2,000 ಭೂ ಮಾಪಕ/ಪರವಾನಗಿ ಭೂಮಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು : ಭೂಮಾಪನ ಕಂದಾಯ ಮತ್ತು ಭೂದಾಖಲೆಗಳ ಇಲಾಖೆ ನೇಮಕಾತಿ ಅಧಿಸೂಚನೆ 2023 ಅನ್ನು ಬಿಡುಗಡೆ ಮಾಡಿದೆ. ಇಲಾಖೆಯಲ್ಲಿ 2,000 ಭೂ ಮಾಪಕ/ಪರವಾನಗಿ ಭೂಮಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪರವಾನಗಿ ಭೂಮಾಪಕ ಹುದ್ದೆಗಳಿಗೆ ಪಿಯುಸಿ ಅಥವಾ 12ನೇ ತರಗತಿ, ಬಿ.ಇ/ಬಿ.ಟೆಕ್, ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಭೂ ಮಾಪಕ/ಪರವಾನಗಿ ಭೂಮಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರ್ಜಿದಾರರು 1000/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 20,2023ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.