CAPF Job Notification 2023 : ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯಲ್ಲಿ ಉದ್ಯೋಗ !

Share the Article

ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್‌) ಮೆಡಿಕಲ್ ಆಫೀಸರ್ ಹುದ್ದೆಗಳ ಭರ್ತಿಗೆ ನೇಮಕಾತಿಯ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಇಲಾಖೆಯಲ್ಲಿ 279 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್‌) ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿಪ್ಲೊಮ/ ಡಿಗ್ರಿ / ಡಿಎಂ / ಎಂ.ಸಿಹೆಚ್ / ಪಿಜಿ / ಎಂಬಿಬಿಎಸ್ ಪಾಸ್ ಮಾಡಿರಬೇಕು (ಸಂಬಂಧಿಸಿದ ವಿಷಯಗಳಲ್ಲಿ). ಈ ಎಲ್ಲಾ ವಿದ್ಯಾರ್ಹತೆಯನ್ನು ಪಡೆದಿರಬೇಕು.

ಹುದ್ದೆಗಳ ವಿವರ :
ಸೂಪರ್ ಸ್ಪೆಷಲಿಸ್ಟ್‌ ಮೆಡಿಕಲ್ ಆಫೀಸರ್ : 05
ಸ್ಪೆಷಲಿಸ್ಟ್‌ ಮೆಡಿಕಲ್ ಆಫೀಸರ್ : 185
ಮೆಡಿಕಲ್ ಆಫೀಸರ್ : 107

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು ಮೆಡಿಕಲ್ ಆಫೀಸರ್ ಹುದ್ದೆಗೆ ಗರಿಷ್ಠ 30 ವರ್ಷ ಮೀರಿರಬಾರದು. ಸ್ಪೆಷಲಿಸ್ಟ್‌ ಮೆಡಿಕಲ್ ಆಫೀಸರ್ ಹುದ್ದೆಗೆ ಗರಿಷ್ಠ 40 ವರ್ಷ ಮೀರಿರಬಾರದು. ಸೂಪರ್ ಸ್ಪೆಷಲಿಸ್ಟ್‌ ಮೆಡಿಕಲ್ ಆಫೀಸರ್ ಹುದ್ದೆಗೆ ಗರಿಷ್ಠ 50 ವರ್ಷ ಮೀರಿರಬಾರದು. ವರ್ಗಾವಾರು ಅಭ್ಯರ್ಥಿಗಳ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿದೆ.

ಅರ್ಜಿದಾರರು 400 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸಲು ಆರಂಭಿಕ ದಿನಾಂಕ: 15-02-2023 ಹಾಗೂ ಆನ್‌ಲೈನ್‌ ಅರ್ಜಿಗೆ ಕೊನೆ ದಿನಾಂಕ: 16-03-2023 ರ ರಾತ್ರಿ 11:59 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

ಎಸ್‌ಸಿ / ಎಸ್‌ಟಿ / ಮಾಜಿ ಸೈನಿಕ / ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದ್ದು, ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿ ಮಾಡಬಹುದು.

ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ / ಸಹಿಷ್ಣುತಾ ಪರೀಕ್ಷೆ / ದೈಹಿಕ ಸಾಮರ್ಥ್ಯ ಪರೀಕ್ಷೆ / ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿ ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್‌ ಅರ್ಜಿ ಸಲ್ಲಿಸಲು ಫೆಬ್ರುವರಿ 15 ರಂದು ಲಿಂಕ್ ಅನ್ನು ಬಿಡುಗಡೆ ಮಾಡಲಾಗುತ್ತದೆ.
ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ಅಧಿಕೃತ ವೆಬ್‌ಸೈಟ್‌ ವಿಳಾಸ https://capf.gov.in/ ಗೆ ಭೇಟಿ ನೀಡಿ.

Leave A Reply

Your email address will not be published.