಿದೆ. ಕೃಷಿಕರ ಪಂಪ್ಸೆಟ್ ಗಳಿಗೆ 7 ಗಂಟೆಗಳ ಕಾಲ ವಿದ್ಯುತ್ ನೀಡಲಾಗುತ್ತಿದ್ದು, ಇದಕ್ಕಾಗಿ 16 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದಲ್ಲಿ ಸಮರ್ಪಕವಾಗಿ ಅನುಷ್ಠಾನಮಾಡಲಾಗುತ್ತದೆ ಎಂದರು.

ಬಳಿಕ ಮಾತನಾಡಿದ ಅವರು ‘ಇಂಧನ ಇಲಾಖೆಯು 2030ಕ್ಕೆ ಬೇಕಾಗಿರುವ ಕಾರ್ಯಕ್ರಮ, ಯೋಜನೆಗಳನ್ನು ಈಗಾಗಲೇ ಜಾರಿಗೆ ಮಾಡಲಾಗುತ್ತಿದೆ. ಪರಿಸರ ಸ್ನೇಹಿ ಸೌರಶಕ್ತಿ ಮತ್ತು ಪವನ ಶಕ್ತಿ ಉತ್ಪಾದನಾ ಘಟಕಗಳನ್ನು ಹೆಚ್ಚಿಸಲು ಮುಂದಾಗಿದ್ದೇವೆ. ಇಂಧನ ಇಲಾಖೆಯಲ್ಲಿ ಹೊಸ ರೀತಿಯ ಬದಲಾವಣೆಯಾಗಿದೆ. ಎಲ್ಲರಿಗೂ ಅವಶ್ಯವಿರುವ ಇಲಾಖೆಯನ್ನು ಜನಸ್ನೇಹಿಯನ್ನಾಗಿಸುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ನೀಡಿದೆ. ರೈತರಿಗೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ನೀಡುವುದು ನಮ್ಮ ಸರ್ಕಾರದ ಆಶಯವಾಗಿದೆ. ಎರಡು ವರ್ಷಗಳ ಅವಧಿಯೊಳಗೆ ರಾಜ್ಯದಲ್ಲಿ 250 ಕ್ಕೂ ಅಧಿಕ ಹೊಸ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆ ಮತ್ತು ಉನ್ನತೀಕರಣವನ್ನು ವ್ಯಾಪಕವಾಗಿ ಮಾಡಿದ್ದೇವೆ. ಇದರ ಭಾಗವಾಗಿ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ 150 ಕೊಟಿ ರೂ.ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ಮಾಡಲಾಗಿದೆ. ಎಂದರು.

ವಿದ್ಯುತ್ ಸಂಪರ್ಕ ಇಲ್ಲದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ‘ಹೊಸ ಬೆಳಕು’ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಡಿ ಪ್ರತಿ ಮನೆಗಳಿ ವಿದ್ಯುತ್ ಸೌಲಭ್ಯ ನೀಡುವುದೇ ನಮ್ಮ ಸರ್ಕಾರದ ಉದ್ದೇಶವಾಗಿದೆ. ಸುಟ್ಟು ಹೋದ ಟಿಸಿಗಳನ್ಮು ಬದಲಾವಣೆ ಮಾಡಿಸಿಕೊಳ್ಳಲು ರೈತರು ಒಂದು ವಾರದಿಂದ 15 ದಿನಗಳ ಕಾಲ ಕಾಯುವುದಲ್ಲದೇ, ತುಂಬಾ ತೊಂದರೆ ಅನುಭವಿಸಬೇಕಾಗಿತ್ತು. ಈ ನಿಟ್ಟಿನಲ್ಲಿ 24 ಗಂಟೆಯೊಳಗೆ ಪರಿಹಾರ ಕ್ರಮ ಕೈಗೊಳ್ಳಲಾಗುತ್ತಿದ್ದು, ರೈತರ ಬೇಡಿಕೆಗಳನ್ನು ಸಹಕಾರಗೊಳಿಸಿದ್ದೇವೆ ಎಂದು ಹೇಳಿದರು.

Leave A Reply

Your email address will not be published.