PM Kisan Scheme: ಕೇಂದ್ರದಿಂದ ಬಂತು ಪಿಎಂ ಕಿಸಾನ್ ಯೋಜನೆಯ ಹಣದ ಕುರಿತು ಸ್ಪಷ್ಟನೆ!!

ರೈತರ ನೆರವಿಗೆ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಆರ್ಥಿಕ ನೆರವಿನ ಜೊತೆಗೆ ರಸಗೊಬ್ಬರ ಪೂರೈಕೆ ಮಾಡಿ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ. ಇತ್ತೀಚೆಗಷ್ಟೇ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 12ನೇ ಕಂತಿನ ಹಣ ಬಿಡುಗಡೆ ಮಾಡಿದ್ದು, ಇದೀಗ 13ನೇ ಕಂತಿಗಾಗಿ ರೈತರು ಎದುರು ನೋಡುತ್ತಿದ್ದಾರೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ವಾರ್ಷಿಕ 6,000 ರೂ ಸಹಾಯಧನದ ಬದಲಿಗೆ  ಈ ಮೊತ್ತವನ್ನು 8000 ರೂ.ಗೆ ಹೆಚ್ಚಳ ಮಾಡುವ ಕುರಿತು ಚಿಂತನೆ ನಡೆಸಲಾಗಿದೆ  ಎಂದು ಹೇಳಲಾಗುತ್ತಿತ್ತು. ಇದನ್ನು ಅಲ್ಲಗಳೆದ  ಸಚಿವ ನರೇಂದ್ರ ಸಿಂಗ್ ತೋಮರ್ ಅಂತಹ ಯಾವುದೇ ಪ್ರಸ್ತಾಪವಿಲ್ಲ ಎಂದು  ಸ್ಪಷ್ಟಪಡಿಸಿ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಈ ಬಗ್ಗೆ ಮಾಹಿತಿ ನೀಡಿದ್ದು, ಪಿಎಂ ಕಿಸಾನ್ ಯೋಜನೆ ಹಣ ಹೆಚ್ಚಳ ಮಾಡುವ ಪ್ರಸ್ತಾಪವಿಲ್ಲ.ಈ ಯೋಜನೆಯಡಿ ರೈತರಿಗೆ ವಾರ್ಷಿಕ 6,000 ರೂ. ನೀಡುತ್ತಿದ್ದು, ಅದೇ ರೀತಿ  ಮುಂದುವರೆಯಲಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

Leave A Reply

Your email address will not be published.